ಮಣಿಪುರ ಸಿಎಂ ಬೀರೇನ್ ಸಿಂಗ್‌ಗೆ ಕೊರೋನ ಸೋಂಕು

ಇಂಫಾಲ, ನ.15: ಮಣಿಪುರ ಮುಖ್ಯಮಂತ್ರಿ, ಹಿರಿಯ ಬಿಜೆಪಿ ಮುಖಂಡ ಎನ್ ಬೀರೇನ್ ಸಿಂಗ್‌ಗೆ ಕೊರೋನ ಸೋಂಕು ದೃಢಪಟ್ಟಿದ್ದು ಈಗ ಅವರು ಮನೆಯಲ್ಲೇ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಂಗ್, ಕೊರೋನ ಸೋಂಕು ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದ್ದು ಮನೆಯಲ್ಲೇ ಕ್ವಾರಂಟೈನ್‌ನಲ್ಲಿದ್ದು ಆರೋಗ್ಯವಾಗಿದ್ದೇನೆ. ತನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಕಡ್ಡಾಯವಾಗಿ ಕೊರೋನ ಸೋಂಕು ಪರೀಕ್ಷೆಗೆ ಒಳಗಾಗಬೇಕು ಎಂದು ಸಲಹೆ ನೀಡಿದ್ದಾರೆ. ಮಣಿಪುರ ರಾಜ್ಯದಲ್ಲಿ ಇದುವರೆಗೆ 21,636 ಸೋಂಕು ಪ್ರಕರಣ ಪತ್ತೆಯಾಗಿದ್ದು ಇದರಲ್ಲಿ 3068 ಸಕ್ರಿಯ ಪ್ರಕರಣಗಳಾಗಿವೆ ಎಂದು ರಾಜ್ಯದ ಆರೋಗ್ಯ ಇಲಾಖೆಯ ಹೇಳಿಕೆ ತಿಳಿಸಿದೆ.
Next Story





