Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮಕ್ಕೆ ನುಗ್ಗಿ ಗುಂಡು ಹಾರಾಟ: ಕನ್ನಡ...

ಗ್ರಾಮಕ್ಕೆ ನುಗ್ಗಿ ಗುಂಡು ಹಾರಾಟ: ಕನ್ನಡ ಚಳವಳಿ ವೇದಿಕೆ ರಾಜ್ಯಾಧ್ಯಕ್ಷ ಸೇರಿ 7 ಮಂದಿ ಬಂಧನ

ವಾರ್ತಾಭಾರತಿವಾರ್ತಾಭಾರತಿ9 Nov 2020 9:33 PM IST
share
ಗ್ರಾಮಕ್ಕೆ ನುಗ್ಗಿ ಗುಂಡು ಹಾರಾಟ: ಕನ್ನಡ ಚಳವಳಿ ವೇದಿಕೆ ರಾಜ್ಯಾಧ್ಯಕ್ಷ ಸೇರಿ 7 ಮಂದಿ ಬಂಧನ

ಮೈಸೂರು,ನ.9: ಕ್ಷುಲ್ಲಕ ಕಾರಣಕ್ಕೆ ಸಿನಿಮೀಯ ರೀತಿಯಲ್ಲಿ ಗ್ರಾಮಕ್ಕೆ ನುಗ್ಗಿ ಗಲಾಟೆ ಮಾಡಿ ಗುಂಡು ಹಾರಿಸಿ ಗ್ರಾಮಸ್ಥರನ್ನು ಭಯಗೊಳಿಸಿದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ.

ಮೈಸುರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಹೋಬಳಿಯ ಬಿಲ್ಲಹಳ್ಳಿ ಗ್ರಾಮದಲ್ಲಿ ಗುರುಲಿಂಗಪ್ಪ ಕುಟುಂಬ ಮತ್ತು ಚನ್ನಬಸವಪ್ಪ ಕುಟುಂಬದ ನಡುವೆ ಮನೆಯ ಗಲ್ಲಿ ವಿಚಾರದಲ್ಲಿ ಗಲಾಟೆ ನಡೆದು ಗ್ರಾಮದಲ್ಲಿ ನ್ಯಾಯ ಪಂಚಾಯಿತಿ ನಡೆದಿತ್ತು. ಆದರೆ ಸಮಸ್ಯೆ ಬಗೆಹರಿಯದೆ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ.

ಈ ನಡುವೆ ಚನ್ನಬಸವಪ್ಪ ಮತ್ತು ಅವರ ಮೊಮ್ಮಗಳ ಗಂಡ ಸುನಿಲ್ ಕುಮಾರ್ ತನ್ನ ಸ್ನೇಹಿತರನ್ನು ಗ್ರಾಮಕ್ಕೆ ಕರೆತಂದು ಗುರುಲಿಂಗಪ್ಪ ಕುಟುಂಬದೊಂದಿಗೆ ಗಲಾಟೆ ಮಾಡಲು ಮುಂದಾಗಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಈತನೊಂದಿಗೆ ಬಂದಿದ್ದ ಕರ್ನಾಟಕ ಚಳವಳಿ ವೇದಿಕೆ ಅಧ್ಯಕ್ಷ ಬೆಂಗಳೂರು ಮೂಲದ ಎಂ.ಮಧುಗೌಡ ಮತ್ತು ಈತನ ಸಹಚರರು ಗುರುಲಿಂಗಪ್ಪ ಕುಟುಂಬದೊಂದಿಗೆ ಗಲಾಟೆಗೆ ಮುಂದಾಗಿದ್ದು ಇದನ್ನು ಪ್ರಶ್ನಿಸಿದ ಗ್ರಾಮಸ್ಥರನ್ನು ಬೆದರಿಸಲು ಗುಂಡು ಹಾರಿಸಿದ್ದಾರೆ. ಇದರಿಂದ ಭಯಗೊಂಡ ಗ್ರಾಮಸ್ಥರು ಅವರು ಬಂದಿದ್ದ ವಾಹನಗಳನ್ನು ತಡೆದು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಏಳು ಮಂದಿಯನ್ನು ಬಂಧಿಸಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಬಿಲ್ಲಹಳ್ಳಿ ಗ್ರಾಮದ ಬಿ.ಎಂ.ಚನ್ನಬಸಪ್ಪ, ಈತನ ಮೊಮ್ಮಗಳ ಗಂಡ ಬಿ.ಎನ್.ಸುನಿಲ್ ಕುಮಾರ್, ಸ್ಪೀಡ್ ನ್ಯೂಸ್ ಕನ್ನಡ ಚಾನಲ್ ಮಾಲಕ ಮತ್ತು ಕನ್ನಡ ಚಳವಳಿ ವೇದಿಕೆ ರಾಜ್ಯಾಧ್ಯಕ್ಷ ಬೆಂಗಳೂರು ಗ್ರಾಮದ ಎಂ.ಮಧುಗೌಡ, ಬೆಂಗಳೂರಿನವರಾದ ಯಾಸೀನ್, ಎಂ.ಪುನೀತ್ ಕುಮಾರ್, ಸಚಿನ್, ಬಿ.ಡಿ.ಪುನೀತ ಎಂಬ ಏಳು ಮಂದಿಯನ್ನು ಬಂಧಿಸಿದ್ದಾರೆ. ಇವರೊಂದಿಗೆ ಬಂದಿದ್ದ ಗನ್ ಮ್ಯಾನ್ ಮತ್ತು ಇತರರು ಪರಾರಿಯಾಗಿದ್ದಾರೆ.

ಬಂಧಿತರಿಂದ 11 ಸಜೀವ ಗುಂಡುಗಳು ಮತ್ತು 2 ಖಾಲಿ ಗುಂಡುಗಳು, 2 ಫಾರ್ಚೂನರ್ ಕಾರು, 1 ಮಹೇಂದ್ರ ಸ್ಕಾರ್ಪಿಯೋ ವಾಹನವನ್ನು ವಶಪಡಿಕೊಳ್ಳಲಾಗಿದೆ.

ಏಕಾಏಕಿ ಗ್ರಾಮಕ್ಕೆ ನುಗ್ಗಿ ಗಲಾಟೆ ಮಾಡಿರುವುದಲ್ಲದೆ, ಗುಂಡು ಹಾರಿಸಿ ಗ್ರಾಮಸ್ಥರನ್ನು ಭಯಭೀತಗೊಳಿಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನೂರಾರು ಮಂದಿ ಬಿಲ್ಲಹಳ್ಳಿ ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಸೇರಿ, ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಲ್ಲಹಳ್ಳಿ ಗ್ರಾಮದ ಗುರುಲಿಂಗಪ್ಪ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣದ ದಾಖಲಿಸಿಕೊಳ್ಳಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಸುಂದರ್ರಾಜ್, ಸರ್ಕಲ್ ಇನ್‍ಸ್ಪೆಕ್ಟರ್ ಬಿ.ಆರ್.ಪ್ರದೀಪ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X