ಡಿಜೆ-ಕೆಜಿ ಹಳ್ಳಿ ಹಿಂಸಾಚಾರ ಪ್ರಕರಣ: ಸಂಪತ್ ರಾಜ್ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆ

ಬೆಂಗಳೂರು, ನ.19: ಡಿಜೆ-ಕೆಜಿಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಶುಕ್ರವಾರ(ನ.20) ಮಧ್ಯಾಹ್ನ 1:30ರವರೆಗೆ ಮತ್ತೆ ಒಂದು ದಿನ ಸಿಸಿಬಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಪ್ರಕರಣ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ರನ್ನು ಎರಡು ದಿನಗಳ ಹಿಂದೆಯಷ್ಟೇ ಸಿಸಿಬಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತದನಂತರ ಎರಡು ದಿನ ಅವರನ್ನು ಸಿಸಿಬಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿತ್ತು. ಕಸ್ಟಡಿ ಅವಧಿ ಗುರುವಾರಕ್ಕೆ ಅಂತ್ಯಗೊಳ್ಳುವ ಹಿನ್ನಲೆಯಲ್ಲಿ ಅವರನ್ನು ಇಂದು ಮತ್ತೆ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರುಪಡಿಸಿದ್ದು, ಮತ್ತೆ ಒಂದು ದಿನಕ್ಕೆ ಪೊಲೀಸ್ ಕಸ್ಟಡಿ ವಿಚಾರಣೆ ವಿಸ್ತರಿಸಲಾಗಿದೆ.
Next Story