ಮಂಗಳೂರು : ಕೋವಿಡ್ ಜಾಗೃತಿ ಜಾಥಾ ವಾಹನಕ್ಕೆ ಚಾಲನೆ

ಮಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೋವಿಡ್ ಜಾಗೃತಿ ಜಾಥಾ ವಾಹನಕ್ಕೆ ಮಂಗಳೂರು ಮಹಾನಗರ ಪಾಲಿಕೆ ಆವರಣದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, "ಕೋವಿಡ್ ಹರಡದಂತೆ ಮುಂಜಾಗೃತೆ ಕುರಿತ ಸರಕಾರದ ಸೂಚನೆಗಳನ್ನ ನಾವು ಅನುಸರಿಸಬೇಕಿದೆ. ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸಲು ಜಾಗೃತಿ ಜಾಥಾ ವಾಹನದಿಂದ ಸಾಧ್ಯವಾಗಲಿ" ಎಂದರು.
ಬೃಹತ್ ಎಲ್ಇಡಿ ಪರದೆ ಹೊಂದಿರುವ ಜಾಗೃತಿ ಜಾಥಾ ವಾಹನವು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 180 ಗ್ರಾಮಗಳಿಗೆ ಸಂಚರಿಸಿ ಜಾಗೃತಿ ಮೂಡಿಸಲಿದೆ ಎಂದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಾರ್ತಾ ಇಲಾಖೆಯ ಸಿಬ್ಬಂದಿ ಮತ್ತಿತ್ತರರು ಉಪಸ್ಥಿತರಿದ್ದರು.
.jpeg)
Next Story





