Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರವಾಹ, ಮಳೆಯಿಂದ 12,093 ಮನೆಗಳಿಗೆ...

ಪ್ರವಾಹ, ಮಳೆಯಿಂದ 12,093 ಮನೆಗಳಿಗೆ ಹಾನಿ: ಡಿಸಿಎಂ ಕಾರಜೋಳ

ವಾರ್ತಾಭಾರತಿವಾರ್ತಾಭಾರತಿ14 Nov 2020 7:14 PM IST
share
ಪ್ರವಾಹ, ಮಳೆಯಿಂದ 12,093 ಮನೆಗಳಿಗೆ ಹಾನಿ: ಡಿಸಿಎಂ ಕಾರಜೋಳ

ಬಾಗಲಕೋಟೆ, ನ.14: ಕಳೆದ ವರ್ಷ ಹಾಗೂ ಪ್ರಸಕ್ತ ವರ್ಷದ ಪ್ರವಾಹ ಮತ್ತು ಮಳೆಯಿಂದಾಗಿ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 12093 ಮನೆಗಳು ಹಾನಿಗೀಡಾಗಿವೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ನಗರದ ನೂತನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಾನಿಗೊಳಗಾದ ಮನೆಗಳಲ್ಲಿ ಎ ಕೆಟಗರಿಯಲ್ಲಿ 577, ಬಿ ಕೆಟಗರಿಯಲ್ಲಿ 2719 ಹಾಗೂ ಸಿ ಕೆಟಗರಿಯಲ್ಲಿ 8797 ಮನೆಗಳು ಎಂದು ಗುರುತಿಸಲಾಗಿದೆ. ಈ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ. ಹಾನಿಗೊಳಗಾದ ಕುಟುಂಬಗಳಿಗೆ ಈಗಾಗಲೇ 154 ಕೋಟಿ ರೂ.ಗಳ ಪರಿಹಾರಧನ ವಿತರಿಸಲಾಗಿದೆ ಎಂದರು.

ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಬೆಳೆ ಸೇರಿದಂತೆ ಒಟ್ಟು 1,12,525 ಹೆಕ್ಟೇರ್ ಪ್ರದೇಶ ಹಾನಿಯಾಗಿದ್ದು, ಈಗಾಗಲೇ 7.21 ಕೋಟಿ ರೂ.ಗಳನ್ನು 89,829 ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ 128 ಕಿ.ಮೀ ರಾಜ್ಯ ಹೆದ್ದಾರಿ, 309 ಕಿ.ಮೀ ಜಿಲ್ಲಾ ಮುಖ್ಯ ರಸ್ತೆ, 54 ಬ್ರಿಡ್ಜ್ ಹಾಗೂ ಬಾಂದಾರಗಳು ಹಾನಿಗೀಡಾಗಿದ್ದು, ಸರಕಾರದಿಂದ 25 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಪೈಕಿ 26 ಕಾಮಗಾರಿಗಳನ್ನು ಪ್ರಾರಂಭಿಸಿರುವುದಾಗಿ ಅವರು ತಿಳಿಸಿದರು.

ಪಂಚಾಯರ ರಾಜ್ ಇಲಾಖೆಯಿಂದ 1448 ಕಿ.ಮೀ ರಸ್ತೆ, 29 ಕುಡಿಯುವ ನೀರಿನ ಯೋಜನೆಗಳು ಹಾಗೂ 34 ಬ್ರಿಡ್ಜ್ ಹಾಗೂ ಬಾಂದಾರುಗಳು ಹಾನಿಯಾಗಿವೆ. ಜಿಲ್ಲೆಯ 5 ತಾಲೂಕುಗಳಲ್ಲಿ ಒಟ್ಟು 117 ಕೈಮಗ್ಗದ ಉಪಕರಣ ಹಾಗೂ ಸಾಮಗ್ರಿಗಳು ಹಾನಿಯಾಗಿದ್ದು, ಅದಕ್ಕಾಗಿ 7 ಲಕ್ಷಗಳ ಪರಿಹಾರವನ್ನು ಪಾವತಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಕಳೆದ ಒಂದು ವರ್ಷ ರಾಜ್ಯದಲ್ಲಿ ಪ್ರವಾಹ, ಮಳೆ ಹಾಗೂ ಕೊರೋನದಿಂದ ಸಾಕಷ್ಟು ಹಾನಿ ಉಂಟಾಗಿದ್ದು, 11 ತಿಂಗಳ ರಾಜ್ಯಕ್ಕೆ ಬರಬೇಕಾದ ಆದಾಯ ಬರುತ್ತಿಲ್ಲ. ಸರಕಾರಕ್ಕೆ ಬರುವ ನಿಗದಿತ ಆದಾಯ ಬರುತ್ತಿಲ್ಲ. ಶೇ.30ಕ್ಕಿಂತ ಹೆಚ್ಚಿನ ಆದಾಯ ಬಂದಿರುವದಿಲ್ಲ. ಇದರಿಂದ ಅಭಿವೃದ್ದಿಗೆ ಹಿನ್ನಡೆಯಾಗಿದೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

ಪ್ರವಾಹ, ನೆರೆ ಹಾಗೂ ಕೋವಿಡ್ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಸಮರ್ಥವಾಗಿ ನಿಭಾಯಿಸಿದ್ದಾರೆ. ಬೇರೆ ರಾಜ್ಯದಲ್ಲಿ ಸರಕಾರಿ ನೌಕರರಿಗೆ ಸಂಬಳ ನಿಲ್ಲಿಸಿದ್ದಾರೆ. ಆದರೆ ರಾಜ್ಯದಲ್ಲಿ ಸರಕಾರಿ ನೌಕರರ ಸಂಬಳ ನಿಲ್ಲಿಸದೇ ನೀಡಿದ್ದಾರೆ. ಕೋವಿಡ್-19 ಸೋಂಕು ತಡೆಗಟ್ಟಲು ಹಾಗೂ ಕಡಿಮೆ ಮಾಡಲು ಎಲ್ಲ ರೀತಿಯಿಂದ ಕ್ರಮಕೈಗೊಂಡಿದ್ದಾರೆ. ಬರುವ ಜನವರಿ ಮಾಹೆಯಲ್ಲಿ ಕೋವಿಡ್-19ಗೆ ಸಲಿಕೆ ಕೂಡ ಬರಲಿದ್ದು, ಎಲ್ಲರಿಗೂ ನೀಡುವ ವ್ಯವಸ್ಥೆ ಮಾಡಲಾಗುವುದೆಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿ.ಪಂ ಸಿಇಓ ಟಿ.ಭೂಬಾಲನ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X