Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಕ್ಷಿಣ ಚೀನಾ ಸಮುದ್ರದ ಪರಿಸ್ಥಿತಿ ಬಗ್ಗೆ...

ದಕ್ಷಿಣ ಚೀನಾ ಸಮುದ್ರದ ಪರಿಸ್ಥಿತಿ ಬಗ್ಗೆ ಭಾರತದ ಕಳವಳ

ವಾರ್ತಾಭಾರತಿವಾರ್ತಾಭಾರತಿ15 Nov 2020 9:25 PM IST
share

ಹೊಸದಿಲ್ಲಿ, ನ.15: ದಕ್ಷಿಣ ಚೀನಾ ಸಮುದ್ರದಲ್ಲಿ ವಿಶ್ವಾಸವನ್ನು ನಾಶಗೊಳಿಸುವ ಹಲವು ಉಪಕ್ರಮ ಹಾಗೂ ಘಟನೆಗಳು ನಡೆಯುತ್ತಿರುವುದು ತೀವ್ರ ಕಳವಳದ ವಿಷಯವಾಗಿದೆ. ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ಗೌರವಿಸುವ ಅಂತರಾಷ್ಟ್ರೀಯ ಒಪ್ಪಂದಕ್ಕೆ ಬದ್ಧರಾಗಿರಬೇಕು ಎಂದು ಭಾರತ ಶನಿವಾರ ಹೇಳಿದೆ.

15ನೇ ಪೂರ್ವ ಏಶ್ಯಾ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಭಾರತದ ವಿದೇಶ ವ್ಯವಹಾರ ಸಚಿವ ಎಸ್ ಜೈಶಂಕರ್, ಇಂಡೊ-ಪೆಸಿಫಿಕ್ ವಲಯದ ಕುರಿತಂತೆ ಕೆಲವು ದೇಶಗಳ ಕಾರ್ಯನೀತಿಯನ್ನು ಉಲ್ಲೇಖಿಸಿದರು ಮತ್ತು ಅಂತರಾಷ್ಟ್ರೀಯ ಸಹಕಾರಕ್ಕೆ ಬದ್ಧತೆ ಇದ್ದಲ್ಲಿ ವಿವಿಧ ದೃಷ್ಟಿಕೋನ, ನಿಲುವುಗಳನ್ನು ಸಮನ್ವಯಗೊಳಿಸುವುದು ಎಂದಿಗೂ ಸವಾಲಾಗಿರುವುದಿಲ್ಲ ಎಂದರು.

ಹೆಚ್ಚಿನ ಅಂತರಾಷ್ಟ್ರೀಯ ಸಹಕಾರವಿದ್ದರೆ ಕೊರೋನೋತ್ತರ ಕಾಲದಲ್ಲಿ ಭಯೋತ್ಪಾದನೆ, ಹವಾಮಾನ ಬದಲಾವಣೆ ಮತ್ತು ಕೊರೋನ ಸೋಂಕಿನಂತಹ ಸಾಂಕ್ರಾಮಿಕದ ಸಮಸ್ಯೆಯನ್ನು ಸೂಕ್ತವಾಗಿ ನಿರ್ವಹಿಸಬಹುದು. ತಂತ್ರಕುಶಲತೆಯ ವಿಷಯದಲ್ಲಿ ಅನಿಸಿಕೆಗಳನ್ನು ಹಂಚಿಕೊಳ್ಳಲು ಪೂರ್ವ ಏಶ್ಯಾ ಶೃಂಗಸಭೆಯಂತಹ ವೇದಿಕೆಯ ಅಗತ್ಯವಿದೆ ಎಂದವರು ಅಭಿಪ್ರಾಯಪಟ್ಟರು.

ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ಗೌರವಿಸುವ ಅಗತ್ಯವಿದೆ ಎಂದು ಹೇಳುವ ಮೂಲಕ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯ ಬಳಿ ಮತ್ತು ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾ ಅನುಸರಿಸುತ್ತಿರುವ ವಿಸ್ತರಣಾ ವಾದವನ್ನು ಭಾರತ ಖಂಡಿಸಿದೆ ಎಂದು ವಿದೇಶ ವ್ಯವಹಾರ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಇಎಎಸ್ (ಪೂರ್ವ ಏಶ್ಯ ಶೃಂಗಸಭೆ) ಏಶ್ಯ-ಪೆಸಿಫಿಕ್ ಪ್ರದೇಶದಲ್ಲಿ ಭದ್ರತೆ ಮತ್ತು ರಕ್ಷಣೆಯ ಕುರಿತ ವಿವಾದ, ಸಮಸ್ಯೆಯ ಬಗ್ಗೆ ಗಮನ ಹರಿಸುವ ಪ್ರಮುಖ ವೇದಿಕೆಯಾಗಿದ್ದು, 2005ರಲ್ಲಿ ಸ್ಥಾಪನೆಗೊಂಡಂದಿನಿಂದ ಪೂರ್ವ ಏಶ್ಯಾಕ್ಕೆ ಸಂಬಂಧಿಸಿದ ವ್ಯೆಹಾತ್ಮಕ, ಭೌಗೋಳಿಕ ರಾಜಕೀಯ ಮತ್ತು ಆರ್ಥಿಕ ಬೆಳವಣಿಗೆಯ ವಿಷಯಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದೆ. ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿಯ ಶೃಂಗಸಭೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನಡೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X