ಕೋವಿಡ್19: ರಾಜಧಾನಿ ಬೆಂಗಳೂರಿನಲ್ಲಿ 4 ಸಾವಿರ ದಾಟಿದ ಮೃತರ ಸಂಖ್ಯೆ

ಬೆಂಗಳೂರು, ನ. 15: ನಗರದಲ್ಲಿ ರವಿವಾರದಂದು 840 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 847 ಸೋಂಕಿತರು ಬಿಡುಗಡೆಯಾಗಿದ್ದು, 6 ಜನರು ಮೃತರಾಗಿದ್ದಾರೆ.
ನಗರದಲ್ಲಿ ಇಲ್ಲಿಯವರಗೆ ಒಟ್ಟು 3,57,280 ಕೊರೋನ ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 4,003 ಜನರು ಸೋಂಕಿಗೆ ಬಲಿಯಾಗಿದ್ದಾರೆ. 3,35,105 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 18,171 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ನಗರದಲ್ಲಿ ಒಟ್ಟು ಸಕ್ರಿಯ 2 ಕಂಟೈನ್ಮೆಂಟ್ ಝೋನ್‍ಗಳಿವೆ. ನಗರದ 11,00,596 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 12,79,867 ಜನರನ್ನು ಗುರುತಿಸಲಾಗಿದೆ.
ನಗರದಲ್ಲಿ ಇಲ್ಲಿಯವರೆಗೆ 36,62,569 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.9.70ರಷ್ಟಿದೆ. ಕೊರೋನಕ್ಕೆ ಮೃತರಾಗುತ್ತಿರುವ ಪ್ರಮಾಣ ಶೇ.1.12ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.93.88ರಷ್ಟಿದೆ.







