Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೆಸಿಎಫ್ ಅಂತರ್‌ರಾಷ್ಟ್ರೀಯ ಸಮಿತಿ...

ಕೆಸಿಎಫ್ ಅಂತರ್‌ರಾಷ್ಟ್ರೀಯ ಸಮಿತಿ ವತಿಯಿಂದ ಗ್ಲೋಬಲ್ ಮೀಲಾದ್ ಕಾನ್ಫರೆನ್ಸ್

ಕೆಸಿಎಫ್ ಕಾರ್ಯಕರ್ತರ ಬಗ್ಗೆ ಬಹಳ ಹೆಮ್ಮೆಯಿದೆ: ಎಪಿ ಅಬೂಬಕ್ಕರ್ ಮುಸ್ಲಿಯಾರ್

ವಾರ್ತಾಭಾರತಿವಾರ್ತಾಭಾರತಿ21 Nov 2020 10:14 PM IST
share
ಕೆಸಿಎಫ್ ಅಂತರ್‌ರಾಷ್ಟ್ರೀಯ ಸಮಿತಿ ವತಿಯಿಂದ ಗ್ಲೋಬಲ್ ಮೀಲಾದ್ ಕಾನ್ಫರೆನ್ಸ್

ಯುಎಇ: ಕೆಸಿಎಫ್ ಅಂತರ್‌ರಾಷ್ಟ್ರೀಯ ಸಮಿತಿ ಆಯೋಜಿಸಿದ ಗ್ಲೋಬಲ್ ಮೀಲಾದ್ ಕಾನ್ಫರೆನ್ಸ್ ನ.20 ರಂದು ಝೂಮ್ ಆ್ಯಪ್ ಮೂಲಕ ನಡೆಯಿತು. ಭಾರತದ ಗ್ರ್ಯಾಂಡ್ ಮುಫ್ತಿ, ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಭಾರತೀಯ ಕಾಲಮಾನ ರಾತ್ರಿ 7.30 ಕ್ಕೆ ಆರಂಭಿಸಿದ ಕಾರ್ಯಕ್ರಮದಲ್ಲಿ ಒಂದು ಗಂಟೆಗಳ ಕಾಲ ನವಾಝ್ ಸಅದಿ ಕಕ್ಕೆಪದವು, ಮಸೂದ್ ಸಅದಿ ಗಂಡಿಬಾಗಿಲು, ಸಾಬಿತ್ SJM ಮೀಡಿಯಾ ರವರ ನೇತೃತ್ವದಲ್ಲಿ 'ಆತ್ಮೀಯ ಮಜ್ಲಿಸ್' ನಡೆಯಿತು. ನಂತರ ಆರಂಭವಾದ ಸಭಾ ಕಾರ್ಯಕ್ರಮದಲ್ಲಿ ಹಾಫಿಲ್ ದರ್ವೇಶ್ ಅಲೀ ಬಹರೈನ್ ರವರು ಕಿರಾಅತ್ ಪಾರಾಯಣ ನಡೆಸಿದರು. ಉಮರಾ ನೇತಾರ ಮುಹಮ್ಮದ್ ಹಾಜಿ ಸಾಗರ ಉದ್ಘಾಟನೆ ಮಾಡಿದರು.

ಎಸ್.ಪಿ ಹಂಝ ಸಖಾಫಿ ಬಂಟ್ವಾಳರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್‌ರಾಷ್ಟ್ರೀಯ ಸಮಿತಿ ಅಧ್ಯಕ್ಷ ಡಾ.ಶೇಖ್ ಬಾವ ಮಂಗಳೂರು, ಕರ್ನಾಟಕ ಮುಸ್ಲಿಮ್ ಜಮಾಅತ್ ಪ್ರಧಾನ ಕಾರ್ಯದರ್ಶಿ ಮೌಲಾನಾ ಶಾಫೀ ಸಅದಿ ಬೆಂಗಳೂರು, ರಾಜ್ಯ ಎಸ್.ವೈ.ಎಸ್ ಪ್ರಧಾನ ಕಾರ್ಯದರ್ಶಿ ಡಾ.ಅಬ್ದುರ್ರಶೀದ್ ಝೈನಿ, ಎಸ್ಸೆಸ್ಸೆಫ್ ಹಂಗಾಮಿ ಅಧ್ಯಕ್ಷ ಸುಫ್ಯಾನ್ ಸಖಾಫಿ ಕಾವಳಕಟ್ಟೆಯವರು ಮಾತನಾಡಿ ಶುಭ ಹಾರೈಸಿದರು.

ನಂತರ ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಹುಬ್ಬುರ್ರಸೂಲ್ ಪ್ರಭಾಷಣ ಮಾಡಿದರು. ನಾವು ನಮ್ಮ ಮಾತಾಪಿತರಿಗಿಂತ, ಪತ್ನಿ ಮಕ್ಕಳಿಗಿಂತ, ಸಹಪಾಟಿಗಳಿಗಿಂತ ಅಥವ ಸ್ವಂತ ಶರೀರಕ್ಕಿಂತ ಅಧಿಕವಾಗಿ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ತಂಙಳ್ ರವರನ್ನು ಪ್ರೀತಿಸುವವರಾಗಬೇಕು. ಆರ್ಥಿಕವಾಗಲಿ, ಕೌಟುಂಬಿಕವಾಗಲಿ ಅಥವ ಇನ್ನಿತರ ಯಾವುದೇ ತೊಂದರೆಗಳಿದ್ದರೂ ಅದಕ್ಕೆ ಪರಿಹಾರ ಲೋಕ ಪ್ರವಾದಿ (ಸ.ಅ) ತಂಙಳ್ ರವರಾಗಿದ್ದಾರೆ ಎಂದು ಅವರು ತಿಳಿಸಿದರು.

ನಾವು ಜನಿಸಿದ ನಮ್ಮ ಸ್ವಂತ ದೇಶದಲ್ಲಿ ಸಿಗುವ ಸ್ವಾತಂತ್ರ್ಯ ವಿದೇಶದಲ್ಲಿ ಸಿಗಲು ಸಾಧ್ಯವಿಲ್ಲ. ಆದರೂ ಅಲ್ಲಿಯ ನೀತಿ ನಿಯಮಗಳನ್ನು ಮೀರದೆ ಉಲಮಾ ನೇತಾರರ ನಿರ್ದೇಶನದಂತೆ ವಿದೇಶದಲ್ಲಿ ಉತ್ತಮವಾದ ರೀತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಕೆಸಿಎಫ್ ಕಾರ್ಯಕರ್ತರ ಬಗ್ಗೆ ನನಗೆ ಬಹಳ ಹೆಮ್ಮೆಯಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಗಳೂರಿನ ಹೃದಯ ಭಾಗವಾದ ಅಡ್ಯಾರ್ ಕಣ್ಣೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಲ್-ಮರ್ಕಝುಲ್ ಇಸ್ಲಾಮಿ ಕಲ್ಚರಲ್ ಸೆಂಟರ್ ಇದರ ಕಾಮಗಾರಿ ಪೂರ್ತಿಗೊಳಿಸಲು ಬಹುದೊಡ್ಡ ಮೊತ್ತವೊಂದು ಆವಶ್ಯಕತೆಯಿದೆ. ಇದಕ್ಕೆ ಬೇಕಾದ ಸಹಾಯ ಸಹಕಾರ ಕೆಸಿಎಫ್ ಸಂಘಟನೆ ನೀಡುತ್ತಿದೆ ಹಾಗೂ ಇನ್ನೂ ಸಹಾಯ ಮಾಡಬೇಕು ಎಂದು ಉಸ್ತಾದರು ಸೂಚಿಸಿದರು.

ರಬೀಉಲ್ ಅವ್ವಲ್ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ತಂಙಳ್ ರವರ ಜನ್ಮ ತಿಂಗಳಾದ್ದರಿಂದ ಈ ತಿಂಗಳಲ್ಲಿ ಪ್ರವಾದಿಯವ ಮದ್ಹ್ ಹೇಳುವುದಕ್ಕೆ ಪ್ರತ್ಯೇಕ ಪ್ರತಿಫಲವಿದ್ದರೂ ಇತರ ಸಮಯಗಳಲ್ಲೂ ಪ್ರವಾದಿ (ಸ.ಅ) ತಂಙಳ್ ರವರ ಮದ್ಹ್ ಹೇಳುವುದನ್ನು ಕಡಿಮೆ ಮಾಡಬಾರದು ಎಂದು ನೌಫಲ್ ಸಖಾಫಿ ಕಳಸ ಹೇಳಿದರು.

ಗ್ಲೋಬಲ್ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮದೊಂದಿಗೆ ನಡೆದ ಅನುಸ್ಮರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಕಾಲಘಟ್ಟದಲ್ಲಿ ನಮಗೆ ನೇತೃತ್ವ ನೀಡಿದ ತಾಜುಲ್ ಉಲಮಾ, ನೂರುಲ್ ಉಲಮಾ, ತಾಜುಲ್ ಫುಖಹಾಅ್ ಹಾಗೂ ಇನ್ನಿತರ ನೇತಾರರು ನಮ್ಮನ್ನು ಬಿಟ್ಟು ಈ ತಾತ್ಕಾಲಿಕ ಲೋಕದಿಂದ ವಿದಾಯ ಹೇಳಿದರೂ ಅವರ ಕಾರ್ಯಾಚರಣೆ ನಮ್ಮ ಮನಸ್ಸಿನಲ್ಲಿ ಇಂದೂ ಅಮರವಾಗಿ ಉಳಿದಿದೆ ಎಂದು ಹೇಳಿದರು.

ಡಾ.ಹಝ್ರತ್ ಮುಹಮ್ಮದ್ ಪಾಝಿಲ್ ರಝ್ವೀ ಕಾವಳಕಟ್ಟೆ ಕಾರ್ಯಕ್ರಮದ ಕೊನೆಯಲ್ಲಿ ಪ್ರಾರ್ಥನಾ ಮಜ್ಲಿಸ್ ಗೆ ನೇತೃತ್ವ ನೀಡಿದರು. ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿಯ ನಾಯಕರಾದ ಪಿ.ಎಂ ಅಬ್ದುಲ್ ಹಮೀದ್ ಈಶ್ವರಮಂಗಳ, ಅಬೂಬಕ್ಕರ್ ಹಾಜಿ ರೈಸ್ಕೋ, ರಹೀಮ್ ಸಅದಿ ಕತ್ತಾರ್, ಅಲೀ ಮುಸ್ಲಿಯಾರ್ ಬಹರೈನ್ ಹಾಗೂ ರಾಷ್ಟ್ರೀಯ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.

ಸರಿಸುಮಾರು 1,000ದಷ್ಟು ಸದಸ್ಯರು ಭಾಗಿಯಾದ ಕಾರ್ಯಕ್ರಮವನ್ನು ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿ ಫೈನಾನ್ಷಿಯಲ್‌ ಕಂಟ್ರೋಲರ್ ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಳ ರವರು ನಿರೂಪಿಸಿದರು. ಕೆಸಿಎಫ್ ಅಂತರ್‌ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಖಮರುದ್ದೀನ್ ಗೂಡಿನಬಳಿ ಸ್ವಾಗತಿಸಿ, ಅಡ್ಮಿನ್ ಇಲಾಖೆಯ ಕಾರ್ಯದರ್ಶಿ ಇಕ್ಬಾಲ್ ಬರಕ ಒಮಾನ್ ರವರು ಧನ್ಯವಾದ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X