ಕಲಾ ವಿಷಯದ ಲಿಖಿತ ಪರೀಕ್ಷೆಗೆ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ
ಉಡುಪಿ, ನ.20: ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನ.21 ಮತ್ತು 22ರಂದು ವಿಶೇಷ ಸಂಗೀತ ನೃತ್ಯ, ತಾಳ ವಾದ್ಯ ಲಿಖಿತ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಂದು ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಸೆಕ್ಷನ್ 144(1)ರಂತೆ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
ಈ ನಿಷೇಧಾಜ್ಞೆ ನಿಗದಿತ ಪರೀಕ್ಷಾ ಕೇಂದ್ರದ ಸುತ್ತ ನ.21 ಮತ್ತು 22ರಂದು ಬೆಳಗ್ಗೆ 9ರಿಂದ ಸಂಜೆ 6:00ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಆದೇಶ ದಲ್ಲಿ ತಿಳಿಸಲಾಗಿದೆ.
Next Story





