Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಲವ್ ಜಿಹಾದ್’ಕುರಿತು ಕರಡು ಕಾನೂನಿನಲ್ಲಿ...

‘ಲವ್ ಜಿಹಾದ್’ಕುರಿತು ಕರಡು ಕಾನೂನಿನಲ್ಲಿ ಬಲವಂತದ ಮತಾಂತರಕ್ಕೆ ಐದು ವರ್ಷ ಜೈಲು,ವಿವಾಹ ರದ್ದತಿ ಪ್ರಸ್ತಾವ

ವಾರ್ತಾಭಾರತಿವಾರ್ತಾಭಾರತಿ22 Nov 2020 10:57 PM IST
share
‘ಲವ್ ಜಿಹಾದ್’ಕುರಿತು ಕರಡು ಕಾನೂನಿನಲ್ಲಿ ಬಲವಂತದ ಮತಾಂತರಕ್ಕೆ ಐದು ವರ್ಷ ಜೈಲು,ವಿವಾಹ ರದ್ದತಿ ಪ್ರಸ್ತಾವ

ಹೊಸದಿಲ್ಲಿ,ನ.22: ಬಲವಂತದ ಮತಾಂತರದ ನಡೆದಿದೆ ಎಂದು ಕಂಡು ಬಂದರೆ ಮದುವೆಯನ್ನು ರದ್ದುಗೊಳಿಸಲು ಉದ್ದೇಶಿತ ಕಾನೂನಿನ ಕರಡನ್ನು ಉತ್ತರ ಪ್ರದೇಶ ಸರಕಾರವು ಸಿದ್ಧಪಡಿಸಿದೆ.

ಕರಡು ‘ಅಕ್ರಮ ಮತಾಂತರ ನಿಷೇಧ ಮಸೂದೆ 2020’ಲವ್ ಜಿಹಾದ್ ಅಥವಾ ಬಿಜೆಪಿ ನಾಯಕರು ಆಗಾಗ್ಗೆ ಹೇಳುವಂತೆ ಪ್ರೇಮ ಮತ್ತು ವಿವಾಹದ ಸೋಗಿನಲ್ಲಿ ಹಿಂದು ಮಹಿಳೆಯರನ್ನು ಇಸ್ಲಾಮ್‌ಗೆ ಮತಾಂತರಗೊಳಿಸುವ ‘ಒಳಸಂಚ ’ನ್ನು ಮಟ್ಟಹಾಕುವ ಉದ್ದೇಶವನ್ನು ಹೊಂದಿದೆ. ಕೆಲವೇ ದಿನಗಳ ಹಿಂದೆ ಉತ್ತರ ಪ್ರದೇಶ ಮತ್ತು ಕನಿಷ್ಠ ಮೂರು ಇತರ ಬಿಜೆಪಿ ಆಡಳಿತದ ರಾಜ್ಯಗಳು ಲವ್‌ಜಿಹಾದ್ ವಿರುದ್ಧ ಕಾನೂನನ್ನು ತರುವ ಭರವಸೆಯನ್ನು ನೀಡಿದ್ದವು.

ಕರಡು ಕಾನೂನನ್ನು ರೂಪಿಸಿರುವ ರಾಜ್ಯದ ಗೃಹ ಇಲಾಖೆಯು ಅದನ್ನು ಕಾನೂನು ಇಲಾಖೆಗೆ ಸಲ್ಲಿಸಿದೆ. ನೂತನ ಮಸೂದೆಯು ಶೀಘ್ರವೇ ರಾಜ್ಯ ಸಂಪುಟದ ಮುಂದೆ ಮಂಡನೆಯಾಗಲಿದೆ ಎಂದು ಹೇಳಲಾಗಿದೆ.

 ಮದುವೆಯ ಮೂಲಕ ಸೇರಿದಂತೆ ಬಲವಂತದ ಮತಾಂತರಕ್ಕೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 15,000 ರೂ.ದಂಡವನ್ನು ಕರಡು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಮಹಿಳೆಯೋರ್ವಳು ಮದುವೆಗೆಂದೇ ಮತಾಂತರಗೊಂಡಿದ್ದರೆ ಮತ್ತು ಯಾರಾದರೂ ಪೊಲೀಸರಿಗೆ ದೂರು ನೀಡಿದರೆ ತನಿಖೆ ನಡೆಸಬೇಕಾಗುತ್ತದೆ. ಕಪಟದಿಂದ ಮತಾಂತರಗೊಳಿಸಿರುವುದು ತನಿಖೆಯಲ್ಲಿ ಕಂಡು ಬಂದರೆ ಮದುವೆಯನ್ನು ರದ್ದುಗೊಳಿಸಲಾಗುತ್ತದೆ. ಸಾಮೂಹಿಕ ಮತಾಂತರಕ್ಕೆ 10 ವರ್ಷಗಳ ಜೈಲು ಶಿಕ್ಷೆಯನ್ನೂ ಕರಡು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಈ ಮಸೂದೆಯಡಿ ಮತಾಂತರ ಜಾಮೀನುರಹಿತ ಅಪರಾಧವಾಗಲಿದೆ.

ಉದ್ದೇಶಿತ ಕಾನೂನಿನಲ್ಲಿ ಅಂತರ್ ಧರ್ಮೀಯ ವಿವಾಹಗಳಿಗೆ ನಿರ್ಬಂಧವಿಲ್ಲ. ಬಲವಂತದ,ಆಮಿಷವೊಡ್ಡುವ ಅಥವಾ ಮದುವೆಗಳ ಮೂಲಕ ಮತಾಂತರವನ್ನು ಅಪರಾಧವನ್ನಾಗಿಸುವುದು ಮಾತ್ರ ಕಾನೂನಿನ ಉದ್ದೇಶವಾಗಿದೆ. ಈ ಕಾನೂನಿನಡಿ ಧಾರ್ಮಿಕ ಮತಾಂತರಕ್ಕೆ ಅವಕಾಶವಿದೆ,ಆದರೆ ಬಲವಂತದ ಅಥವಾ ಆಮಿಷದ ಮೂಲಕ ಮತಾಂತರಕ್ಕೆ ಅವಕಾಶವಿಲ್ಲ ಎಂದು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಉತ್ತರ ಪ್ರದೇಶ ಕಾನೂನು ಆಯೋಗದ ಮುಖ್ಯಸ್ಥ ನ್ಯಾ. ಆದಿತ್ಯ ಮಿತ್ತಲ್ ತಿಳಿಸಿದರು.

ನೂತನ ಕಾನೂನಿನಲ್ಲಿ ‘ಲವ್ ಜಿಹಾದ್ ’ಶಬ್ದವಿಲ್ಲದಿರುವುದನ್ನು ಪ್ರಸ್ತಾಪಿಸಿದ ಮಿತ್ತಲ್, ಮಾಧ್ಯಮಗಳು,ಸಾಮಾಜಿಕ ಜಾಲತಾಣಗಳು ಮತ್ತು ರಾಜಕಾರಣಿಗಳಿಂದ ಮಾತ್ರ ಈ ಶಬ್ದ ಬಳಕೆಯಾಗುತ್ತಿದೆ. ನೂತನ ಮಸೂದೆಯು ‘ಹಿಂದು-ಮುಸ್ಲಿಂ’ನೆಲೆಯಲ್ಲಿ ಮಾತ್ರ ಧಾರ್ಮಿಕ ಮತಾಂತರಗಳನ್ನು ಪರಿಗಣಿಸುವುದಿಲ್ಲ,ಅದು ಎಲ್ಲ ಧರ್ಮಗಳಿಗೂ ಅನ್ವಯವಾಗಲಿದೆ ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X