Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೈಜ್ಞಾನಿಕ ಅಧ್ಯಯನವಿಲ್ಲದೆ ಪ್ರಾಧಿಕಾರ...

ವೈಜ್ಞಾನಿಕ ಅಧ್ಯಯನವಿಲ್ಲದೆ ಪ್ರಾಧಿಕಾರ ಸ್ಥಾಪನೆ ಪ್ರಜಾಪ್ರಭುತ್ವ ವಿರೋಧಿ: ಸಿದ್ದರಾಮಯ್ಯ

''ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ''

ವಾರ್ತಾಭಾರತಿವಾರ್ತಾಭಾರತಿ18 Nov 2020 4:19 PM IST
share
ವೈಜ್ಞಾನಿಕ ಅಧ್ಯಯನವಿಲ್ಲದೆ ಪ್ರಾಧಿಕಾರ ಸ್ಥಾಪನೆ ಪ್ರಜಾಪ್ರಭುತ್ವ ವಿರೋಧಿ: ಸಿದ್ದರಾಮಯ್ಯ

ಬೆಂಗಳೂರು, ನ.18: ರಾಜ್ಯ ಸರಕಾರ ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ, ಪ್ರಾಧಿಕಾರ ಸ್ಥಾಪನೆ ಮಾಡಿರುವುದು ಸಮಾಜ ವಿರೋಧಿ ಹಾಗೂ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಚುನಾವಣೆಗಳನ್ನು ಜನಪರ ಕಾರ್ಯಕ್ರಮಗಳ ಮೂಲಕ ಗೆಲ್ಲಲಾಗದ ಬಿಜೆಪಿ, ಇಂತಹ ಕುತಂತ್ರಗಳನ್ನು ಮಾಡಿ ಸಮಾಜವನ್ನು ಒಡೆಯಲು ಹೊರಟಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಆದರೆ, ಬಡತನ ಎಂಬುದು ಜಾತಿ, ಧರ್ಮಗಳನ್ನು ಮೀರಿದ್ದಾಗಿದೆ. ಕೇವಲ ತಳಸಮುದಾಯಗಳಲ್ಲಿ ಮಾತ್ರವಲ್ಲ, ಮೇಲ್ಜಾತಿಗಳಲ್ಲಿಯೂ ಬಡವರಿದ್ದಾರೆ. ಎಲ್ಲ ಜಾತಿ, ಧರ್ಮಗಳ ಬಡವರ ಕಲ್ಯಾಣಕ್ಕಾಗಿ ರಾಜ್ಯ ಸರಕಾರ ರೂಪಿಸುವ ಕಾರ್ಯಕ್ರಮಗಳನ್ನು ನಾನು ಸ್ವಾಗತಿಸುತ್ತೇನೆ. ಆದರೆ, ಕೇವಲ ರಾಜಕೀಯ ಲಾಭಕ್ಕಾಗಿ ಪ್ರಾಧಿಕಾರ, ನಿಗಮ ರಚನೆಯನ್ನು ಬಲವಾಗಿ ವಿರೋಧಿಸಲೇಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ ರಾಜ್ಯಾದ್ಯಂತ ಕನ್ನಡಿಗರು ಮತ್ತು ಮರಾಠಿಗರು ಪರಸ್ಪರ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಈಗ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಘೋಷಿಸಿ, ರಾಜ್ಯ ಸರಕಾರ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಪ್ರಯತ್ನ ಮಾಡುತ್ತಿದೆ. ಇದರಿಂದ ರಾಜ್ಯದ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾದರೆ ಅದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರೇ ಹೊಣೆಯಾಗಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ನಾನು ಮುಖ್ಯಮಂತ್ರಿಯಾಗಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಯಾವ ಕಾರ್ಯಕ್ರಮವೂ ನಿರ್ದಿಷ್ಟ ಜಾತಿ, ಧರ್ಮಕ್ಕೆ ಸೀಮಿತವಾದುದಲ್ಲ. ಇವೆಲ್ಲವೂ ಸರ್ವಜನಾಂಗದ ಬಡವರ ಕಲ್ಯಾಣ ಕಾರ್ಯಕ್ರಮಗಳು. ರಾಜಕೀಯ ದ್ವೇಷದಿಂದ ಈ ಕಾರ್ಯಕ್ರಮಗಳನ್ನು ನಿರ್ಲಕ್ಷಿಸುತ್ತಿರುವ ರಾಜ್ಯದ ಬಿಜೆಪಿ ಸರಕಾರ ಬಜೆಟ್ ಬೆಂಬಲ ಇಲ್ಲದ ಯೋಜನೆಗಳನ್ನು ಘೋಷಿಸುವ ಗಿಮಿಕ್ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮೀಸಲಾತಿ, ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಟೀಕಿಸುವ ಬಿಜೆಪಿ ಈಗ ಮಾಡುತ್ತಿರುವುದೇನು? ಜಾತಿ-ಜಾತಿ ನಡುವೆ ಮಾತ್ರವಲ್ಲ, ಭಾಷೆ-ಭಾಷೆ ನಡುವೆ ಜಗಳ ಹುಟ್ಟುಹಾಕುತ್ತಿದೆ. ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಅವರು ತಿಳಿಸಿದ್ದಾರೆ.

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯವೇತನ, ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ ನಷ್ಟಕ್ಕೀಡಾಗಿರುವ ಜನ ಬೀದಿಯಲ್ಲಿದ್ದಾರೆ, ಕೊರೋನ ಸೋಂಕಿನಿಂದ ಜನ ಸಾಯುತ್ತಿದ್ದಾರೆ. ಇವೆಲ್ಲಕ್ಕೂ ರಾಜ್ಯ ಸರಕಾರದ ಬಳಿ ಹಣ ಇಲ್ಲ, ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು? ಬಡತನದ ನಿರ್ಮೂಲನೆಯ ಕಾರ್ಯಕ್ರಮಗಳಿಗೆ ವೈಜ್ಞಾನಿಕವಾದ ಅಧ್ಯಯನ ಆಧಾರಿತವಾಗಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಡತನ ನಿರ್ಮೂಲನೆಯ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ, ಈಗಾಗಲೇ ಅವರ ಮುಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಿ.

-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X