Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ,...

ಖುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ, ಡಿಕೆಶಿ ಕಚ್ಚಾಟ : ಸಚಿವ ಎಸ್.ಟಿ.ಸೋಮಶೇಖರ್

'ಮುಖ್ಯಮಂತ್ರಿ'ಬದಲಾವಣೆ ಪ್ರಶ್ನೆಯೇ ಇಲ್ಲ'

ವಾರ್ತಾಭಾರತಿವಾರ್ತಾಭಾರತಿ9 Nov 2020 12:55 PM IST
share
ಖುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ, ಡಿಕೆಶಿ ಕಚ್ಚಾಟ : ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು : ಕಾಂಗ್ರೆಸ್ ನಾಯಕರು ಮೊದಲು ಅವರ ನಡುವಿನ ಗೊಂದಲ ಬಗೆಹರಿಸಿಕೊಳ್ಳಲಿ. ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಪ್ರಯತ್ನ ಪಡುತ್ತಿದ್ದಾರೆ. ಶಿವಕುಮಾರ್ ಅವರನ್ನು ಕೆಳಗಿಳಿಸಲು ಸಿದ್ದರಾಮಯ್ಯ ಅವರು ಪ್ರಯತ್ನ ಪಡುತ್ತಿದ್ದಾರೆ. ಇದನ್ನು ಮುಚ್ಚಿಕೊಳ್ಳಲು ಅವರು ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಬಿಜೆಪಿಯಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರಿಗೆ ಅವರ ಖುರ್ಚಿಯನ್ನು ಉಳಿಸಿಕೊಂಡರೆ ಸಾಕು. ಹಾಗಾಗಿ ಬಿಜೆಪಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಚಿವರು ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್ ಗೆ ಭೇಟಿ ನೀಡಿದ ಸಂದರ್ಭ  ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯೆಯೇ ಪರಸ್ಪರ ಉತ್ತಮ ಬಾಂಧವ್ಯ ಇಲ್ಲ. ಒಬ್ಬರಿಗೊಬ್ಬರು ಅಧಿಕಾರವನ್ನು ಕಿತ್ತುಕೊಳ್ಳಲು ಬಡಿದಾಡುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

ರಾಜರಾಜೇಶ್ವರಿ ನಗರ, ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನೂರಕ್ಕೆ ನೂರು ಸ್ಪಷ್ಟ. ಮುನಿರತ್ನ ಅವರ ಪರ ಅಲೆ ಇರುವುದು ನಮಗೆ ಪ್ರಚಾರ ಸಂದರ್ಭದಲ್ಲಿಯೇ ಗೊತ್ತಾಗಿದೆ. ಶೇ.50ರಷ್ಟು ಮಂದಿ ಅವರ ಅಭಿವೃದ್ಧಿ ನೋಡಿ ಮತ ನೀಡಿದರೆ, ಇನ್ನು ಶೇ.50 ಮಂದಿ ಬಿಜೆಪಿ ಪಕ್ಷಕ್ಕಾಗಿ ಮತ ಚಲಾಯಿಸಿದ್ದಾರೆ. ಅಲ್ಲದೆ,  ಎರಡೂ ಕಡೆ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು. 

ಅವರ ಸೋಲಿಗೆ ಅವರೇ ಕಾಯುತ್ತಿದ್ದಾರೆ

ಈಗ ನಡೆದಿರುವ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪ ಚುನಾವಣೆ ಸೇರಿದಂತೆ ನಾಲ್ಕು ವಿಧಾನಪರಿಷತ್ ಸ್ಥಾನಗಳಲ್ಲೂ ಕಾಂಗ್ರೆಸ್ ಸೋಲಬೇಕೆಂಬುದು ಅವರ ಪಕ್ಷಗಳ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣ ಕಾಯುತ್ತಿದೆ. ಕಾರಣ, ಸೋತ ಮೇಲೆ ಪರಸ್ಪರ ಒಬ್ಬರ ಮೇಲೊಬ್ಬರು ಸೋಲಿಗೆ ಕಾರಣೀಭೂತರು ಎಂದು ಆರೋಪಿಸಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ಅವರ ಪಕ್ಷದಲ್ಲಿಯೇ ನಡೆಯುತ್ತಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X