Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರೋಪಿ ವಿರುದ್ಧ ಹಲವು ದೂರು ದಾಖಲಾಗಿರುವ...

ಆರೋಪಿ ವಿರುದ್ಧ ಹಲವು ದೂರು ದಾಖಲಾಗಿರುವ ಕಾರಣಕ್ಕೆ ಜಾಮೀನು ನಿರಾಕರಿಸಲಾಗದು: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ17 Nov 2020 6:11 PM IST
share
ಆರೋಪಿ ವಿರುದ್ಧ ಹಲವು ದೂರು ದಾಖಲಾಗಿರುವ ಕಾರಣಕ್ಕೆ ಜಾಮೀನು ನಿರಾಕರಿಸಲಾಗದು: ಹೈಕೋರ್ಟ್

ಬೆಂಗಳೂರು, ನ.17: ಆರೋಪಿ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ ಎಂಬ ಕಾರಣದ ಮೇಲೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತೆಯು ಆರೋಪಿಯ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸುವ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದೆ.

ಬಲವಾದ ಸಾಕ್ಷ್ಯವಿಲ್ಲದ ಸಂದರ್ಭದಲ್ಲಿ ಆರೋಪಿಯ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ ಎಂಬ ಆಧಾರದ ಮೇಲೆ ಸಂವಿಧಾನದ 21ನೇ ವಿಧಿ ನೀಡಿರುವ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಜೀವಿಸುವ ಹಕ್ಕನ್ನು ನಿರ್ಬಂಧಿಸಲಾಗದು ಎಂದು ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

ಸಿಆರ್‍ಪಿಸಿ ಸೆಕ್ಷನ್ 439(2) ಪ್ರಕಾರ ವಿರಳ ಪ್ರಕರಣಗಳಲ್ಲಿ ಮಾತ್ರ ಜಾಮೀನು ರದ್ದುಗೊಳಿಸುವಂತೆ ಕೋರಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದೆ. ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿ, ಆರೋಪಿ ವಿರುದ್ಧ 11ಕ್ಕೂ ಅಧಿಕ ಕ್ರಿಮಿನಲ್ ಹಾಗೂ ಸಿವಿಲ್ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಮೂರು ಪ್ರಕರಣಗಳು ಆತನ ವಿರುದ್ಧ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಪಟ್ಟದ್ದಾಗಿವೆ. ಹಾಗೆಯೇ ಆತ ಮದುವೆಯಾಗುವುದಾಗಿ ನಂಬಿಸಿ ಕೆಲ ಮಹಿಳೆಯರಿಗೆ ವಂಚಿಸಿದ್ದಾನೆ. ಹೀಗಾಗಿ, ಆರೋಪಿತನಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸಬೇಕು ಎಂದು ಕೋರಿದ್ದರು.

ಆರೋಪಿತ ವ್ಯಕ್ತಿಯ ಪರ ವಾದಿಸಿದ್ದ ವಕೀಲರು, ಆರೋಪಿ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ ಹಾಗೂ ಅವು ಬಾಕಿ ಇವೆ ಎಂಬ ಆಧಾರದಲ್ಲಿ ಆತನನ್ನು ನಿರಂತರ ಅಪರಾಧಗಳನ್ನು ಎಸಗುವ ವ್ಯಕ್ತಿ (ಹೆಬಿಚುಯಲ್ ಅಫೆಂಡರ್) ಎಂದು ನಿರ್ಣಯಿಸಲಾಗದು. ಮೂರಕ್ಕೂ ಹೆಚ್ಚು ಪ್ರಕರಣಗಳಲ್ಲಿ ಶಿಕ್ಷೆಗೆ ಒಳಪಟ್ಟಿದ್ದಲ್ಲಿ ಮಾತ್ರ ಆತನನ್ನು ಅಪರಾಧ ಅಭ್ಯಾಸವುಳ್ಳ ವ್ಯಕ್ತಿ ಎಂದು ಪರಿಗಣಿಸಬಹುದು. ಅರ್ಜಿದಾರರು ಆರೋಪಿತ ವಿರುದ್ಧ ದಾಖಲಾಗಿರುವ ಸಿವಿಲ್ ಪ್ರಕರಣಗಳನ್ನು ಸೇರಿಸಿ ಆತನನ್ನು ಹೆಬಿಚುಯಲ್ ಅಫೆಂಡರ್ ಎಂದು ಆರೋಪಿಸಿರುವ ಕ್ರಮ ಸರಿಯಲ್ಲ. ಇನ್ನು ಹಲವು ದೂರುಗಳು ದಾಖಲಾಗಿವೆ ಎಂಬ ಕಾರಣಕ್ಕೆ ಜಾಮೀನು ರದ್ದುಗೊಳಿಸಿದರೆ, ಅದು ವಿಧಿ 21ರ ಉಲ್ಲಂಘನೆಯಾಗಲಿದೆ ಎಂದು ವಿವರಿಸಿದ್ದರು.

ಪ್ರಕರಣವೇನು: ನಗರದ ಕೋರಮಂಗಲದ 37 ವರ್ಷದ ವ್ಯಕ್ತಿ ಹಾಗೂ ಸಂತ್ರಸ್ತೆ ಮ್ಯಾಟ್ರಿಮೋನಿಯಲ್ ವೆಬ್‍ಸೈಟ್ ಮೂಲಕ ಪರಸ್ಪರ ಪರಿಚಯವಾಗಿ, ಫೋನ್ ನಂಬರ್ ಬದಲಾಯಿಸಿಕೊಂಡಿದ್ದರು. ಈ ವೇಳೆ ಆರೋಪಿ ವ್ಯಕ್ತಿ ತಾನು ಓರ್ವ ಯಶಸ್ವಿ ಉದ್ಯಮಿ, ತನ್ನ ಉದ್ದಿಮೆ ದೇಶದಲ್ಲಷ್ಟೇ ಅಲ್ಲದೇ ವಿದೇಶಗಳಲ್ಲೂ ಇದೆ ಎಂದು ಹೇಳಿಕೊಂಡಿದ್ದ. ಇಬ್ಬರ ನಡುವೆ ಆತ್ಮೀಯತೆ ಹೆಚ್ಚಾಗಿ, ಮದುವೆ ಮಾತುಕತೆಯೂ ನಡೆದು ದೈಹಿಕ ಸಂಪರ್ಕವೂ ಆಗಿತ್ತು. ಕೆಲ ದಿನಗಳ ಬಳಿಕ ಆತ ದೈಹಿಕ ಸಂಪರ್ಕಕ್ಕಷ್ಟೇ ಯುವತಿಯನ್ನು ಒತ್ತಾಯಿಸುತ್ತಿದ್ದ. ಅಲ್ಲದೇ ತಾವಿಬ್ಬರೂ ಮದುವೆಯಾಗಿದ್ದೇವೆ ಎಂದು ಎಲ್ಲರೆದುರು ಹೇಳಿಕೊಳ್ಳುವಂತೆ ತಿಳಿಸಿದ್ದ. ಆದರೆ ಹಿನ್ನೆಲೆ ಪರೀಕ್ಷಿಸಿದಾಗ ಆತನಿಗೆ ಮದುವೆಯಾಗಿ ಮಗು ಇರುವುದು ಬೆಳಕಿಗೆ ಬಂದಿತ್ತು. ಇದರ ನಡುವೆ ಆರೋಪಿ ಸಂತ್ರಸ್ತೆಗೆ 31.88 ಲಕ್ಷ ಹಣ ನೀಡುವಂತೆ ಒತ್ತಾಯಿಸಿದ್ದ ಎಂದು ಮಹಿಳೆ ವಿವೇಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X