ಸತೀಶ್ ಜಾರಕಹೊಳಿ ಉಡುಪಿಗೆ
ಉಡುಪಿ, ನ.12: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸತೀಶ್ ಜಾರಕಹೊಳಿ ಅವರು ನ. 14ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿ ಸಲಿದ್ದಾರೆ.
ಸತೀಶ್ ಜಾರಕಹೊಳಿ ಅವರು ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿದ್ದು, ಅವರ ಉಪಸ್ಥಿತಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story