Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತ ಓಲೈಕೆಗಾಗಿ ಒಂದು ಸಮುದಾಯಕ್ಕೆ...

ಮತ ಓಲೈಕೆಗಾಗಿ ಒಂದು ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ಸರಿಯಲ್ಲ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ17 Nov 2020 7:46 PM IST
share
ಮತ ಓಲೈಕೆಗಾಗಿ ಒಂದು ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ಸರಿಯಲ್ಲ: ಸಿದ್ದರಾಮಯ್ಯ

ಬೆಂಗಳೂರು, ನ.17: ರಾಜ್ಯದಲ್ಲಿ ಹಲವಾರು ಹಿಂದುಳಿದ ಸಮುದಾಯಗಳು ಇನ್ನೂ ಇವೆ, ಅವುಗಳ ಅಭಿವೃದ್ಧಿಗೂ ಸರಕಾರ ಪ್ರಾಧಿಕಾರ ರಚನೆ ಮಾಡಲಿ. ಮತ ಓಲೈಕೆ ಕಾರಣಕ್ಕಾಗಿ ಯಾವುದೋ ಒಂದು ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಸರಿಯಲ್ಲ. ಅಭಿವೃದ್ಧಿಯ ಹಾದಿಯಲ್ಲಿ ಎಲ್ಲರು ಒಂದಾಗಿ ಸಾಗಿದಾಗ ಮಾತ್ರ ಸಮಾನತೆ ತರಲು ಸಾಧ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30,000 ಮರಾಠ ಸಮುದಾಯದ ಮತದಾರರಿದ್ದಾರೆ, ಅವರ ಓಲೈಕೆಗಾಗಿ ಸರಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ನಿರ್ಧಾರ ಮಾಡಿದೆಯೇ ಹೊರತು ಅವರ ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡುವ ನೈಜ ಕಾಳಜಿ ಬಿಜೆಪಿ ಸರಕಾರಕ್ಕೆ ಇಲ್ಲ ಎಂದು ಆರೋಪಿಸಿದರು.

ಬಿಜೆಪಿ ಮತ್ತು ಜೆಡಿಎಸ್‍ನ ಒಳಒಪ್ಪಂದದ ರಾಜಕಾರಣ ಹೊಸತಲ್ಲ. ಹಿಂದೆಯೂ  ಮಾಡಿಕೊಂಡಿದ್ದರು, ಕಳೆದ ಉಪಚುನಾವಣೆಯಲ್ಲೂ ಈ ಆರೋಪ ಇತ್ತು, ಮುಂದೆಯೂ ನಡೆಯಬಹುದು. ಅವಕಾಶವಾದಿ ರಾಜಕಾರಣ ಜೆಡಿಎಸ್‍ನ ನೈಜ ಸಿದ್ಧಾಂತ, ಇದನ್ನು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಮುಂದುವರಿಸಿದ್ದಾರೆ ಎಂದು ಸಿದ್ದರಾಮಯ್ಯ ದೂರಿದರು.

ರೈತರ ಆದಾಯ ದುಪ್ಪಟ್ಟುಗೊಳಿಸುತ್ತೇವೆ ಎಂದು ಭರವಸೆ ನೀಡಿ, ಈಗ ಭತ್ತ, ಮೆಕ್ಕೆಜೋಳ ಮುಂತಾದ ಬೆಳೆಗಳಿಗೆ ಸರಕಾರ ಬೆಂಬಲ ಬೆಲೆಯನ್ನೂ ನೀಡದೆ ರೈತರನ್ನು ಕಷ್ಟಕ್ಕೆ ತಳ್ಳಿ ಕೈತೊಳೆದುಕೊಂಡಿದೆ. ಇದರ ಮೇಲೆ ರೈತವಿರೋಧಿ ಕಾನೂನುಗಳನ್ನು ಬೇರೆ ಜಾರಿ ಮಾಡಿದ್ದಾರೆ. ಒಟ್ಟಿನಲ್ಲಿ ಉಳ್ಳವರ ಸರಕಾರದಲ್ಲಿ ಅನ್ನದಾತ ನರಳಾಡುತ್ತಿದ್ದಾನೆ ಎಂದು ಅವರು ಹೇಳಿದರು.

ಈ ಬಾರಿಯ ಪ್ರವಾಹದಿಂದ ರಾಜ್ಯದಲ್ಲಿ ಸುಮಾರು 25,000 ಕೋಟಿ ರೂ.ಗೂ ಅಧಿಕ ನಷ್ಟ ಸಂಭವಿಸಿದೆ, ಆದರೆ ಕೇಂದ್ರ ಸರಕಾರದಿಂದ ಈವರೆಗೆ ಬಂದಿರುವುದು 577 ಕೋಟಿ ರೂ.ಮಾತ್ರ. ಇದರಲ್ಲಿ ಎಷ್ಟು ಜನರಿಗೆ ನೆರೆ ಪರಿಹಾರ ನೀಡಲು ಸಾಧ್ಯ? ರಾಜ್ಯ ಸರಕಾರದ ಬಳಿಯೂ ಹಣವಿಲ್ಲ, ಕೇಂದ್ರವೂ ನೀಡುತ್ತಿಲ್ಲ. ಹೀಗಾದರೆ ಜನರಿಗೆ ಯಾರು ದಿಕ್ಕು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ರಾಜ್ಯದಲ್ಲಿ ಶಾಲಾ-ಕಾಲೇಜು ತೆರೆಯದಂತೆ ಸರಕಾರಕ್ಕೆ 2 ಬಾರಿ ಪತ್ರ ಬರೆದಿದ್ದೆ, ಆದರೂ ಇಂದು ಸರಕಾರ ಪೂರ್ವತಯಾರಿ ಇಲ್ಲದೆ ಪದವಿ ಕಾಲೇಜುಗಳನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟ ಸರಿಯಲ್ಲ, ಕಾಲೇಜು ನಡೆಸಲೇಬೇಕು ಎಂದು ನಿರ್ಧರಿಸಿದ್ದರೆ ಸರಕಾರವೇ ವಿದ್ಯಾರ್ಥಿಗಳ ಸೋಂಕು ಪರೀಕ್ಷೆಯನ್ನು ಮಾಡಬೇಕು ಎಂದು ಅವರು ಹೇಳಿದರು.

ಸಂಪತ್‍ರಾಜ್ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆಯಷ್ಟೇ, ವಿಚಾರಣೆ ನಡೆಯುವ ಮೊದಲೆ ಅವರನ್ನು ಅಪರಾಧಿ ಅಥವಾ ನಿರಪರಾಧಿ ಎಂದು ನಿರ್ಧರಿಸಲಾಗುವುದಿಲ್ಲ. ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತೆ. ಈ ಹಂತದಲ್ಲಿ ನಾವು ಅವರ ಪರವೂ ಇಲ್ಲ, ವಿರುದ್ಧವೂ ಇಲ್ಲ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X