Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಮುವಾದದ ಬಗ್ಗೆ ಜಾಗೃತಿ ಮೂಡಿಸುವಲ್ಲಿ...

ಕೋಮುವಾದದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಕಾಂಗ್ರೆಸ್ ವಿಫಲ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ19 Nov 2020 6:39 PM IST
share
ಕೋಮುವಾದದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಕಾಂಗ್ರೆಸ್ ವಿಫಲ: ಸಿದ್ದರಾಮಯ್ಯ

ಬೆಂಗಳೂರು, ನ.19: ದೇಶಾದ್ಯಂತ ಕೋಮುವಾದ ವ್ಯಾಪಿಸಿಕೊಳ್ಳುತ್ತಿದೆ, ಇದರ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿರವರ 103ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೋಮುವಾದದ ಕುರಿತು ಜನತೆಗೆ ಹಾಗೂ ಕಾಂಗ್ರೆಸ್ ಕಾರ್ಯಕರ್ತೆಯರಿಗೆ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿರುವುದರಿಂದ ಇವತ್ತು ದೇಶದಲ್ಲಿ ಕೋಮುವಾದಿಗಳು ಹೆಚ್ಚಾಗುತ್ತಿದ್ದಾರೆಂದು ಆತಂಕ ವ್ಯಕ್ತಪಡಿಸಿದ್ದಾರೆ. 

ಬಿಜೆಪಿಗೆ ಡಾ.ಬಿ.ಆರ್.ಅಂಬೇಡ್ಕರ್ ರೂಪಿಸಿರುವ ಸಂವಿಧಾನದ ಬಗ್ಗೆ ಗೌರವವೇ ಇಲ್ಲ. ಆರೆಸ್ಸೆಸ್ ಒಂದು ಜಾತಿ ಸಂಘಟನೆಯಾಗಿದ್ದು, ಮೇಲ್ಜಾತಿಗಳಿಗೆ ಅಧಿಕಾರವನ್ನು ಒದಗಿಸಿಕೊಡುವ ಕೆಲಸ ಮಾಡುತ್ತಿದೆ. ಬಿಜೆಪಿ ಆರೆಸ್ಸೆಸ್‍ನ ಮುಖವಾಡದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್‍ನ ಬಹಳ ಮಂದಿಗೆ ಸಿದ್ಧಾಂತದ ಬಗ್ಗೆ ಖಚಿತತೆ ಇಲ್ಲ. ಕೇವಲ ಖುಷಿಗಾಗಿ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಮುಖ್ಯವಾಗಿ ತಳಮಟ್ಟದಲ್ಲಿ ಕಾರ್ಯನಿರ್ವಹಿಸುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಂಗ್ರೆಸ್ ಸಿದ್ಧಾಂತದ ಕುರಿತು ಖಚಿತತೆ ಇರಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ. 

ಬಿಜೆಪಿ ಮಹಿಳಾ ಮೀಸಲಾತಿ ವಿರುದ್ದ ಸುಪ್ರೀಂ ಕೋರ್ಟ್‍ನಲ್ಲಿ ಪ್ರಕರಣ ದಾಖಲಿಸಿದ್ದರು. ಮಂಡಲ್ ಕಮಿಟಿಯನ್ನು ವಿರೋಧಿಸಿದ್ದರು. ಇವುಗಳ ಬಗ್ಗೆ ಮಹಿಳಾ ಸಮುದಾಯ ಯಾಕೆ ಅರ್ಥ ಮಾಡಿಕೊಳ್ಳುತ್ತಿಲ್ಲ. ದೇಶದ ಎಲ್ಲ ವಿಮಾನ ನಿಲ್ದಾಣಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಈಗ ಮಂಗಳೂರು ವಿಮಾನ ನಿಲ್ದಾಣವನ್ನು ಅದಾನಿಗೆ ಮಾರಾಟ ಮಾಡಿಯಾಗಿದೆ ಎಂದು ಅವರು ತಿಳಿಸಿದ್ದಾರೆ. 

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಮಾಜಿ ಪ್ರಧಾನಿ ಇಂದಿರಾಗಾಂಧಿ ಬಡವರ ಪರ ಕಾರ್ಯಕ್ರಮ ಕೊಟ್ಟವರು. ಬ್ಯಾಂಕ್ ರಾಷ್ಟ್ರೀಕರಣ, ಭೂ ಸುಧಾರಣೆ ತಂದರು. ಅವರ 20 ಅಂಶದ ಕಾರ್ಯಕ್ರಮಗಳು ದಕ್ಷಿಣ ಭಾರತದ ರಾಜ್ಯಗಳಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ಸ್ಮರಿಸಿದ್ದಾರೆ.

ಇಂದಿರಾಗಾಂಧಿ ದೇಶಕ್ಕಾಗಿ ತ್ಯಾಗ ಮಾಡಿದರು. ರಾಜೀವ್ ಗಾಂಧಿಯು ದೇಶದ ಐಕ್ಯತೆಗಾಗಿ ಶ್ರಮಿಸಿದರು. ಇವತ್ತು ಪ್ರತಿಯೊಬ್ಬರ ಕೈಯಲ್ಲಿ ಮೊಬೈಲ್‍ಗಳಿವೆ. ಅದಕ್ಕೆ ಮೂಲ ಕಾರಣ ರಾಜೀವ್‍ಗಾಂಧಿಯ ದೂರದೃಷ್ಟಿಯ ಯೋಜನೆಗಳ ಫಲವಾಗಿದೆ. ಆದರೆ, ಆರೆಸ್ಸೆಸ್ ಗಾಂಧಿ ಕುಟುಂಬಕ್ಕೆ ಕಳಂಕ ತರುವ ನಿಟ್ಟಿನಲ್ಲಿ ಅಪಪ್ರಚಾರದಲ್ಲಿ ತೊಡಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ವಿ.ಎಸ್.ಉಗ್ರಪ್ಪ, ಸುದರ್ಶನ್ ಮತ್ತಿತರರಿದ್ದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾಯಿಂದ ಪಾಠ ಕಲಿಯಬೇಕಿಲ್ಲ. ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಉತ್ತಮ ಕೆಲಸ ಮಾಡಿದೆ. ಆದರೆ, ಜನರಿಗೆ ಅದರಲ್ಲೂ ಯುವ ಜನತೆಗೆ ಇದು ಅರ್ಥವಾಗುತ್ತಿಲ್ಲ. ರಾಜ್ಯದ ಜನ ಬಸವತತ್ವ, ಅಂಬೇಡ್ಕರ್, ನಾರಾಯಣ ಗುರು, ಜ್ಯೋತಿಬಾ ಫುಲೆ, ಸಾವಿತ್ರಿಬಾ ಫುಲೆ ತತ್ವಗಳಿಂದ ದೂರ ಹೋಗಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಹಿರಿಯ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X