Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಲ ನೀಡುವಲ್ಲಿ ಸಹಕಾರಿ ಬ್ಯಾಂಕ್ ಗಳು...

ಸಾಲ ನೀಡುವಲ್ಲಿ ಸಹಕಾರಿ ಬ್ಯಾಂಕ್ ಗಳು ನಂಬರ್ ವನ್: ಸಚಿವ ಸೋಮಶೇಖರ್

ರಾಜ್ಯ ಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ15 Nov 2020 12:21 PM IST
share
ಸಾಲ ನೀಡುವಲ್ಲಿ ಸಹಕಾರಿ ಬ್ಯಾಂಕ್ ಗಳು ನಂಬರ್ ವನ್: ಸಚಿವ ಸೋಮಶೇಖರ್

ಮಂಗಳೂರು, ನ.15: ಸಹಕಾರಿ ಬ್ಯಾಂಕ್‌ಗಳಲ್ಲಿ ಹಣ, ಒಡವೆಗಳನ್ನು ಇರಿಸಿದವರಿಗೆ ಮೋಸವಾಗದಂತೆ ಕ್ರಮ ವಹಿಸುವ ಜತೆಯಲ್ಲೇ ಯಾವುದೇ ದಾಖಲೆಗಳಿಲ್ಲದೆ ಸಾಲ ನೀಡುವ ಬ್ಯಾಂಕ್‌ಗಳ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮವನ್ನೂ ವಹಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ರವಿವಾರ ರಾಜ್ಯ ಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕರ್ನಾಟಕದ 280 ಸಹಕಾರಿ ಬ್ಯಾಂಕುಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾಲ ನೀಡಿಕೆ ಹಾಗೂ ವಸೂಲಾತಿಯಲ್ಲೂ ನಂಬರ್ ವನ್ ಸ್ಥಾನದಲ್ಲಿವೆ. ಆದರೆ ಯಾವುದೋ ಒಂದು ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ನಡೆದ ಮೋಸಕ್ಕೆ ಎಲ್ಲ ಸಹಕಾರಿ ಬ್ಯಾಂಕ್‌ಗಳನ್ನು ಹೊಣೆಯಾಗಿಸಲಾಗದು. ಮೋಸ, ವಂಚನೆ ನಡೆದಿರುವ ಬ್ಯಾಂಕ್‌ನ ಸಂಬಂಧಪಟ್ಟವರನ್ನು ಜೈಲಿಗಟ್ಟುವ ಕೆಲಸವನ್ನು ಮಾಡಲಾಗುವುದು ಎಂದು ಸಹಕಾರ ಸಚಿವ ತಿಳಿಸಿದರು.

ಕೇಂದ್ರ ಸರಕಾರದ ಆತ್ಮ ನಿರ್ಭರ ಯೋಜನೆಯಡಿ ರಾಜ್ಯಕ್ಕೆ ಮೀಸಲಿಟ್ಟ ಅನುದಾನದಲ್ಲಿ ಸಹಕಾರಿ ಕ್ಷೇತ್ರಕೆ 600 ಕೋಟಿ ರೂ. ಒದಗಿಸಬೇಕು ಎಂದು ಕೇಂದ್ರಕ್ಕೆ ಪ್ರಸ್ತಾವ ಕಳುಹಿಸಲಾಗಿದ್ದು, ಈ ರೀತಿ ಪ್ರಸ್ತಾವ ಸಲ್ಲಿಸಿದ ಮೊದಲ ರಾಜ್ಯ ಕರ್ನಾಟಕ ಎಂದವರು ಹೇಳಿದರು.

ಕರ್ನಾಟಕದ ಮೈಸೂರು, ಬೆಂಗಳೂರು, ಬೆಳಗಾವಿ ಹಾಗೂ ಕಲಬುರಗಿ ನಾಲ್ಕು ಸಹಕಾರಿ ವಲಯಗಳಲ್ಲಿ ಆರ್ಥಿಕ ಸ್ಪಂದನದಡಿ ಸಾಲ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ನೀಡಲಾದ ಸಾಲ ಯಾವ ರೀತಿಯಲ್ಲಿ ಬಳಕೆಯಾಗುತ್ತಿದೆ ಎಂಬ ಬಗ್ಗೆ ಮೇಲ್ವಿಚಾರಣೆಗಾಗಿ ಪ್ರತಿ ಜಿಲ್ಲೆಗಳಲ್ಲೂ ನೋಡೆಲ್ ಅಧಿಕಾರಿಗಳ ನೇಮಕಕ್ಕೆ ಚಾಲನೆ ನೀಡಲಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹಕಾರ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಅಲ್ಲದೆ ಉತ್ತಮ ನವೋದಯ ಸ್ವ ಸಹಾಯ ಸಂಘಗಳನ್ನು ಪುರಸ್ಕರಿಸಲಾಯಿತು. ಕಾರ್ಯಕ್ರಮಕ್ಕೆ ಮುನ್ನ ನಡೆದ ಸಹಕಾರ ಜಾಥಾಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಚಾಲನೆ ನೀಡಿದರು. ಮೇಯರ್ ದಿವಾಕರ ಪಾಂಡೇಶ್ವರ ಸಹಕಾರ ಸಂಘಗಳ ಮಳಿಗೆ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಸಹಕಾರಿ ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಾಸಕರಾದ ಮೀನು ಮಾರಾಟ ಮಹಾ ಮಂಡಳದ ಅಧ್ಯಕ್ಷ ಯಶ್ಪಾಲ್ ಸುವರ್ಣ, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ಕೆಎಂಎಫ್ ಅಧ್ಯಕ್ಷ ರವಿರಾಜ ಹೆಗ್ಡೆ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಷಡಕ್ಷರಿ, ಸಹಕಾರ ಸಂಘಗಳ ನಿಬಂಧಕ ಎಸ್.ಝಿಯಾವುಲ್ಲಾ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಸಹಕಾರ ಸಂಘಗಳ ಅಪರ ನಿಬಂಧಕ ದೇವರಾಜ್ ಸಿ.ಎನ್., ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಆರ್.ಶ್ರೀಧರ್, ಸಹಕಾರ ಸಂಘಗಳ ಉಪ ನಿಬಂಧಕರಾದ ಪ್ರಕಾಶ್ ರಾವ್, ಪ್ರವೀಣ್ ಬಿ. ನಾಯಕ್, ಬಿ.ಕೆ.ಸಲೀಂ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಬಿ., ಉಡಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಹಕಾರ ಮಹಾ ಮಂಡಳದ ಆಡಳಿತಾಧಿಕಾರಿ ವೈ.ಎಚ್.ಗೋಪಾಲಕೃಷ್ಣ, ವ್ಯವಸ್ಥಾಪಕ ನಿರ್ದೇಶಕರಾದ ಡಾ.ಕೆ.ಸಿ.ಯತೀಶ್ ಕುಮಾರ್, ಎಸ್.ಎನ್.ಅರುಣ್ ಕುಮಾರ್, ಸಹಕಾರ ಸಂಘಗಳ ಉಪ ನಿರ್ದೇಶಕ ಕೆ.ಎಸ್.ಬಾಲಸುಬ್ರಹ್ಮಣ್ಯ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುರುಷೋತ್ತಮ್ ಎಸ್. ಸಿ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಸಹಕಾರಿ ಸಂಘ ಹಾಗೂ ಸೊಸೈಟಿಗಳ ಐವರು ಪ್ರತಿನಿಧಿಗಳಿಗೆ ಜನೌಷಧಿ ಮಾರಾಟ ಮಳಿಗೆಯ ಅನುಮತಿ ಪತ್ರವನ್ನು ಹಸ್ತಾಂತರಿಸಲಾಯಿತು.

ಬಡವರ ಬಂಧು ಫಲಾನುಭವಿಗಳಿಗೆ ವಿಶೇಷ ಸವಲತ್ತುಗಳ ಚೆಕ್ ವಿತರಣೆ, ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ, ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ, ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವಿಶೇಷ ಪ್ರಶಸ್ತಿ, ಉತ್ತಮ ನವೋದಯ ಸ್ವಸಹಾಯ ಸಂಘಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಭಾ ಕಾರ್ಯಕ್ರಮಕ್ಕೆ ಆರಂಭಕ್ಕೆ ಮೊದಲು ಸಹಕಾರ ಇಲಾಖೆಯ ನಿವೃತ್ತ ಅಪರ ನಿಬಂಧಕ ಶಶಿಧರ ಎಲೆ ದಿಕ್ಸೂಚಿ ಭಾಷಣ ನೀಡಿದರು. ಮನೋಹರ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.


ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಹಕಾರ ಅಧ್ಯಯನ ಪೀಠ ಆರಂಭಿಸಲು ಸರಕಾರದಿಂದ ಅನುಮತಿ ದೊರಕಿದ್ದು, ಈ ವರ್ಷದಿಂದಲೇ ಆರಂಭಗೊಳ್ಳಲಿದೆ. ಸಹಕಾರ ಸಪ್ತಾಹ ಕಾರ್ಯಕ್ರಮ ಸಹಕಾರಿಗಳಿಗೆ ಹಬ್ಬ. ಎಲ್ಲರನ್ನೂ ಒಗ್ಗೂಡಿಸಿ ಜೀವನವನ್ನು ಉನ್ನತಿಗೊಳಿಗೊಳಿಸುವುದು ಸಪ್ತಾಹದ ಮುಖ್ಯ ಉದ್ದೇಶ. ಕಳೆದ 25 ವರ್ಷಗಳಿಂದ ಕೃಷಿ ಸಾಲವನ್ನು ಶೇ. 100ರಷ್ಟು ಮರು ಪಾವತಿ ದೇಶದ ಪ್ರಥಮ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಮಾತ್ರವಲ್ಲದೆ, ಹಲವು ರಾಷ್ಟ್ರೀಕೃತ ಬ್ಯಾಂಕ್‌ಗಳ ಜತೆ ಪೈಪೋಟಿ ಮಾಡಿಕೊಂಡು ಸೇವೆಗೆ ಹೆಸರು ಮಾಡಿರುವ ಬ್ಯಾಂಕ್ ಎಸ್‌ಸಿಡಿಸಿಸಿ ಬ್ಯಾಂಕ್.

-ಡಾ.ಎಂ.ಎನ್. ರಾಜೇಂದ್ರ ಕುಮಾರ್, ಅಧ್ಯಕ್ಷರು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X