ಮುಂದಿನ ಮೇ ತಿಂಗಳೊಳಗೆ ಪರ್ಕಳ ರಸ್ತೆ ಕಾಮಗಾರಿ ಪೂರ್ಣ: ರಘುಪತಿ ಭಟ್
ಉಡುಪಿ, ನ.12: ಕೋವಿಡ್-19 ಲಾಕ್ಡೌನ್ನಿಂದ ಪರ್ಕಳ ರಾ.ಹೆ. ಕಾಮಗಾರಿಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾಗಿದ್ದು, ಇದ ರಿಂದ ರಸ್ತೆ ಕಾಮಗಾರಿಗೆ ತಡೆಯಾಗಿದೆ. ಈ ಎಲ್ಲಾ ಪ್ರಕ್ರಿಯೆಗಳನ್ನು ಶೀಘ್ರವಾಗಿ ಮುಗಿಸಿ ಮುಂದಿನ 2021ರ ಮೇ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸ ಲಾಗುವುದು ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಕಳೆದ ಫೆಬ್ರವರಿ ತಿಂಗಳಿನಲ್ಲಿ ರಾ.ಹೆ.ಅಧಿಕಾರಿಗಳು ಸೇರಿದಂತೆ ಭೂಮಾಲಕ ರೊಂದಿಗೆ ಸಭೆ ನಡೆಸಿ ತಕ್ಷಣ ಕಾಮಗಾರಿ ಪೂರ್ಣಗೊಳಿಸಲು ಜಾಗ ಬಿಟ್ಟು ಕೊಡುವಂತೆ ವಿನಂತಿಸಲಾಗಿತ್ತು. ಆದರೆ ಸಭೆಯಲ್ಲಿ ಯಾವುದೇ ಭೂಮಾಲಕರು ಪರಿಹಾರದ ಹಣ ಪಾವತಿಯಾಗದ ಜಾಗ ಬಿಟ್ಟುಕೊಡಲು ಒಪ್ಪಿಗೆ ಸೂಚಿಸಿ ರುವುದಿಲ್ಲ. ಇದೀಗ ಬೆಂಗಳೂರಿನಲ್ಲಿ ನಡೆದ ಸಭೆಯ ಫಲಶ್ರುತಿಯಂತೆ ಜ.15 ರೊಳಗೆ ಭೂಸ್ವಾಧೀನ ಪ್ರಕ್ರಿಯೆ ಯನ್ನು ಮುಗಿಸಿ ಎಲ್ಲಾ ಭೂ ಮಾಲಕರಿಗೆ ಗರಿಷ್ಠ ಮಟ್ಟದ ಪರಿಹಾರದ ಮೊತ್ತವನ್ನು ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಈ ರಸ್ತೆಯ ಬಗ್ಗೆ ಪ್ರತಿಭಟನೆ ಮಾಡುವ ಯಾವುದೇ ನೈತಿಕ ಹಕ್ಕಿಲ್ಲ. ಕಾಂಗ್ರೆಸ್ ಈ ರಸ್ತೆ ಯೋಗ್ಯವೋ ಎಂಬ ಅರಿವಿಲ್ಲದೆ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮಾಡಿದೆ. ಇದರಿಂದ ಇಂದಿಗೂ ರಸ್ತೆಯ ಇಕ್ಕೆಲಗಳಲ್ಲಿರುವ ಜನ ಒದ್ದಾಟ ನಡೆಸುವಂತಾಗಿದೆ. ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಅನು ದಾನ ನೀಡಿದ್ದು ಬಿಜೆಪಿ ಸರಕಾರ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.