ವಿನಯ ಕುಲಕರ್ಣಿ ಜಾಮೀನು ಕೋರಿ ಅರ್ಜಿ: ಸಿಬಿಐಗೆ ಕೋರ್ಟ್‍ನಿಂದ ನೋಟಿಸ್ ಜಾರಿ
ಧಾರವಾಡ, ನ.12: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್‍ಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಧಾರವಾಡದ 3ನೆ ಹೆಚ್ಚುವರಿ ಸೆಷನ್ಸ್ ಕೋರ್ಟ್ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.
ಜಾಮೀನು ಕೋರಿ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಈ ಆದೇಶ ನೀಡಿದೆ.
ಯೋಗೀಶ್‍ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ನ.5ರಂದು ಬಂಧಿಸಲಾಗಿತ್ತು. ಬಳಿಕ ಕುಲಕರ್ಣಿ ಅವರಿಗೆ ಧಾರವಾಡದ ಸಿಬಿಐ ವಿಶೇಷ ಕೋರ್ಟ್ ನ.23ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತ್ತು.
ಕುಲಕರ್ಣಿ ಅವರ ವಿರುದ್ಧ ಐಪಿಸಿ ಸೆಕ್ಷನ್ 302, 143, 147, 148, 120ಬಿ ಅಡಿ ಕೇಸ್ ದಾಖಲಾಗಿದೆ. ನ.12ರಂದು ವಕೀಲರ ವಾದ ಆಲಿಸಿದ ನ್ಯಾಯಪೀಠವು ಸಿಬಿಐಗೆ ತಕರಾರು ಅರ್ಜಿ ಸಲ್ಲಿಸಲು ಸೂಚಿಸಿದೆ.
Next Story