Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಡಾ....

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಡಾ. ಅಬ್ದುಲ್ ರಝಾಕ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ18 Nov 2020 3:32 PM IST
share
ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಡಾ. ಅಬ್ದುಲ್ ರಝಾಕ್ ಒತ್ತಾಯ

ಕೊಪ್ಪಳ : ಸುಮಾರು 10 ವರ್ಷಗಳಿಂದ ಪಿಂಜಾರ ಸಮುದಾಯದಿಂದ ಹೋರಾಟ ಮಾಡುತ್ತಾ ಬಂದರು ನಮ್ಮ ಸಮುದಾಯಕ್ಕೆ ನ್ಯಾಯ ಸಿಗುತ್ತಿಲ್ಲ. ಇತ್ತೀಚಿಗೆ ಮರಾಠ ಹಾಗೂ ಬಹುಸಂಖ್ಯಾತರ ವೀರಶೈವ ಲಿಂಗಾಯತ ನಿಗಮಕ್ಕೂ ಹೆಚ್ಚಿನ ಒತ್ತು ನೀಡಿದೆ. ಇದೇ ರೀತಿ ಪಿಂಜಾರ ಅಭಿವೃದ್ಧಿ ನಿಗಮಕ್ಕೂ ಆದೇಶ ಮಾಡಬೇಕೆಂದು ಕರ್ನಾಟಕ ಪಿಂಜಾರ, ನದಾಫ, ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಝಾಕ ನದಾಫ ಹೇಳಿದರು.

ಅವರು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಪಿಂಜಾರ ಅಭಿವೃದ್ಧಿ ನಿಗಮಕ್ಕೆ ಒತ್ತಾಯಿಸಿ ಮಾತನಾಡಿದರು. ಕರ್ನಾಟಕದಲ್ಲಿ ಒಟ್ಟು ಮುಸ್ಲಿಂ ಜನಸಂಖ್ಯೆಯ ಅರ್ಧದಷ್ಟು ಪಿಂಜಾರ ನದಾಫ, ಮನ್ಸೂರಿ, ದುದೇಕುಲಾ ಸಮುದಾಯವಿದ್ದು ಈವರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.

ರಾಜ್ಯದ ಸುಮಾರು 70 ಲಕ್ಷ ಮುಸ್ಲಿಂ ಜನಸಂಖ್ಯೆಯ ಪೈಕಿ ಪಿಂಜಾರ್, ನದಾಫ್ (ಕರ್ನಾಟಕ ಆಂದ್ರಗಡಿ ಜಿಲ್ಲೆಯಲ್ಲಿ ದುದೇಕಲಾ ಹಾಗೂ ಕರ್ನಾಟಕ ಮಹಾರಾಷ್ಟ್ರ, ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲಿ ಮನ್ಸೂರಿ ಜನಾಂಗ ಅಂತಾ ವಾಸವಿದ್ದು) ಈ ಎಲ್ಲ ಜನಾಂಗವು ಪಿಂಜಾರ್, ನದಾಫ ಸಮುದಾಯಕ್ಕೆ ಸೇರಿದ ಜನಸಂಖ್ಯೆ ಆಗಿದೆ ಪಿಂಜಾರ್, ನದಾಫ, ಜನಸಂಖ್ಯೆಯು ಸರಿ ಸುಮಾರು 35ರಿಂದ 38 ಲಕ್ಷದಷ್ಟು ಇರುತ್ತಾರೆ.

ನಮ್ಮ ಅಲೆಮಾರಿ ಪಿಂಜಾರ್, ನದಾಫ್, ಜನಸಂಖ್ಯೆಗೆ ಸದ್ಯ ಪ್ರ ವರ್ಗ 1 ಕ್ಕೆ ಮೀಸಲಾತಿ ಸೌಲಭ್ಯಗಳು ರಾಜ್ಯದಲ್ಲಿ ಎಲ್ಲ ಜಿಲ್ಲೆಯಲ್ಲಿ ಸಿಗುತ್ತಿಲ್ಲ. ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ತೀರಾ ಹಿಂದುಳಿದ ಈ ಸಮುದಾಯದ ವಾಸ್ತವ ಸ್ಥಿತಿಯನ್ನು ಹಿಂದುಳಿದ ವರ್ಗಗಳ ಆಯೋಗವು 2010ರಲ್ಲಿ ಡಾ.ಸಿ.ಎಸ್. ದ್ವಾರಕನಾಥ ರವರು ಸಲ್ಲಿಸಿದ ವರದಿಯಲ್ಲಿ ತೆರೆದಿಟ್ಟಿದೆ. ಪಿಂಜಾರ/ನದಾಫ್ ಸಮುದಾಯದ ಉಳಿವು ಮತ್ತು ಬೆಳವಣಿಗೆಗೆ ಪಿಂಜಾರ/ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆ ಅನಿವಾರ್ಯ ಎಂದು ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ.

2009-10 ರಲ್ಲಿ ಡಾ. ಸಿ.ಎಸ್. ದ್ವಾರಕನಾಥ ಆಯೋಗವು ಸರಕಾರಕ್ಕೆ ವರದಿಯನ್ನು ಸಲ್ಲಿಸಿ ವರದಿಯಲ್ಲಿ ಅಲೆಮಾರಿ ಪಿಂಜಾರ್, ನದಾಫ್, ಜನರ ಉದ್ಯೋಗವು ನಸೀಶಿ ಹೋಗಿದ್ದು ಈ ಸಮುದಾಯವು ತುಂಬಾ ಸಂಕಷ್ಟದಲ್ಲಿ ಇದೆ ಎಂದು ಅಲೆಮಾರಿ ಸಮುದಾಯಕ್ಕೆ ಪಿಂಜಾರ್ ಅಭಿವೃದ್ಧಿ ನಿಗಮ ಮಾಡಬೇಕು ದ್ವಾರಕನಾಥ ಅವರು ಸಲ್ಲಿಸಿದ್ದ ವರದಿ ಆಧರಿಸಿ ಈಗಾಗಲೇ ವಿಶ್ವಕರ್ಮ, ಲಂಬಾಣಿ, ಭೋವಿ, ಉಪ್ಪಾರ, ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಲಾಗಿದೆ. ಆದರೆ ಅಲೆಮಾರಿ ಪಿಂಜಾರ್, ನದಾಫ್ ಸಮುದಾಯಕ್ಕೆ ಇದುವರೆಗೂ ಯಾವುದೇ ಪ್ರಯೋಜನ ವಾಗುತ್ತಿಲ್ಲ. ನೆರೆಯ ಆಂದ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಪಿಂಜಾರ್‌, ಅಭಿವೃದ್ದಿ ನಿಗಮ ಸ್ಥಾಪಿಸಬೇಕೆಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳು ಮರಾಠ ನಿಗಮ ಮಂಡಳಿ ಹಾಗೂ ಬಹುಸಂಖ್ಯಾತರ ವರ್ಗದ ವೀರಶೈವ ಲಿಂಗಾಯತ ನಿಗಮ ಮಂಡಳಿ ಮಾಡಲು ಆದೇಶವನ್ನು ನೀಡಿರುವುದರಿಂದ ಸುಮಾರು 10 ವರ್ಷಗಳಿಂದ ಅಂದರೆ ಬಿ.ಎಸ್.ಯಡಿಯೂರಪ್ಪನವರಾದ ತಾವು 2009 ರಲ್ಲಿ ಮುಖ್ಯಮಂತ್ರಿಗಳಿದ್ದ ಅವಧಿಯಿಂದ ಪಿಂಜಾರ ಅಭಿವೃದ್ದಿ ನಿಗಮಕ್ಕೆ ಹೋರಾಟ ಮಾಡುತ್ತಾ ಬಂದರು ಸಹ ಇಲ್ಲಿಯವರಿಗೂ ನಮ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿರುವುದಾದರೂ ಏಕೆ ? ಇದನ್ನು ನಮ್ಮ ಸಮುದಾಯದಿಂದ ತೀವ್ರವಾಗಿ ಖಂಡಿಸುತ್ತೇವೆಂದು ಹೇಳಿ ದರು. ಈ ಹಿಂದೆಯೂ ನಮ್ಮ ಸಮುದಾಯಕ್ಕೆ ಕಟ್ಟಡ, ಸಭಾಭವನಕ್ಕೆ ಕೋಟಿ, ಕೋಟಿ ಅನುದಾನ ಒದಗಿಸುತ್ತಾ ಬಂದಿರುವುದು ಸ್ವಾಗಾರ್ತಹ ವಿಷಯ ಆದರೆ ನಮ್ಮ ಅಲೆಮಾರಿ ಜನಾಂಗವು ಅನಕ್ಷರಸ್ಥರಾಗಿದ್ದರಿಂದ ಕುಟುಂಬ ನಿರ್ವಹಣೆ ತೊಂದರೆಯಾಗಿದೆ. ಕುಲಕಸಬು ನಸಿಶಿ ಹೋಗಿದೆ. ನೀವು ನೀಡಿದ ಅನುದಾನ ಸರಿಯಾಗಿ ಸಮರ್ಪಕವಾಗಿ ತಲುಪುವುದಿಲ್ಲ. ಆದ್ದರಿಂದ ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸರಕಾರದಿಂದ ನೀಡುವ ಅನುದಾನವನ್ನು ಅರ್ಥ ಪೂರ್ಣವಾಗಿ ಸಮುದಾಯದ ಪ್ರತಿ ಕುಟುಂಬಕ್ಕೆ ತಲುಪುವುದರಲ್ಲಿ ಸಂಶಯವಿಲ್ಲ. ಪಿಂಜಾರ ಅಭಿವೃದ್ದಿ ನಿಗಮದಿಂದ ಸಮುದಾಯದ ಆರ್ಥಿಕ ಪರಿಸ್ಥಿತಿ ಸುದಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆಂದು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭ  ಸನ್ನಿ ಸಾನಿಕ್ ಕುರಗೋಡ, ಹುಸೇಬಸಾಬ ನದಾಫ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X