Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಗತ್ತಿನ ಅತಿದೊಡ್ಡ ಸಹಕಾರ ಸಂಸ್ಥೆ...

ಜಗತ್ತಿನ ಅತಿದೊಡ್ಡ ಸಹಕಾರ ಸಂಸ್ಥೆ ಹೊಂದಿರುವ ಕೀರ್ತಿ ಭಾರತಕ್ಕೆ ಸಲ್ಲುತ್ತದೆ : ಸಿಎಂ ಯಡಿಯೂರಪ್ಪ

67ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ14 Nov 2020 2:19 PM IST
share
ಜಗತ್ತಿನ ಅತಿದೊಡ್ಡ ಸಹಕಾರ ಸಂಸ್ಥೆ ಹೊಂದಿರುವ ಕೀರ್ತಿ ಭಾರತಕ್ಕೆ ಸಲ್ಲುತ್ತದೆ : ಸಿಎಂ ಯಡಿಯೂರಪ್ಪ

ಬೆಂಗಳೂರು: ಸಹಕಾರ ವ್ಯವಸ್ಥೆ ಒಂದು ಆರ್ಥಿಕ ವ್ಯವಸ್ಥೆಯಾಗಿದೆ. ಇದು ಆರ್ಥಿಕವಾಗಿ ಅಬಲರಾದವರ ಏಳಿಗೆಗೆ ನಿರಂತರವಾಗಿ ಶ್ರಮಿಸುತ್ತಾ ಬಂದಿದೆ. ಭಾರತದಲ್ಲಿ ಸಹಕಾರಿಗಳು ನಿಷ್ಠೆಯಿಂದ ಪ್ರತಿವರ್ಷ ಸಪ್ತಾಹವನ್ನು ಆಚರಿಸಿಕೊಂಡು ಬಂದಿದ್ದಾರೆ. ಈ ಬಾರಿ ಸಪ್ತಾಹದ ಧ್ಯೇಯ “ಕೊರೋನ ಸೋಂಕು - ಆತ್ಮನಿರ್ಭರ ಭಾರತ - ಸಹಕಾರ ಸಂಸ್ಥೆಗಳು” ಎಂಬುದಾಗಿದೆ. ನಾಗರಿಕರಿಗೆ ಸ್ಪಂದಿಸಿ ಆರ್ಥಿಕ ಬಲ ತುಂಬುವುದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.

ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ಆಯೋಜಿಸಲಾಗಿದ್ದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ 2020ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಲಾಕ್ಡೌನ್ ಸಂದರ್ಭದಲ್ಲಿ ಈಗಾಗಲೇ ರಾಜ್ಯದ ಸಹಕಾರ ಇಲಾಖೆ ಮತ್ತು  ಸಹಕಾರ ಸಂಸ್ಥೆಗಳು ಬಡಜನರಿಗೆ, ವಲಸೆ ಕಾರ್ಮಿಕರಿಗೆ, ದುರ್ಬಲ ವರ್ಗಗಳ ಜನರಿಗೆ ಆಹಾರ ವಿತರಣೆ, ದವಸಧಾನ್ಯಗಳ ವಿತರಣೆ, ತರಕಾರಿ ವಿತರಣೆಗೆ ಸಹಾಯ ಮಾಡಿವೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರ ಮುಂದಾಳತ್ವದಲ್ಲಿ 53 ಕೋಟಿ ರೂ.ಗಳಿಗೂ ಅಧಿಕ ಮೊತ್ತವನ್ನು ದೇಣಿಗೆಯಾಗಿ ನೀಡಿರುವುದಕ್ಕೆ ನಾನು ವೈಯಕ್ತಿಕವಾಗಿ ಮತ್ತು ಸರ್ಕಾರದ ಪರವಾಗಿ ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಹಾಗೆಯೇ, ಸಹಕಾರ ಸಚಿವರಾದ ಸೋಮಶೇಖರ್ ಅವರ ಮಾರ್ಗದರ್ಶನದಲ್ಲಿ ರಾಜ್ಯದ 42,524 ಆಶಾ ಕಾರ್ಯಕರ್ತೆಯರಿಗೆ ತಲಾ 3,000 ರೂ.ಗಳಂತೆ ಒಟ್ಟು 12.75 ಕೋಟಿ ರೂ. ಗಳ ಪ್ರೋತ್ಸಾಹಧನವನ್ನು ಸಹಕಾರ ಸಂಸ್ಥೆಗಳು ವಿತರಿಸಿರುವುದು ಕೂಡ ಇಡೀ ದೇಶಕ್ಕೆ ಮಾದರಿ ಎನಿಸಿದ್ದು, ಶೇಕಡಾ 100 ರಷ್ಟು ಗುರಿ ಸಾಧನೆ ಮಾಡಿರುವುದು ಕೂಡ ಹೆಮ್ಮೆಯ ವಿಚಾರವಾಗಿದೆ ಎಂದು ಹೇಳಿದರು.

ಆರ್ಥಿಕ ಸ್ವಾವಲಂಬನೆಗೆ ನೆರವು

ಕೋವಿಡ್-19ರ ಸಂಕಷ್ಟದ ಸಂದರ್ಭದಲ್ಲಿರೈತರಿಗೆ ಕೃಷಿ ಸಾಲ ಒದಗಿಸಲು ಕೇಂದ್ರ ಸರ್ಕಾರವು“Special Liquidity Facility” ಅಡಿಯಲ್ಲಿ 1700 ಕೋಟಿ ರೂ.ಗಳನ್ನು ನಬಾರ್ಡ್ ಮೂಲಕ ಡಿಸಿಸಿ ಬ್ಯಾಂಕುಗಳಿಗೆ ನೀಡಲಾಗಿದ್ದು, ರೈತರ ಸಂಕಷ್ಟದ ಸಮಯದಲ್ಲಿ ಕೃಷಿಗೆ ಅವಶ್ಯಕವಾದ ಸಾಲವನ್ನು ಒದಗಿಸಲಾಗಿದೆ. ಇದರಿಂದ ಸಹಕಾರ ಸಂಸ್ಥೆಗಳ ಸದಸ್ಯರುಗಳು ಕಿಸಾನ್ ಕ್ರೆಡಿಟ್ಕಾರ್ಡ್ (ರೂಪೇಕಾರ್ಡ್) ಮೂಲಕ ಆರ್ಥಿಕ ನೆರವು ಪಡೆದು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ನೆರವಾಗಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಕೋವಿಡ್ ನಿರ್ವಹಣೆಯಲ್ಲಿ ಮುಖ್ಯಮಂತ್ರಿಗಳ ಪಾತ್ರ ದೊಡ್ಡದು; ಎಸ್.ಟಿ.ಎಸ್.

ಕೋವಿಡ್ 19 ಬಂದ ಸನ್ನಿವೇಶದಲ್ಲಿ ಕೇಂದ್ರ ಸರ್ಕಾರ ನೀಡಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ರಾಜ್ಯದಲ್ಲಿ ಆರೋಗ್ಯದ ದೃಷ್ಟಿ ಯಿಂದ ಬೇಕಾದ ಕ್ರಮಗಳನ್ನು ತೆಗೆದುಕೊಂಡು ಕೊರೋನ ನಿಯಂತ್ರಣ ಮಾಡುವಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ಸಹಕಾರ ಇಲಾಖೆ ಮೂಲಕ ಬಡವರ ಬಂಧು ಮೂಲಕ ಸಾಲ ವಿತರಣೆಯನ್ನು ಸಮರ್ಪಕವಾಗಿ ಜಾರಿ ಮಾಡಲಾಗಿತ್ತಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ ಸಹ ಶೂನ್ಯ ಬಡ್ಡಿದರದಲ್ಲಿ ಸಾಲಗಳನ್ನು ವಿತರಣೆ ಮಾಡಿದ್ದೇವೆ ಎಂದು ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಕೈಪಿಡಿ ಬಿಡುಗಡೆ

ಸಹಕಾರ ಇಲಾಖೆಯ ಮಹಾಮಂಡಳದ ಕಾರ್ಯಚಟುವಟಿಕೆಗಳ ಕೈಪಿಡಿಯನ್ನು ಕಂದಾಯ ಸಚಿವರಾದ ಆರ್.ಅಶೋಕ್ ಅವರು ಹಾಗೂ ಸಹಕಾರ ಪತ್ರಿಕೆಯ ವಿಶೇಷ ಸಂಚಿಕೆಯನ್ನು ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜು ಬಿಡುಗಡೆಗೊಳಿಸಿದರು.

ಕಂದಾಯ ಸಚಿವರಾದ ಆರ್. ಅಶೋಕ್, ನಗರಾಭಿವೃದ್ಧಿ ಸಚಿವರಾದ ಬಿ.ಎ. ಬಸವರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗಳಾದ ಎಸ್.ಆರ್.ವಿಶ್ವನಾಥ್, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಸಹಕಾರ ಸಂಘಗಳ ನಿಂಬಂಧಕರಾದ ಎಸ್. ಜಿಯಾಉಲ್ಲಾ ಸೇರಿದಂತೆ ಹಿರಿಯ ಸಹಕಾರಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. 

ಸಹಕಾರ ರತ್ನ ಪ್ರಶಸ್ತಿ ಪ್ರದಾನ

ಇದೇ ವೇಳೆ ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿಯನ್ನು ಮುಖ್ಯಮಂತ್ರಿಗಳು  ಪ್ರದಾನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X