ಉಚ್ಚಿಲ: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು
![ಉಚ್ಚಿಲ: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು ಉಚ್ಚಿಲ: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು](https://www.varthabharati.in/sites/default/files/images/articles/2020/11/23/268407-1606105042.gif)
ಉಚ್ಚಿಲ, ನ.23: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ದ್ವಿಚಕ್ರ ವಾಹನ ಸವಾರ ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ 8:30ರ ಸುಮಾರಿಗೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ
ಮೃತರನ್ನು ಹೆಜಮಾಡಿ ಅಡ್ಕ ಹೌಸ್ ನಿವಾಸಿ ವಾಸು ಡಿ. ಕೋಟ್ಯಾನ್ (65) ಎಂದು ಗುರುತಿಸಲಾಗಿದೆ. ಇವರು ಉಚ್ಚಿಲ ಪೇಟೆಯಿಂದ ಪಡುಬಿದ್ರೆ ಕಡೆಗೆ ಸ್ಕೂಟರ್ ಸವಾರಿ ಮಾಡಿಕೊಂಡು ಹೋಗುತ್ತಿದ್ದ ವೇಳೆ ಮಂಗಳೂರಿನತ್ತ ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಸಲಿಸುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದ ವಾಸು ಆವರು ಲಾರಿಯ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
![](https://www.varthabharati.in/sites/default/files/images/galllery/2020/11/23/hjmdy1.gif)
Next Story