Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೆರುವಾಜೆ ಅಡಿಕೆ ಮರ ಏರುವ ಯಂತ್ರ...

ಪೆರುವಾಜೆ ಅಡಿಕೆ ಮರ ಏರುವ ಯಂತ್ರ ಪ್ರಾತ್ಯಕ್ಷಿಕೆ, ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ22 Nov 2020 6:28 PM IST
share
ಪೆರುವಾಜೆ ಅಡಿಕೆ ಮರ ಏರುವ ಯಂತ್ರ ಪ್ರಾತ್ಯಕ್ಷಿಕೆ, ಪ್ರದರ್ಶನ

ಪುತ್ತೂರು : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಪೆರುವಾಜೆ ಆಳ್ವ ಫಾಮ್ರ್ಸ್ ಸಹಯೋಗದಲ್ಲಿ ಆಳ್ವ ಫಾಮ್ರ್ಸ್ ನಲ್ಲಿ ಕೃಷಿ ಯಂತ್ರಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಕಾರ್ಯಕ್ರಮ ರವಿವಾರ ನಡೆಯಿತು.

ಆಳ್ವಫಾಮ್ರ್ಸ್ ನ ಮಾಲಕಿ ಕುಂಬ್ರ ಲಲಿತಾ ಎಸ್.ಆಳ್ವ  ಹಿಂಗಾರ ಅರಳಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿ ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್ ಕಾನಾವು ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಕೃಷಿಕರಿಗೆ ಪೂರಕವಾದ ಕಾರ್ಯಕ್ರಮ ಅನುಷ್ಠಾನಿಸುವುದು ಉತ್ತಮ ಸಂಗತಿ. ಆಳ್ವಫಾಮ್ರ್ಸ್ ನಲ್ಲಿ ನಡೆದ ಯಂತ್ರಗಳ ಪ್ರಾತ್ಯಕ್ಷಿಕೆ ಶ್ಲಾಘನೀಯ ಕಾರ್ಯ ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ನೇಸರ ಯುವಕ ಮಂಡಲದ ಗೌರವಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಸಮಾಜದ ಸರ್ವರ ಅನುಕೂಲಕ್ಕೆ ಪೂರಕವಾಗಿ ನಮ್ಮ ಸಂಘಟನೆ ಹತ್ತಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ಭವಿಷ್ಯದಲ್ಲಿಯು ಇನ್ನಷ್ಟು ಯೋಚನೆಗಳಿದ್ದು, ಅದನ್ನು ಕಾರ್ಯರೂಪಕ್ಕೆ ತರಲಾಗುವುದು. ಆಳ್ವಫಾಮ್ರ್ಸ್ ನ ಸಹಯೋಗದಲ್ಲಿ ನಡೆದ ಕೃಷಿ ಯಂತ್ರಗಳ ಪ್ರಾತ್ಯಕ್ಷಿಕೆ ಒಂದು ಮಾದರಿ ಕಾರ್ಯಕ್ರಮವಾಗಿ ರೂಪುಗೊಳ್ಳಲು ಸರ್ವರ ಸಹಕಾರ ಕಾರಣವಾಗಿದೆ ಎಂದರು.

ಬೆಳ್ಳಾರೆ ಮಂಡಲದ ಮಾಜಿ ಪ್ರಧಾನ, ಪ್ರಗತಿಪರ ಕೃಷಿಕ ಜಯಸೂರ್ಯ ರೈ ಬೋರಡ್ಕ ಆಧುನಿಕ ಪದ್ಧತಿಯೊಂದಿಗೆ ಕೃಷಿಯನ್ನು ಅವಲಂಬಿಸಿದರೆ ಅದರಿಂದ ಯಶಸ್ಸು ಸಾಧ್ಯವಿದೆ. ಕೃಷಿ ಚಟುವಟಿಕೆ ಸುಲಭವಾಗಿ, ಕಡಿಮೆ ಅವಧಿಯಲ್ಲಿ ಕೆಲಸ ಸಾಗಲು ಹೊಸ ಹೊಸ ಸಾಧನಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಕೃಷಿಕರು ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಪೆರುವಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಉಮೇಶ್ ಕೆಎಂಬಿ, ಮುಕ್ಕೂರು ಜ್ಯೋತಿ ಯುವಕ ಮಂಡಲದ ಮಾಜಿ ಅಧ್ಯಕ್ಷ ಸತ್ಯಪ್ರಸಾದ್ ಕಂಡಿಪ್ಪಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗುಡ್ಡಪ್ಪ ಗೌಡ ಅಡ್ಯತಕಂಡ, ಮುಕ್ಕೂರು-ಪೆರುವಾಜೆ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷ ಕಿರಣ್ ಚಾಮುಂಡಿಮೂಲೆ, ಮುಕ್ಕೂರು ಯುವಸೇನೆ ಅಧ್ಯಕ್ಷ ಸಚಿನ್ ರೈ ಪೂವಾಜೆ, ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಅಡೀಲು, ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಅಧ್ಯಕ್ಷ ರಮೇಶ್ ಕಾನಾವು ಉಪಸ್ಥಿತರಿದ್ದರು.

ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಸ್ವಾಗತಿಸಿ, ನೇಸರ ಯುವಕ ಮಂಡಲ ಕಾರ್ಯದರ್ಶಿ ಶಶಿಕುಮಾರ್ ಬಿ.ಎನ್. ವಂದಿಸಿದರು. ರಕ್ಷಿತಾ ಅಡ್ಯತಕಂಡ ನಿರೂಪಿಸಿದರು.

ಸಮ್ಮಾನ ಕಾರ್ಯಕ್ರಮ

ಇದೇ ಸಂದರ್ಭದಲ್ಲಿ ಮಿನಿ ಸ್ಕೂಟಿ ಟಿಪ್ಪರ್ ಸಂಶೋಧಕ ಮಂಜುನಾಥನಗರದ ಪುರುಷೋತ್ತಮ ಅವರನ್ನು ಸನ್ಮಾನಿಸಲಾಯಿತು. ಆಳ್ವಫಾಮ್ರ್ಸ್‍ನ ಯಜಮಾನಿ ಕುಂಬ್ರ ಲಲಿತಾ ಎಸ್.ಆಳ್ವ ಅವರನ್ನು ಗೌರವಿಸಲಾಯಿತು. 

ಪ್ರಾತ್ಯಕ್ಷಿಕೆ-ಪ್ರದರ್ಶನ

ಅಗ್ರಿ ಡಿಪೋ ಇದರ ಮಾರುಕಟ್ಟೆ ಮುಖ್ಯಸ್ತ ರಾಜರಾಮ ಕಾಡೂರು ಅವರು ಕೃಷಿ ಯಂತ್ರಗಳ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ನೀಡಿದರು. ಅಡಿಕೆ ಮರ ಏರುವ ಯಂತ್ರ, ತೆಂಗಿನ ಮರ ಏರುವ ಯಂತ್ರ, ಹುಲ್ಲು ಕತ್ತರಿಸುವ, ಅಡಿಕೆ ಮರದ ಬುಡ ಅಗತೆ ಯಂತ್ರ, ಮಿನಿ ಸ್ಕೂಟಿ ಟಿಪ್ಪರ್, ರಿಕ್ಷಾ ಟಿಪ್ಪರ್ ಇದರ ಪ್ರಾತ್ಯಕ್ಷಿಕೆ ನಡೆಯಿತು. ನೂರಾರು ಕೃಷಿಕರು ಇದರ ಮಾಹಿತಿ ಪಡೆದರು.  
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X