ಮಂಗಳೂರು: ಬೈಕ್‍ನಲ್ಲಿ ಗಾಂಜಾ ಸಾಗಾಟ; ಆರೋಪಿ ಸೆರೆ
ಉಳ್ಳಾಲ : ಬೈಕಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಉಳ್ಳಾಲ ಬೀಚ್ ಬಳಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುಹಮ್ಮದ್ ನಶೀಲ್ ಎಂದು ಗುರುತಿಸಲಾಗಿದೆ.
ಬಂಧಿತನಿಂದ ರೂ.1,000 ಮೌಲ್ಯದ 100 ಗ್ರಾಂ ಗಾಂಜಾ ಮತ್ತು 20,000 ರೂ. ಮೌಲ್ಯದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





