ನ.17ರಂದು ರಾಷ್ಟ್ರೀಯ ಪತ್ರಿಕೋದ್ಯಮ ದಿನಾಚರಣೆ
ಬೆಂಗಳೂರು, ನ. 15: ಕರ್ನಾಟಕ ಮಾಧ್ಯಮ ಅಕಾಡೆಮಿ, ಭಾರತೀಯ ವಿದ್ಯಾಭವನ ವತಿಯಿಂದ ನ.17ರಂದು ರಾಷ್ಟ್ರೀಯ ಪತ್ರಿಕೋದ್ಯಮ ದಿನಾಚರಣೆ ಪ್ರಯುಕ್ತ ವಿಚಾರ ಸಂಕಿರಣ ಹಾಗೂ ಲಯನ್ಸ್ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಯದೇವ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಲಯನ್ಸ್ ಜಿಲ್ಲಾ ರಾಜ್ಯಪಾಲ ದೀಪಕ್ ಸುಮನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕೋವಿಡ್-19ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ಮಾಧ್ಯಮಗಳ ಹಾಗೂ ಲಯನ್ಸ್ ಸಂಸ್ಥೆಯ ಪಾತ್ರದ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಇದೇ ಸಂದರ್ಭದಲ್ಲಿ ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ 10 ಮಂದಿ ಪತ್ರಕರ್ತರಿಗೆ ಲಯನ್ಸ್ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





