Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ ಶಿಕ್ಷಣ ನೀತಿ ನಿರೂಪಣೆಗೆ...

ರಾಜ್ಯದಲ್ಲಿ ಶಿಕ್ಷಣ ನೀತಿ ನಿರೂಪಣೆಗೆ ಶೈಕ್ಷಣಿಕ ಪರಿಷತ್ ಸ್ಥಾಪನೆ: ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ21 Nov 2020 8:08 PM IST
share
ರಾಜ್ಯದಲ್ಲಿ ಶಿಕ್ಷಣ ನೀತಿ ನಿರೂಪಣೆಗೆ ಶೈಕ್ಷಣಿಕ ಪರಿಷತ್ ಸ್ಥಾಪನೆ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ನ.21: ಕರ್ನಾಟಕವು ನೂತನ ಶಿಕ್ಷಣ ನೀತಿಯನ್ನು ಅನುಷ್ಟಾನಗೊಳಿಸುವ ಪ್ರಥಮ ರಾಜ್ಯವಾಗಲಿದ್ದು, ಈ ನೀತಿಯ ಭಾಗವಾಗಿ ಶಿಕ್ಷಣಕ್ಕೆ ಸಂಬಂಧಿಸಿದ ನೀತಿ ನಿರೂಪಣೆ, ಸಮಾನತೆ, ಸಮನ್ವಯತೆ ಸಾಧನೆಯ ಖಾತರಿಗೆ ರಾಜ್ಯದಲ್ಲಿ ಸ್ವಾಯತ್ತತೆ ಹೊಂದಿದ ‘ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು'ನ್ನು ಸ್ಥಾಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಶನಿವಾರ ‘ಬೆಂಗಳೂರು ತಂತ್ರಜ್ಞಾನ ಮೇಳ-2020'ದ ವರ್ಚುವಲ್ ಸಮಾವೇಶದಲ್ಲಿ ಮಾತನಾಡಿದ ಅವರು, ಜನತೆಗೆ ಆಶ್ವಾಸನೆ ನೀಡಿದಂತೆ ಬೇರೆಲ್ಲಾ ರಾಜ್ಯಗಳಿಗಿಂತ ಮೊದಲು ಈ ನೀತಿಯನ್ನು ಕರ್ನಾಟಕದಲ್ಲಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ನಾವು ದಾಪುಗಾಲನ್ನಿಟ್ಟಿದ್ದೇವೆ ಎಂದರು.

ಈ ಪ್ರಮುಖ ಶೃಂಗಮೇಳದ ಧ್ಯೇಯವಾಖ್ಯವಾದ ‘ನೆಕ್ಸ್ಟ್ ಈಸ್ ನೌ' ಶಿಕ್ಷಣ ಕ್ಷೇತ್ರಕ್ಕೆ, ನಮ್ಮ ದೇಶಕ್ಕೆ, ಪ್ರಮುಖವಾಗಿ ಕರ್ನಾಟಕ ರಾಜ್ಯಕ್ಕೆ ಅತ್ಯಂತ ಗಮನಾರ್ಹವಾಗಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ-2020ರ ಕುರಿತು ದೇಶದೆಲ್ಲೆಡೆ ಚರ್ಚೆ ನಡೆಯುತ್ತಿದೆ. ಇದೇ ಜು.29ರಂದು ಪ್ರಧಾನಿ ನರೇಂದ್ರ ಮೋದಿ ಸಮಾನವಾದ ಹಾಗೂ ನ್ಯಾಯಯುತವಾದ ಸಮಾಜವನ್ನು ರೂಪಿಸುವ ಉದಾತ್ತ ಧ್ಯೇಯದೊಂದಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ ಎಂದು ಅವರು ಹೇಳಿದರು.

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಇದು ಶೈಕ್ಷಣಿಕ ಕ್ಷೇತ್ರದಲ್ಲಿ ನಾವು ಬಲಯುತವಾಗಿರುವುದರ ಫಲಿತವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯವು ಮುಂಚಿನಿಂದಲೂ ಬೇರೆಲ್ಲಾ ರಾಜ್ಯಗಳಿಗೆ ಮಾದರಿಯಾಗುವ ಉಪಕ್ರಮಗಳನ್ನು ಜಾರಿಯಲ್ಲಿಟ್ಟಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ ಆಗಿದೆ ಎಂದು ಸುರೇಶ್ ಕುಮಾರ್ ಹೇಳಿದರು.

ಅಂತಿಮ ವರದಿಯನ್ನು ರೂಪಿಸುವಲ್ಲಿ ಹಲವಾರು ವ್ಯಕ್ತಿಗಳು ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದಾರೆ. ಸೆ.1ರಿಂದ 25ರವರೆಗೆ ರಾಜ್ಯದ ಅಸಂಖ್ಯ ಶಿಕ್ಷಕರು, ಶಿಕ್ಷಣ ತಜ್ಞರು, ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿಗಳು, ಎಸ್.ಡಿ.ಎಂ.ಸಿ ಸದಸ್ಯರು, ಖಾಸಗಿ ಶಾಲೆಗಳ ಮುಖ್ಯಸ್ಥರು, ಪೋಷಕರ ಸಂಘಗಳು ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳನ್ನು ಸಂಪರ್ಕಿಸಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳುವುದರ ಕುರಿತಂತೆ ಅವರೊಂದಿಗೆ ವಿಸ್ತೃತವಾಗಿ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ಈ ವರದಿಯನ್ನು ತಯಾರಿಸಲಾಗಿದೆ ಎಂದು ಅವರು ಹೇಳಿದರು.

ಹಾಗಾಗಿ ಈ ನೀತಿಯನ್ನು ನಾವು ಅಳವಡಿಸಿಕೊಳ್ಳಲು ಪೂರಕವಾದ ವಾತಾವರಣ ನಮ್ಮ ರಾಜ್ಯದಲ್ಲಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ದೇಶದ ಶೈಕ್ಷಣಿಕ ವ್ಯವಸ್ಥೆಗೆ ಒಂದು ಹೊಸ ದಿಸೆಯನ್ನು ಕಲ್ಪಿಸಲಿದ್ದು, ರಾಜ್ಯದಲ್ಲಿ ಈ ವರದಿ ನಮ್ಮ ಶೈಕ್ಷಣಿಕ ವ್ಯವಸ್ಥೆಯಲ್ಲಿ ಹಲವಾರು ಪ್ರಗತಿಪರವಾದ ಬದಲಾವಣೆಗೆ ನಾಂದಿಯಾಗಲಿದೆ ಎಂದು ಸುರೇಶ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ವಿಶೇಷವಾಗಿ ವರದಿಯನ್ನು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಬೇಕಾದ ತುರ್ತು ಜವಾಬ್ದಾರಿ ನಮ್ಮ ಮುಂದಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ದೂರದೃಷ್ಟಿಯ ನಾಯಕತ್ವದಲ್ಲಿ 'ನೆಕ್ಸ್ಟ್ ಇನ್' ಕರ್ನಾಟಕವನ್ನು ಜಾರಿಗೊಳಿಸಲು ಮುಂದಾಗಿದ್ದು, ಸುಧಾರಿತ ಶೈಕ್ಷಣಿಕ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಮುಂದಾಗಿದ್ದೇವೆ ಎಂದು ಸುರೇಶ್ ಕುಮಾರ್ ಹೇಳಿದರು.

ನೂತನ ಶಿಕ್ಷಣ ನೀತಿಯು ಎಲ್ಲ ಬಲಿಷ್ಠ ಅಡಿಪಾಯದ ನೀತಿಯೊಂದಿಗೆ ನಮ್ಮ ಮಕ್ಕಳನ್ನು ಭವಿಷ್ಯಕ್ಕೆ ಸಿದ್ಧಗೊಳಿಸಲು ಸಮರ್ಥ ವೇದಿಕೆಯಾಗಲಿದೆ. ಅದೇ ರೀತಿ ಈ ವರದಿ ಹಾಗೂ ಅದರ ಸದಾಶಯವನ್ನು ಅನುಷ್ಟಾನಗೊಳಿಸುವ ಸಂಬಂಧ ನಾವು ಹೆಚ್ಚು ಸಾರ್ವಜನಿಕ ಚರ್ಚೆಗೆ ಮುಂದಾಗಬೇಕಿದೆ. ವರದಿಯನ್ನು ಮುಖ್ಯಮಂತ್ರಿ ಅನುಮೋದಿಸಿದ ನಂತರ ಯಥಾವತ್ತಾಗಿ ಅನುಷ್ಟಾನಗೊಳಿಸಲು ಸರಕಾರವು ಉತ್ಸುಕವಾಗಿದೆ. ಇದರ ಆಧಾರದಲ್ಲಿ ಸಾಂಸ್ಥಿಕವಾದ ಮತ್ತು ಶೈಕ್ಷಣಿಕವಾದ ನಿರ್ಣಯಗಳನ್ನು ಕಾಲಮಿತಿಯಲ್ಲಿ ಅಳವಡಿಸಿಕೊಳ್ಳಲು ನಮ್ಮ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸುರೇಶ್ ಕುಮಾರ್  ಹೇಳಿದರು.

ಜಾಗತಿಕ ಅಗತ್ಯಗಳಿಗನುಗುಣವಾಗಿ ಬಾಲ್ಯ ಶಿಕ್ಷಣವನ್ನು ಮಾರ್ಪಾಡುಗೊಳಿಸಲಾಗುವುದು. ಶೈಕ್ಷಣಿಕ ಶಾಸ್ತ್ರದ ಮಟ್ಟಕ್ಕನುಗುಣವಾಗಿ ಭಾರತೀಯ ಜ್ಞಾನವನ್ನು ವೈಜ್ಞಾನಿಕವಾಗಿ ಅಳವಡಿಸಿಕೊಳ್ಳಲಾಗುತ್ತದೆ. ಮಾತೃಭಾಷೆ ಶಿಕ್ಷಣಕ್ಕೆ ಆದ್ಯತೆ, ಪರೀಕ್ಷಾ ವ್ಯವಸ್ಥೆಯ ಸುಧಾರಣೆ, ಶಾಲೆಗಳಲ್ಲಿ ವೃತ್ತಿಶಿಕ್ಷಣ ಪಠ್ಯಕ್ರಮ, ಶಿಕ್ಷಕರ ತರಬೇತಿ ಸಂವರ್ಧನೆ, ಸೇವಾ ಪೂರ್ವ ಶಿಕ್ಷಣದ ಬಲವರ್ಧನೆ, ಕಲ್ಯಾಣ ಕರ್ನಾಟಕ ಪ್ರದೇಶದ ಹಿಂದುಳಿದ ಜಿಲ್ಲೆಗಳ ಶೈಕ್ಷಣಿಕ ಸುಧಾರಣೆಗಾಗಿ ವಿಶೇಷ ಶಿಕ್ಞಣ ವಲಯಗಳ ಸ್ಥಾಪನೆ, ನಮ್ಮ ಮಾನವಶಕ್ತಿಯನ್ನು ಪೂರ್ಣ ಬಳಕೆ ಮಾಡಿಕೊಳ್ಳಲು ಶಾಲಾ ಸಂಕೀರ್ಣಗಳ ಸೃಷ್ಟಿ ಸೇರಿದಂತೆ ಶಿಕ್ಷಣ ಇಲಾಖೆಗೆ ನವ ಮನ್ವಂತರವನ್ನು ಕಲ್ಪಿಸುವ ಸಂಕಲ್ಪವನ್ನು ನಮ್ಮ ಸರಕಾರವು ಹೊಂದಿದೆ ಎಂದು ಅವರು ಹೇಳಿದರು.

ವರ್ಚುವಲ್ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸೇರಿದಂತೆ 20 ದೇಶಗಳ 4 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X