Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಗಮಗಳ ರಚನೆಯ ಹಿಂದೆ ರಾಜಕೀಯದ ವಾಸನೆ:...

ನಿಗಮಗಳ ರಚನೆಯ ಹಿಂದೆ ರಾಜಕೀಯದ ವಾಸನೆ: ಪ್ರೊ. ಕೆ.ಮರುಳಸಿದ್ದಪ್ಪ

ಜಿ.ಎನ್.ನಾಗರಾಜ್ ಅವರ 'ಜಾತಿ ಬಂತು ಹೇಗೆ' ಕೃತಿ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ19 Nov 2020 11:45 PM IST
share
ನಿಗಮಗಳ ರಚನೆಯ ಹಿಂದೆ ರಾಜಕೀಯದ ವಾಸನೆ: ಪ್ರೊ. ಕೆ.ಮರುಳಸಿದ್ದಪ್ಪ

ಬೆಂಗಳೂರು, ನ. 19: ರಾಜ್ಯದಲ್ಲಿ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಮತ್ತು ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಸ್ಪಷ್ಟವಾಗಿ ರಾಜಕೀಯ ಉದ್ದೇಶದಿಂದ ಕೂಡಿದೆ ಎಂದು ಹಿರಿಯ ಸಾಹಿತಿ ಪ್ರೊ. ಕೆ. ಮರುಳಸಿದ್ದಪ್ಪ ಅವರು ಟೀಕಿಸಿದ್ದಾರೆ.

ಗುರುವಾರ 'ಬಹುರೂಪಿ' ಪ್ರಕಾಶನ ಹಮ್ಮಿಕೊಂಡಿದ್ದ ಸಂವಾದದಲ್ಲಿ ಸಿಪಿಎಂನ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಹಾಗೂ ಲೇಖಕ ಜಿ.ಎನ್.ನಾಗರಾಜ್ ಅವರ ‘ಜಾತಿ ಬಂತು ಹೇಗೆ?' ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜಾತಿ ಸಮುದಾಯಗಳ ಮತಗಳ ಮೇಲೆ ಕಣ್ಣಿಟ್ಟು ನಡೆಸಿರುವ ಈ ರಾಜಕೀಯಕ್ಕೆ ಅಂತಃಕರಣವೇ ಇಲ್ಲ ಎಂದು ಅವರು ವಿಷಾದಿಸಿದರು.

ಇವತ್ತಿನ ರಾಜಕಾರಣ ಜಾತಿಯನ್ನು ಅಸ್ತ್ರವನ್ನಾಗಿ ಬಳಸುತ್ತಿದೆ. ರಾಜ್ಯದಲ್ಲಿ ಎಲ್ಲ ಜಾತಿಗಳಿಗೂ ಒಂದು ಪ್ರಾಧಿಕಾರ ಮಾಡಲು ಹೊರಟಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರವೇ ಇದಕ್ಕೆ ಸಾಕ್ಷಿ ಒದಗಿಸುವಂತಿದೆ. ಇದು ಜಾತಿ ಉದ್ಧಾರ ಮಾಡುವ ಉದ್ದೇಶವನ್ನು ಖಂಡಿತಾ ಹೊಂದಿಲ್ಲ, ಬದಲಿಗೆ ಆ ಜಾತಿಯ ಮತಗಳನ್ನು ಮಾತ್ರ ಬಾಚಿಕೊಳ್ಳುವ ಉತ್ಸಾಹ ತೋರಿಸುತ್ತಿದೆ ಎಂದು ಟೀಕಿಸಿದರು.

ಸಂವಿಧಾನ ಜಾತ್ಯತೀತ ಆಶಯವನ್ನು ಹೊಂದಿದೆ. ಹಾಗಾಗಿ ಸ್ವಾತಂತ್ರ್ಯಾನಂತರ ಜಾತಿ ಎನ್ನುವುದು ನಾಶವಾಗಿ ಹೋಗುತ್ತದೆ ಎನ್ನುವ ಕನಸು ಇತ್ತು. ಆದರೆ, ಈಗ ಜಾತಿ ಮತ್ತು ಧರ್ಮಗಳೆರಡೂ ಸ್ವಾತಂತ್ರ್ಯಪೂರ್ವಕ್ಕಿಂತ ಬಲವಾಗಿ ಬೆಳೆದು ನಿಂತಿವೆ ಎಂದು ಮರುಳಸಿದ್ದಪ್ಪ ಇದೇ ವೇಳೆ ಕಳವಳ ವ್ಯಕ್ತಪಡಿಸಿದರು.

ಮಹಿಳಾ ಹೋರಾಟಗಾರ್ತಿ ಹಾಗೂ ಲೇಖಕಿ ಕೆ.ನೀಲಾ ಮಾತನಾಡಿ, ವಚನ ಚಳವಳಿಯ ಆಶಯವನ್ನೇ ಇಲ್ಲವಾಗಿಸುವ ಹುನ್ನಾರ ಈ ಪ್ರಾಧಿಕಾರಗಳ ರಚನೆಯ ಹಿಂದಿದೆ. ವಚನ ಚಳವಳಿಯ ಜಾತ್ಯತೀತ ಆಶಯವನ್ನು ಹರಡದಂತೆ ವ್ಯವಸ್ಥಿತ ಕೋಟೆ ರೂಪಿಸಲಾಯಿತು. ನಂತರ ಅದನ್ನು ಜಾತಿಯಾಗಿಸಿ ಅದರಿಂದ ಲಾಭ ಪಡೆಯುವ ಹುನ್ನಾರ ಈಗ ನಡೆದಿದೆ ಎಂದು ದೂರಿದರು.

ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ, ಕೃತಿಯನ್ನು ವಿಮರ್ಶಿಸುತ್ತಾ ಅಸ್ಪೃಶ್ಯತೆಯ ಅಗ್ನಿಕುಂಡ ಇನ್ನೂ ಜೀವಂತವಾಗಿದೆ. ಜಾತಿ ಎನ್ನುವುದು ವಿನಾಶವಾಗುವವರೆಗೆ ಅಸ್ಪೃಶ್ಯತೆಯ ಗಾಯಗಳು ಮರೆಯಾಗುವುದಿಲ್ಲ ಎಂದರು. ಕೃತಿಕಾರ ಜಿ.ಎನ್.ನಾಗರಾಜ್ ಮಾತನಾಡಿ, ನನ್ನ 'ಜಾತಿ ಬಂತು ಹೇಗೆ?' ಕೃತಿ ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮವನ್ನು ಶೋಧಿಸುತ್ತದೆ. ಜಾತಿಯ ವಿರುದ್ಧ ಪ್ರಬಲ ಹೋರಾಟ ಕಟ್ಟಿದ ಡಾ.ಅಂಬೇಡ್ಕರ್, ಇ.ಎಂ.ಎಸ್. ನಂಬೂದರಿಪಾಡ್, ಇ.ಕೆ.ನಾಯನಾರ್, ಬಿ.ಟಿ. ರಣದಿವೆ ಅವರ ಹೋರಾಟ ಅಮೂಲ್ಯವಾದದ್ದು ಅದನ್ನು ರಕ್ಷಿಸಿಕೊಳ್ಳಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X