ಪ್ರಾಣಿ ದಯಾ ಸಂಘದ ಪದಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ನ.19: ದ.ಕ. ಜಿಲ್ಲಾ ಪ್ರಾಣಿ ದಯಾ ಸಂಘದ ರಚನೆ ಮಾಡಲು ಸರಕಾರೇತರ ಪದಾಧಿಕಾರಿಗಳ ಹುದ್ದೆಗಳಿಗೆ ಜಿಲ್ಲೆಯಲ್ಲಿನ ಪ್ರಾಣಿ ಪ್ರಿಯರು, ಪ್ರಾಣಿಗಳ ರಕ್ಷಣೆಯಲ್ಲಿ ತೊಡಗಿಸಿಕೊಂಡವರು, ಗೋಶಾಲೆ ನಡೆಸುತ್ತಿರುವವರು ಮತ್ತು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಾಣಿ ಕಲ್ಯಾಣದಲ್ಲಿ ಆಸಕ್ತಿ ಉಳ್ಳವರು ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ದ.ಕ., ಮಂಗಳೂರು ಕಚೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ನ.26ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0824-2492337ನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರ ಪ್ರಕಟನೆ ತಿಳಿಸಿದೆ.
Next Story





