ಉಡುಪಿ: ಭೂಮಸೂದೆ, ಎಪಿಎಂಸಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಸಂಗ್ರಹಿಸಿದ ಸಹಿ ಪ್ರದರ್ಶನ

ಉಡುಪಿ, ನ.17: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಭೂ ಮಸೂದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಸಂಗ್ರಹಿಸಲಾದ ಸಹಿಯ ಪ್ರತಿಯನ್ನು ಬೆಳಗ್ಗೆ ಬನ್ನಂಜೆಯಿಂದ ಕಲ್ಸಂಕದವರೆಗೆ ಕಾಂಗ್ರೆಸ್ ಕಾರ್ಯ ಕರ್ತರು ಪ್ರದರ್ಶನ ಮಾಡಿ ಸಾರ್ವಜನಿಕರಲ್ಲಿ ಜನವಿರೋಧಿ ಕಾಯಿದೆಗಳ ಕುರಿತು ಅರಿವು ಮೂಡಿಸಿ, ಸರಕಾರದ ಗಮನ ಸೆಳೆಯುವ ಪ್ರಯತ್ನ ನಡೆಸಿದರು.
ಈ ಕಾರ್ಯಕ್ರಮವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಉದ್ಘಾಟಿಸಿದರಲ್ಲದೇ, ಉಡುಪಿಯ ನರ್ಮ್ ಬಸ್ ನಿಲ್ದಾಣದ ಬಳಿ ನಡೆದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರಿಂದ ಉಡುಪಿ ಜಿಲ್ಲೆಯಲ್ಲಿ ಸಂಗ್ರಹಿಸ ಲಾದ ಸುಮಾರು 75,000 ಸಹಿ ಸಂಗ್ರಹದ ಮಾದರಿಯನ್ನು ಸ್ವೀಕರಿಸಿದರು.
ದೇಶದ ಪ್ರತಿಯೊಂದು ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಹಿ ಸಂಗ್ರಹಿಸಿ ರಾಷ್ಟ್ರಪತಿಗೆ ಸಲ್ಲಿಸುವಂತೆ ಪಕ್ಷದ ನಾಯಕಿ ಸೋನಿಯಾ ಗಾಂಧಿ ನೀಡಿರುವ ಕರೆಯಂತೆ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನಿರ್ದೇಶನದಂತೆ ಉಡುಪಿ ಜಿಲ್ಲೆಯ 1111 ಬೂತ್‌ಗಳಲ್ಲಿ ಒಟ್ಟು 75,000 ಸಹಿಗಳನ್ನು ಸಂಗ್ರಹಿಸಲಾಗಿದೆ ಎಂದು ಅಶೋಕ್ ಕುಮಾರ್ ತಿಳಿಸಿದರು.
ಬನ್ನಂಜೆಯ ನಾರಾಯಣಗುರು ಸಭಾಭವನದಿಂದ ಕಲ್ಸಂಕದವರೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ರಸ್ತೆ ಬದಿಯಲ್ಲಿ ನಿಂತು ಸಹಿ ಸಂಗ್ರಹ ವನ್ನು ಸಾರ್ವಜನಿಕರಿಗೆ ಪ್ರದರ್ಶಿಸಿದರು. ಆ ಮೂಲಕ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರಗಳಿಂದ ದೇಶದ ಜನಸಾಮಾನ್ಯರಿಗೆ, ರೈತ ರಿಗೆ, ಕಾರ್ಮಿಕರಿಗೆ ಆಗುವ ತೊಂದರೆಗಳನ್ನು ರಾಷ್ಟ್ರಪತಿ ಗಮನಕ್ಕೆ ತಂದು ಜನವಿರೋಧಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸು ವುದು ಈ ಕಾರ್ಯಕ್ರಮದ ಉದ್ದೇಶ ಎಂದು ಕೊಡವೂರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಂಗ್ರೆಸ್ ಮುಖಂಡರಾದ ರಾಜು ಪೂಜಾರಿ, ಬಿ.ನರಸಿಂಹ ಮೂರ್ತಿ, ಭಾಸ್ಕರ ರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹರೀಶ್ ಕಿಣಿ, ಕೀರ್ತಿ ಶೆಟ್ಟಿ, ಪ್ರಶಾಂತ್ ಜತ್ತನ್ನ, ಅಣ್ಣಯ್ಯ ಶೇರಿಗಾರ್, ಕೃಷ್ಣಮೂರ್ತಿ ಆಚಾರ್, ಕುಶಲ್ ಶೆಟ್ಟಿ, ಶಶಿಧರ ಶೆಟ್ಟಿ ಎಲ್ಲೂರು, ಶಬ್ಬೀರ್ ಅಹಮದ್, ರಮೇಶ್ ಕಾಂಚನ್, ಪಿ.ವಿ.ಮೋಹನ್, ಶಂಕರ್ ಕುಂದರ್, ದಿನಕರ ಹೇರೂರು, ಉದ್ಯಾವರ ನಾಗೇಶ್ ಕುಮಾರ್, ಮಂಜುನಾಥ ಪೂಜಾರಿ, ಹಬೀಬ್ ಅಲಿ, ಇಸ್ಮಾಯಿಲ್ ಆತ್ರಾಡಿ, ಗೀತಾ ವಾಗ್ಳೆ, ಜ್ಯೋತಿ ಹೆಬ್ಬಾರ್, ವೆರೋನಿಕಾ ಕರ್ನೇಲಿಯೊ, ರೋಶನಿ ಒಲಿವರ್, ಡಾ.ಸುನೀತಾ ಶೆಟ್ಟಿ, ಸರಸು ಬಂಗೇರ, ಸರಳಾ ಕಾಂಚನ್,ಚಂದ್ರಿಕಾ ಶೆಟ್ಟಿ, ಪ್ರಮೀಳ ಜತ್ತನ್ನ, ಮಹಾಬಲ ಕುಂದರ್ ಮುಂತಾದವರು ಉಪಸ್ಥಿತರಿದ್ದರು.







