ಐಎಂಎ ಬಹುಕೋಟಿ ವಂಚನೆ ಪ್ರಕರಣ: ಮಾಜಿ ಸಚಿವ ರೋಷನ್ ಬೇಗ್ ಸಿಬಿಐ ವಶಕ್ಕೆ
ಬೆಂಗಳೂರು, ನ.22: ಐ-ಮಾನಿಟರಿ ಅಡ್ವೈಸರಿ (ಐಎಂಎ) ಕಂಪೆನಿ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಆರ್.ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ರವಿವಾರ ಬೆಳಗ್ಗೆ ಅವರ ನಿವಾಸದಿಂದ ರೋಷನ್ ಬೇಗ್ ಅವರನ್ನು ಕರೆದೊಯ್ದು ಅಧಿಕಾರಿಗಳು ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.
ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ಈ ಹಿಂದೆ ರೋಷನ್ ಬೇಗ್ ವಿರುದ್ಧ 200 ಕೋಟಿ ರೂಪಾಯಿ ಹಣ ಪಡೆದಿರುವ ಆರೋಪ ಮಾಡಿದ್ದರು.
Next Story