ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಗೆ ನ.12ರಿಂದ ನಾಮಪತ್ರ ಸಲ್ಲಿಕೆ ಆರಂಭ

ಕಾಸರಗೋಡು, ನ.11: ಸ್ಥಳೀಯಾಡಳಿತ ಸಂಸ್ಥೆಗಳಿಗೆ ಡಿ.8, 10, 14ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನ.12ರಂದು ಆರಂಭಗೊಳ್ಳಲಿದೆ. ನ.19 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ನ.20ರಂದು ನಾಮಪತ್ರಗಳ ಸೂಕ್ಷ್ಮ ಪರಿಶೀಲನೆ ನಡೆಯಲಿದೆ. ನ.23ರಂದು ನಾಮಪತ್ರ ಹಿಂದೆಗೆಯಲು ಕೊನೆಯ ದಿನವಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಡಿ14ರಂದು ಕಾಸರಗೋಡು ಜಿಲ್ಲೆಯಲ್ಲಿ ಚುನಾವಣೆ ನಡೆಯಲಿದ್ದು, ಡಿ16ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಜಿಲ್ಲಾ, ಬ್ಲಾಕ್ , ಗ್ರಾಮ ಪಂಚಾಯತ್, ನಗರಸಭೆ, ನಗರಪಾಲಿಕೆಗೆ ಚುನಾವಣೆ ನಡೆಯಲಿದೆ.
ಕಾಸರಗೋಡು ಜಿಲ್ಲೆಯ 38 ಗ್ರಾಮ ಪಂಚಾಯತ್, ಮೂರು ನಗರಸಭೆ, ಆರು ಬ್ಲಾಕ್ ಪಂಚಾಯತ್, ಜಿಲ್ಲಾ ಪಂಚಾಯತ್ ಗೆ ಚುನಾವಣೆ ನಡೆಯಲಿದೆ.
Next Story