ಮೈಟ್ ವಿದ್ಯಾರ್ಥಿನಿ ಶ್ರಾವ್ಯಾರಿಗೆ ‘ಅರಳು ಮಲ್ಲಿಗೆ’ ಪ್ರಶಸ್ತಿ

ಮಂಗಳೂರು, ನ.17: ಮೂಡುಬಿದಿರೆಯ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಇಂಜಿನಿಯರಿಂಗ್ (ಮೈಟ್) ಕಾಲೇಜಿನ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಬಿ.ಸಿ.ಶ್ರಾವ್ಯಾ ಅವರು ‘ಅರಳು ಮಲ್ಲಿಗೆ’ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇದನ್ನು ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡಮಿ, ಬೆಂಗಳೂರು ಇವರು ಭರತನಾಟ್ಯ, ಜಾನಪದ ನೃತ್ಯ, ಸಂಗೀತ, ಯಕ್ಷಗಾನ ಮತ್ತು ವಿವಿಧ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.
Next Story





