Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಹಕಾರಿ ಕ್ಷೇತ್ರದಿಂದ ಗ್ರಾಮೀಣ ಜನರಿಗೆ...

ಸಹಕಾರಿ ಕ್ಷೇತ್ರದಿಂದ ಗ್ರಾಮೀಣ ಜನರಿಗೆ ಆರ್ಥಿಕ ಸಂಕಲ್ಪ: ಡಾ. ಎಂ.ಎನ್. ರಾಜೇಂದ್ರ ಕುಮಾರ್

ವಾರ್ತಾಭಾರತಿವಾರ್ತಾಭಾರತಿ18 Nov 2020 2:24 PM IST
share
ಸಹಕಾರಿ ಕ್ಷೇತ್ರದಿಂದ ಗ್ರಾಮೀಣ ಜನರಿಗೆ ಆರ್ಥಿಕ ಸಂಕಲ್ಪ: ಡಾ. ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು, ನ.18: ಕೊರೋನ ಸಂದರ್ಭದಲ್ಲೂ ಜಿಲ್ಲಾ ಸಹಕಾರಿ ಬ್ಯಾಂಕ್, ಕೆಎಂಎಫ್ ಹಾಗೂ ಕ್ಯಾಂಪ್ಕೋದಂತಹ ಸಹಕಾರಿ ಕ್ಷೇತ್ರಗಳು ಗ್ರಾಮೀಣ ಜನರ ಬದುಕಿಗೆ ಆರ್ಥಿಕ ಸಂಕಲ್ಪ ನೀಡುವಲ್ಲಿ ಸಹಕಾರಿಯಾಗಿವೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಭಿಪ್ರಾಯಿಸಿದ್ದಾರೆ.

ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಕುಲಶೇಖರದ ಕೆಎಂಎಫ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ನಂದಿನಿ ಅನ್ ವೀಲ್ಸ್ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೊರೋನದಿಂದಾಗಿ ಹೊರ ದೇಶಗಳಿಂದ ಅಡಿಕೆ ಆಮದಿಗೆ ಕಡಿವಾಣ ಬಿದ್ದ ಹಿನ್ನೆಲೆಯಲ್ಲಿ ಅಡಿಕೆ ಬೆಲೆ ಹೆಚ್ಚಳವಾಗಿ ರೈತರಿಗೆ ಸಹಕಾರಿಯಾ ಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿಯೂ ಆರು ತಿಂಗಳು ಸಾಲ ಮರುಪಾವತಿ ಅವಧಿಯ ವಿಸ್ತರಣೆಯ ಸಂದರ್ಭದ ಚಕ್ರಬಡ್ಡಿಯನ್ನು ಕೇಂದ್ರ ಸರಕಾರ ಭರಿಸಿದ್ದರಿಂದ ಬ್ಯಾಂಕಿಂಗ್ ಕ್ಷೇತ್ರಕ್ಕೂ ಹೆಚ್ಚಿನ ಹೊರೆ ಬಿದ್ದಿಲ್ಲ. ಆದರೆ ಕೊರೋನದಿಂದಾಗಿ ಕೆಲ ಸಮಯ ಹಾಲು ಉತ್ಪಾದಕರಿಂದ ಸಂಗ್ರಹಿಸಿದ ಹಾಲನ್ನು ವಿತರಿಸಲು ಸಾಧ್ಯವಾಗದೆ ಕೆಎಂಎಫ್ ನಷ್ಟ ಅನುಭವಿಸಬೇಕಾಯಿತಾದರೂ, ಈಗ ಚೇತರಿಸಿಕೊಳ್ಳುತ್ತಿದೆ. ಹಾಗಾಗಿ ಗ್ರಾಮಾಂತರ ಸೊಸೈಟಿಗೆ ಹಾಲು ಹಾಕುವವರ ಬಗ್ಗೆ ಚಿಂತಿಸಿ ಮುಂದಿನ ಜನವರಿಯಿಂದಲಾದರೂ ಅವರಿಗೆ ಹಿಂದಿನ ಧಾರಣೆ ಸಿಗುವ ವ್ಯವಸ್ಥೆ ಮಾಡಬೇಕು ಎಂದು ಅವರು ಹೇಳಿದರು.

ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಉತ್ತಮ ಡೀಲರುಗಳಿಗೆ ಗೌರವ ಹಾಗೂ ಹಾಲು ಉತ್ಪಾದಕರ ಮತ್ತು ಡೀಲರುಗಳ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕಾರ್ಯಕ್ರಮದಲ್ಲಿ ದ.ಕ. ಹಾಲು ಉತ್ಪಾದಕರ ಒಕ್ಕೂದ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಸಹಕಾರ ಸಂಘಗಳ ಉಪ ನಿಬಂಧಕ ಪ್ರವೀಣ್ ಬಿ. ನಾಯಕ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಜಿಲ್ಲಾ ಸಹಕಾರಿ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಪಿ. ಪುರುಷೋತ್ತಮ ಹಾಗೂ ಒಕ್ಕೂಟದ ನಿರ್ದೇಶಕರು ಉಪಸ್ಥಿತರಿದ್ದರು.

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ಟಿ. ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೆನೆಟ್ ರೊಸಾರಿಯೊ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X