Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾವಿರ ದಿನಗಳಲ್ಲಿ 6 ಲಕ್ಷ ಕಿ.ಮೀ....

ಸಾವಿರ ದಿನಗಳಲ್ಲಿ 6 ಲಕ್ಷ ಕಿ.ಮೀ. ಆಪ್ಟಿಕ್ ಫೈಬರ್ ಜಾಲ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್

'ಡಿಜಿಟಲ್ ಮೂಲಸೌಕರ್ಯ ವೃದ್ಧಿಗೆ ಒತ್ತು ನೀಡಿರುವ ಕೇಂದ್ರ ಸರಕಾರ'

ವಾರ್ತಾಭಾರತಿವಾರ್ತಾಭಾರತಿ19 Nov 2020 8:26 PM IST
share
ಸಾವಿರ ದಿನಗಳಲ್ಲಿ 6 ಲಕ್ಷ ಕಿ.ಮೀ. ಆಪ್ಟಿಕ್ ಫೈಬರ್ ಜಾಲ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್

ಬೆಂಗಳೂರು, ನ.19: ಡಿಜಿಟಲ್ ತಾಂತ್ರಿಕತೆಯ ಬೆಳವಣಿಗೆಗೆ ಪೂರಕವಾಗಿ ಮೂಲಸೌಕರ್ಯ ಕಲ್ಪಿಸಲು ಒತ್ತು ನೀಡಿರುವ ಕೇಂದ್ರ ಸರಕಾರವು 1000 ದಿನಗಳಲ್ಲಿ 6 ಲಕ್ಷ ಕಿ.ಮೀ. ಉದ್ದದಷ್ಟು ಆಪ್ಟಿಕ್ ಫೈಬರ್ ಕೇಬಲ್ ಜಾಲ ನಿರ್ಮಿಸಲು ಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ಸರಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದರು.

ಮೂರು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ನಡೆಯಲಿರುವ “ಬೆಂಗಳೂರು ತಂತ್ರಜ್ಞಾನ ಮೇಳ-2020’ದ (23ನೇ ಆವೃತ್ತಿ) ಉದ್ಘಾಟನಾ ಕಾರ್ಯಕ್ರಮದಲ್ಲಿ ವಚ್ರ್ಯುಯಲ್ ಆಗಿ ಪಾಲ್ಗೊಂಡು ಮಾತನಾಡಿದ ಅವರು, ಕೋವಿಡ್ ಸಂದರ್ಭವು ಒಂದೆಡೆ ನಮಗೆ ಸಂಕಷ್ಟವನ್ನು ತಂದೊಡ್ಡಿತು. ಮತ್ತೊಂದೆಡೆ, ಇಲ್ಲಿನ ಡಿಜಿಟಲ್ ತಂತ್ರಜ್ಞಾನ ಪರ್ಯಾವರಣವು ಹೊಸ ಅವಕಾಶಗಳನ್ನು ಸೃಷ್ಟಿಸಿತು ಎಂದರು.

ಜಾಗತಿಕ ತಯಾರಿಕಾ ಕಂಪನಿಗಳು ಕೋವಿಡ್ ಸನ್ನಿವೇಶದಲ್ಲಿ ಭಾರತದೆಡೆಗೆ ಧಾವಿಸಿಬಂದಿವೆ. ಕೋವಿಡ್ ಅವಧಿಯಲ್ಲಿ ದೇಶದ ಮಾಹಿತಿ ತಂತ್ರಜ್ಞಾನ ವಲಯವು ಶೇ.7ರಷ್ಟು ಬೆಳವಣಿಗೆ ಕಂಡಿದೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ ಈ ಕಂಪನಿಗಳು ಭಾರತದಲ್ಲಿ 11 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆ ಮಾಡುವ ನಿರೀಕ್ಷೆ ಇದೆ. ಆಪಲ್ ಕಂಪನಿಯು ತನ್ನ ಫೋನ್ ಹಾಗೂ ಬಿಡಿಭಾಗಗಳನ್ನು ತಯಾರಿಸುವ 11 ಘಟಕಗಳನ್ನು ಪ್ರಮುಖವಾಗಿ ಚೀನಾ ಹಾಗೂ ಇತರ ದೇಶಗಳಿಂದ ಭಾರತಕ್ಕೆ ವರ್ಗಾಯಿಸಿದ್ದು ಅದರ ಲಾಭ ಕರ್ನಾಟಕಕ್ಕೂ ಆಗಿದೆ. ಗೂಗಲ್, ಫೇಸ್ ಬುಕ್ ನಂತಹ ಕಂಪನಿಗಳು ಕೂಡ ಇಲ್ಲಿ ಹೂಡಿಕೆ ಹೆಚ್ಚಿಸಿವೆ ಎಂದು ಅವರು ಹೇಳಿದರು.

“ಡಿಜಿಟಲ್ ಇಂಡಿಯಾ” ಅಭಿಯಾನವು ನಿಜವಾಗಿಯೂ ಭಾರತದಲ್ಲಿ ಪರಿವರ್ತನೆ ತಂದಿದೆ. ಇದು ಎಲ್ಲರನ್ನೂ ಒಳಗೊಳ್ಳಿಸಿಕೊಂಡು ಬದಲಾವಣೆಗೆ ಕಾರಣವಾಗುತ್ತದೆ. ಇದರಿಂದಾಗಿ ಕಳೆದ 5 ವರ್ಷಗಳಲ್ಲಿ ಫಲಾನುಭವಿಗಳಿಗೆ 12 ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಲು ಸಾಧ್ಯವಾಗಿದೆ. ಸುಮಾರು 1.75 ಲಕ್ಷ ಕೋಟಿ ರೂಪಾಯಿಗಳಷ್ಟು ಮೊತ್ತದ ಭ್ರಷ್ಟಾಚಾರವನ್ನು ಇದು ತೊಡೆದು ಹಾಕಿದೆ ಎಂದು ರವಿಶಂಕರ್ ಪ್ರಸಾದ್ ವಿವರಿಸಿದರು.

ಮುಂಬರುವ ದಿನಗಳಲ್ಲಿ ದೇಶದ ಆರ್ಥಿಕತೆಯು ದತ್ತಾಂಶ ಆಧಾರಿತವಾಗಲಿದೆ. ಮಾಹಿತಿ ತಂತ್ರಜ್ಞಾನಕ್ಕೆ ಹೆಸರಾದ ಬೆಂಗಳೂರು ದತ್ತಾಂಶ ಆರ್ಥಿಕತೆಯ ದೊಡ್ಡ ಕೇಂದ್ರವೂ ಆಗಿ ಹೊರಹೊಮ್ಮಬೇಕು. ಕೇಂದ್ರ ಸರಕಾರವು ದತ್ತಾಂಶ ಸುರಕ್ಷತೆ ಕಾನೂನು ರೂಪಿಸಲಿದೆ. ಸದೃಢ ಕೃತಕ ಬುದ್ಧಿಮತ್ತೆ ಕಾರ್ಯನೀತಿ ಜಾರಿಗೊಳಿಸುವುದಕ್ಕೂ ಒತ್ತು ಕೊಡಲಾಗುವುದು. ಕೃತಕ ಬುದ್ಧಿಮತ್ತೆ ತಾಂತ್ರಿಕತೆಯು ಎಲ್ಲರನ್ನೂ ಒಳಗೊಂಡು ಬೆಳವಣಿಗೆಗೆ ಅನುವು ಮಾಡಿಕೊಡಬೇಕು. ಇದೇ ವೇಳೆ ಮನುಷ್ಯನ ಭಾವನೆಗಳು ಅಷ್ಟೇ ಮುಖ್ಯ ಎಂಬುದನ್ನು ಗಮನದಲ್ಲಿರಿಸಿಕೊಂಡು ಸರಕಾರ ರೂಪುರೇಷ ಸಿದ್ಧಗೊಳಿಸಲಿದೆ ಎಂದು ಅವರು ಹೇಳಿದರು.

“ಆತ್ಮನಿರ್ಭರ ಭಾರತ” ಎಂದರೆ ಪ್ರತ್ಯೇಕತೆಯಲ್ಲ. ಅದು ಎಲ್ಲವನ್ನೂ ಒಳಗೊಳ್ಳುವಂಥದ್ದೂ ಹಾಗೂ ಸಮುದಾಯದ ನಡುವೆಯೇ ಹೊರಹೊಮ್ಮುವಂಥದ್ದೂ ಆಗಿರುತ್ತದೆ. ಈಗ ಭಾರತವನ್ನು ಇಡೀ ಪ್ರಪಂಚವೇ ಎದುರು ನೋಡುತ್ತಿದೆ. “ಡಿಜಿಟಲ್ ಇಂಡಿಯಾ”ಕ್ಕೆ ಹೆಚ್ಚಿನ ಕೊಡುಗೆ ನೀಡಿರುವ ಕರ್ನಾಟಕವು ಮುಂಬರುವ ದಿನಗಳಲ್ಲಿ ಹೊಸ ತಾಂತ್ರಿಕ ಪರಿಹಾರಗಳನ್ನು ರೂಪಿಸುವಲ್ಲಿ ಕೂಡ ಮುಂಚೂಣಿಯಲ್ಲಿರಬೇಕು ಎಂದು ಅವರು ಆಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X