ಬೆಂಗಳೂರಿನ ಕಾರ್ಖಾನೆಯಲ್ಲಿ ಅಗ್ನಿ ದುರಂತ ಪ್ರಕರಣ: ಗಾಯಾಳು ಕಾರ್ಮಿಕ ಮೃತ್ಯು

File Photo
ಬೆಂಗಳೂರು, ನ.14: ರೇಖಾ ಕಾರ್ಖಾನೆಯ ಅಗ್ನಿ ದುರಂತ ಪ್ರಕರಣ ಸಂಬಂಧ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಮೈಸೂರು ರಸ್ತೆಯ ಹೊಸ ಗುಡ್ಡದಳ್ಳಿ ಗೋಡೌನ್ ಅಗ್ನಿ ಅವಘಡದಲ್ಲಿ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದ್ದ ಫ್ಯಾಕ್ಟರಿಯಲ್ಲಿ ಕಾರ್ಮಿಕನಾಗಿದ್ದ ಬಿಜಯ್ ಸಿಂಗ್(30) ಎಂಬಾತ ಮೃತಪಟ್ಟಿರುವುದಾಗಿ ಪೊಲೀಸರು ಗುರುತಿಸಿದ್ದಾರೆ.
ಘಟನೆಯಲ್ಲಿ ತೀವ್ರ ಗಾಯಗಳಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ.
ಘಟನೆ ಹಿನ್ನೆಲೆ: ಇತ್ತೀಚಿಗೆ ಮೈಸೂರು ರಸ್ತೆಯ ರೇಖಾ ಕಾರ್ಖಾನೆಯಲ್ಲಿ ಬೆಂಕಿ ಹತ್ತಿಕೊಂಡಿತ್ತು. ಈ ವೇಳೆ ಬಿಜಯ್ ಸಿಂಗ್ಗೆ ಗಾಯವಾಗಿತ್ತು. ಸದ್ಯ ಕಾರ್ಖಾನೆ ಮಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಮಿಕ ಸಾವನ್ನಪ್ಪಿದ ಹಿನ್ನೆಲೆ ಪ್ರಕರಣ ಗಂಭೀರತೆ ಪಡೆದುಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Next Story





