ಬಂಟ್ವಾಳ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷೆಗೆ ಸನ್ಮಾನ, ಕಾರ್ಯಕರ್ತರ ಸಮಾವೇಶ

ಬಂಟ್ವಾಳ, ನ.14: ಇಲ್ಲಿನ ಪುರಸಭೆಯ ನೂತನ ಅಧ್ಯಕ್ಷ ಮುಹಮ್ಮದ್ ಶರೀಫ್ ಮತ್ತು ಉಪಾಧ್ಯಕ್ಷೆ ಜೆಸಿಂತಾ ಡಿಸೋಜ ಅವರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಬಿ.ಸಿ.ರೋಡ್ ಸಮೀಪದ ಗೂಡಿನಬಳಿ ಸಭಾ ಭವನದಲ್ಲಿ ಶುಕ್ರವಾರ ನಡೆಯಿತು.
ನೂತನ ಅಧ್ಯಕ್ಷ, ಉಪಾಧ್ಯಕ್ಷೆಯನ್ನು ಸನ್ಮಾನಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಮುಂದೆ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆಯಲಿದ್ದು ಕಾರ್ಯಕರ್ತರು ಈಗಾಗಲೇ ತಯಾರಿಯನ್ನು ನಡೆಸಬೇಕು. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ನಡೆದ ಅಭಿವೃದ್ಧಿ ಕೆಲಸಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಆರಂಭಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮುಹಮ್ಮದ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಇರಾ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಝಕ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ನಂದಾವರ, ಪುರಸಭಾ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಲೋಲಕ್ಷ, ಗೂಡಿನಬಳಿ ಜುಮಾ ಮಸೀದಿಯ ಅಧ್ಯಕ್ಷ ಜಿ.ಅಬ್ದುಲ್ ಮಜೀದ್, ಕಾರ್ಯದರ್ಶಿ ಮುಹಮ್ಮದ್ ಅಸ್ಲಮ್, ಗೂಡಿನಬಳಿ ವಲಯ ಕಾಂಗ್ರೆಸ್ ಅಧ್ಯಕ್ಷ ಕರೀಂ, ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಲ್ ಖಾದರ್, ಫರ್ವೀಝ್ ಜಿ.ಕೆ., ಕಾಸಿಮ್, ಯುವ ಕಾಂಗ್ರೆಸ್ ಘಟಕ ರಿಝ್ವಾನ್ ಗೂಡಿನಬಳಿ, ಅಮೀನ್, ಸಂಶೀರ್ ಮೊದಲಾದವರು ಉಪಸ್ಥಿತರಿದ್ದರು.










