Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾರಿ ತಪ್ಪಿರುವ ಕಾಂಗ್ರೆಸ್ಸಿಗರಿಗೆ...

ದಾರಿ ತಪ್ಪಿರುವ ಕಾಂಗ್ರೆಸ್ಸಿಗರಿಗೆ ದೇಶಭಕ್ತಿಯ ಪಾಠ ಹೇಳಿಕೊಡಲು ಯಾರಿದ್ದಾರೆ ?

ಸಿದ್ದರಾಮಯ್ಯರಿಗೆ ಸಿ.ಟಿ.ರವಿ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ22 Nov 2020 8:01 PM IST
share
ದಾರಿ ತಪ್ಪಿರುವ ಕಾಂಗ್ರೆಸ್ಸಿಗರಿಗೆ ದೇಶಭಕ್ತಿಯ ಪಾಠ ಹೇಳಿಕೊಡಲು ಯಾರಿದ್ದಾರೆ ?

ಬೆಂಗಳೂರು, ನ. 22: "ಮಹಾತ್ಮ ಗಾಂಧಿಯವರು ಬದುಕಿಲ್ಲ, ಕಾಂಗ್ರೆಸ್ ಅವರ ತತ್ವಕ್ಕೆ ನೆಹರು ಅವರ ಕಾಲದಲ್ಲಿಯೇ ಎಳ್ಳುನೀರು ಬಿಟ್ಟಾಗಿದೆ. ದೇಶಭಕ್ತಿ ಸರಳವಾಗಿ ಅರ್ಥವಾಗಲು 'ಸಂಘದ ಶಾಖೆ'ಗಿಂತ ಬೇರೆ ದಾರಿಯಿಲ್ಲ. ಅದಕ್ಕಾಗಿಯೇ ಸಾರ್ವಜನಿಕ ರೂಪದ ಸಂಪರ್ಕ ಮಾಡಿದ್ದೇನೆ. ಇನ್ನೆಷ್ಟು ದಿನ ನಯವಂಚಕ, ಸ್ವಾರ್ಥದ ರಾಜಕಾರಣ? ನಿಮಗೆ ಬಿಟ್ಟಿದ್ದು..." ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಸಿ.ಟಿ.ರವಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, 'ನೀವಿರುವ ಪಕ್ಷದಲ್ಲಿ ದೇಶಕ್ಕಿಂತ ಮತಬ್ಯಾಂಕ್ ಮುಖ್ಯವಾಗಿದೆ, ಪ್ರಜಾಪ್ರಭುತ್ವಕ್ಕಿಂತ ರಾಜ ಪ್ರಭುತ್ವದ ಮಾದರಿಯ ಕುಟುಂಬ ರಾಜಕಾರಣವಿದೆ. ದಾರಿ ತಪ್ಪಿರುವ ಕಾಂಗ್ರೆಸ್ಸಿಗರಿಗೆ ದೇಶಭಕ್ತಿಯ ಪಾಠ ಹೇಳಿಕೊಡಲು ಯಾರಿದ್ದಾರೆ?' ಎಂದು ಪ್ರಶ್ನಿಸಿದ್ದಾರೆ.

'ನಾನು ನಿಮ್ಮ ಹಾಗೆ, ನೀವು ಕಾಂಗ್ರೆಸ್ ಸಂಸ್ಥಾಪಕ ಎಓ ಹ್ಯೂಮ್‍ರ ಮೊಮ್ಮಗನೋ, ಮರಿಮಗನೋ ಎಂದು ಕೇಳುವುದಿಲ್ಲ. ಇಂದಿರಾ ಗಾಂಧಿಯವರ ದತ್ತುಪುತ್ರ ಎಂದು ಹೇಳುವುದಿಲ್ಲ. ಅಧಿಕಾರಕ್ಕಾಗಿ ಪಕ್ಷ ಬದಲಾಯಿಸಿದರು ಎಂದು ಆರೋಪಿಸುವುದಿಲ್ಲ. ಬದಲಾಗಿ ವಂಶವಾದಕ್ಕಿಂತ, ಜಾತಿವಾದಕ್ಕಿಂತ, ರಾಷ್ಟ್ರವಾದ ದೇಶಕ್ಕೆ ಒಳ್ಳೆಯದು ಎಂದಷ್ಟೇ ಹೇಳಬಯಸುತ್ತೇನೆ' ಎಂದು ಸಿ.ಟಿ.ರವಿ ಟೀಕಿಸಿದ್ದಾರೆ.

'ಸಂಘ ಸ್ವಯಂಸೇವಕರಿಗೆ ಹೇಳಿಕೊಟ್ಟಿದ್ದು ದೇಶ ಮೊದಲು ಎನ್ನುವ ತತ್ವವನ್ನು. 'ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ' ಎಂಬ ಭಾವವನ್ನು. ಇದು ಅರ್ಥ ವಾಗಬೇಕಾದರೆ, ಅಸ್ಪೃಶ್ಯತೆಯ, ಜಾತೀಯತೆಯ ಸೋಂಕಿಲ್ಲದೆ ನಾವೆಲ್ಲರೂ ಒಂದು, ಭಾರತಮಾತೆಯ ಮಕ್ಕಳು ಎಂದು ಬದುಕಬೇಕಾದರೆ ನೀವು 'ಶಾಖೆ'ಗೆ ಬರಬೇಕು' ಎಂದು ಸಿ.ಟಿ.ರವಿ, ಸಿದ್ದರಾಮಯ್ಯನವರನ್ನು ಮತ್ತೊಮ್ಮೆ ಸಂಘದ ಶಾಖೆಗೆ ಆಹ್ವಾನಿಸಿದರು.

'ಸಿದ್ದರಾಮಯ್ಯನವರೇ, ನಾನು ಆರೆಸೆಸ್ಸ್ ಸಂಸ್ಥಾಪಕ ಅಲ್ಲ, ನಾನೊಬ್ಬ ಸಂಘದ ಸ್ವಯಂಸೇವಕ. ಪರಮ ಪೂಜ್ಯ ಡಾ.ಕೇಶವ ಬಲಿರಾಮ ಹೆಡಗೇವಾರ್ ಅವರು ಗುರುವಾಗಿ ಸ್ವೀಕರಿಸಿದ್ದು ಸಹಸ್ರಾರು ವರ್ಷಗಳಿಂದ ಪ್ರೇರಣೆ ನೀಡಿದ ಭಗವದ್ ಧ್ವಜವನ್ನು ಮತ್ತು 'ವ್ಯಕ್ತಿಗಿಂತ ತತ್ವ ಶ್ರೇಷ್ಠ' ಎಂಬ ಸಿದ್ದಾಂತವನ್ನು' ಎಂದು ರವಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X