ಅಪರಾಧ ಪತ್ತೆ ದಳದ ಅಧಿಕಾರಿಗಳ ವರ್ಗಾವಣೆ
ಮಂಗಳೂರು, ನ.17: ನಗರ ಅಪರಾಧ ಪತ್ತೆದಳದ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಹಾಗೂ ಎಸ್ಸೈ ಕಬ್ಬಳ್‌ರಾಜ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮಂಗಳೂರು ಡ್ರಗ್ಸ್ ಮೂಲದ ತನಿಖಾ ತಂಡದ ನೇತೃತ್ವ ವಹಿಸಿದ ಸಿಸಿಬಿ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಅವರನ್ನು ಈ ಹಿಂದೆ ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಕಾಪು ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ನಿಯೋಜಿಸಲಾಗಿತ್ತು.
ಕಿರು ತೆರೆ ನಿರೂಪಕಿ, ನಟಿ ಅನುಶ್ರೀ ಅವರನ್ನು ಮಂಗಳೂರಿಗೆ ತನಿಖೆಗೆ ಕರೆಸಿದ ಬಳಿಕ ಸಿಸಿಬಿ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ವರ್ಗಾವಣೆ ನಡೆದಿದ್ದು, ಇದಕ್ಕೆ ಸಾರ್ವಜನಿಕ ಆಕ್ಷೇಪದ ಹಿನ್ನಲೆಯಲ್ಲಿ ವರ್ಗಾವಣೆ ತಡೆಹಿಡಿಯಲಾಗಿತ್ತು. ಇದೀಗ ಸರಕಾರ ಮತ್ತೆ ವರ್ಗಾವಣೆ ಆದೇಶ ಮಾಡಿದೆ.
ಸಿಸಿಬಿ ಎಸ್ಸೈ ಕಬ್ಬಳ್‌ರಾಜ್‌ರನ್ನು ಚಿಕ್ಕಮಗಳೂರಿಗೆ ವರ್ಗಾಯಿಸಲಾಗಿದೆ.
Next Story





