ದ.ಕ. ಜಿಲ್ಲಾದ್ಯಂತ ಮತದಾರರ ನೋಂದಣಿ ಅಭಿಯಾನ
ಮಂಗಳೂರು, ನ.17: ದ.ಕ. ಜಿಲ್ಲಾದ್ಯಂತ ಮತದಾರರ ನೋಂದಣಿ ಅಭಿಯಾನವನ್ನು ನ.22,29 ಹಾಗೂ ಡಿ.6,13ರಂದು ಹಮ್ಮಿಕೊಳ್ಳಲಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಡಿ.17 ಕೊನೆಯ ದಿನವಾಗಿದೆ.
ವಿಕಲಚೇತನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನುಕೂಲಕ್ಕಾಗಿ ಮತದಾರರ ಮಿಂಚಿನ ನೋಂದಾಣಿ ಅಭಿಯಾನವು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5ಗಂಟೆಯವರೆಗೆ ನೋಂದಣಿ ಪ್ರಕ್ರಿಯೆ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿರುವವರು ಈ ಪ್ರಕ್ರಿಯೆಯ ಸದುಪಯೋಗ ಪಡೆಯುವಂತೆ ಅಪರ ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.
Next Story





