Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂಗೆ ರೈತರ ಹಿತಕ್ಕಿಂತ ಸರಕಾರ...

ಸಿಎಂಗೆ ರೈತರ ಹಿತಕ್ಕಿಂತ ಸರಕಾರ ಉಳಿಸಿಕೊಳ್ಳುವುದೇ ಮುಖ್ಯವಾಗಿದೆ: ಡಿ.ಕೆ.ಶಿವಕುಮಾರ್

‘ಬಿಜೆಪಿಯ ಅನೇಕರು ಕಾಂಗ್ರೆಸ್ ಸೇರಲಿದ್ದಾರೆ’

ವಾರ್ತಾಭಾರತಿವಾರ್ತಾಭಾರತಿ23 Nov 2020 12:13 PM IST
share
ಸಿಎಂಗೆ ರೈತರ ಹಿತಕ್ಕಿಂತ ಸರಕಾರ ಉಳಿಸಿಕೊಳ್ಳುವುದೇ ಮುಖ್ಯವಾಗಿದೆ: ಡಿ.ಕೆ.ಶಿವಕುಮಾರ್

ಕೊಪ್ಪಳ, ನ. 23: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಮ್ಮ ಸರಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರಾಜ್ಯದಲ್ಲಿನ ರೈತರ ಹಿತ ಅವರಿಗೆ ಮುಖ್ಯವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರಕಾರದ ವಿರುದ್ದ ಆರೋಪಿಸಿದ್ದಾರೆ.

ಸೋಮವಾರ ಜಿಲ್ಲೆಯ ಹಿಟ್ನಾಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊಪ್ಪಳ-ರಾಯಚೂರು ಭಾಗದಲ್ಲಿ ಬೆಳೆದ ಭತ್ತಕ್ಕೆ ಬೆಲೆ ಸಿಗುತ್ತಿಲ್ಲ. ಈಗಿರುವ ಭತ್ತದ ಬೆಲೆ ಜೊತೆಗೆ ಹೆಚ್ಚುವರಿ 500ರೂ. ಬೆಂಬಲ ನೀಡಬೇಕು. ಪ್ರತಿದಿನವೂ ಬೆಲೆ ಏರಿಕೆ ಆಗುತ್ತಿದೆ. ಈಗ ವಿದ್ಯುತ್ ದರವೂ ಹೆಚ್ಚಳ ಮಾಡಲಾಗಿದೆ. ಸರಕಾರ ಭತ್ತಕ್ಕೆ ಹೆಚ್ಚುವರಿ 500 ರೂ.ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿ ಯೂನಿಟ್‍ಗೆ 40 ಪೈಸೆ ವಿದ್ಯುತ್ ಶುಲ್ಕ ಹೆಚ್ಚಳ ಮಾಡಿದ್ದು, ಕೊರೋನ ಸೋಂಕಿನ ವರ್ಷದಲ್ಲಿ ಜನರು ತುಂಬ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಶುಲ್ಕ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದ ಅವರು, ರೈತ ಬೆಲೆ ಇಲ್ಲದೆ ಕಂಗಾಲಾಗಿದ್ದಾನೆ. ಸಿಎಂ ಮೊದಲು ರೈತರನ್ನು ಉಳಿಸಲು ಆದ್ಯತೆ ನೀಡಲಿ. ಮೆಕ್ಕೆಜೋಳದ ಬೆಲೆಯೂ ಸಂಪೂರ್ಣ ಕುಸಿದಿದೆ. ಕೂಡಲೇ ಖರೀದಿ ಕೇಂದ್ರ ಆರಂಭ ಮಾಡಲಿ ಎಂದು ಒತ್ತಾಯಿಸಿದರು.

ಬಿಜೆಪಿ ಜಾತಿ-ಜಾತಿಗಳನ್ನು ಕೂಡಿಸುವುದನ್ನು ಬಿಟ್ಟು ಒಡೆಯುವ ಕೆಲಸ ಮಾಡುತ್ತಿದೆ. ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ. ಜಾತಿಗೊಂದು ನಿಗಮ ಮಾಡಲು ಹೊರಟಿದ್ದಾರೆ. ರೈತರ ಬೆಳೆಗೆ ಬೆಂಬಲ ಬೆಲೆ ಸೇರಿ ನಿಗಮಗಳ ಕುರಿತಂತೆ ಸುದೀರ್ಘ ಚರ್ಚೆ ನಡೆಸಲು ನ.30ರಂದು ಪಕ್ಷದ ಹಿರಿಯ ನಾಯಕರ ಸಭೆ ಕರೆದಿದ್ದೇನೆ. ಸಭೆಯಲ್ಲಿ ಹಲವು ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಹೋಗುವವರು ಇನ್ನೂ ಯಾರೂ ಇಲ್ಲ. ಶೀಘ್ರದಲ್ಲೆ ಬಿಜೆಪಿಯಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಕೆಲವರು ಬರಲಿದ್ದಾರೆ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಿದ ಶಿವಕುಮಾರ್, ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಣ್ಣ ಅಂತರದಿಂದ ಸೋತ ಬಸವನಗೌಡ ತುರ್ವಿಹಾಳ ಅವರನ್ನು ನಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದೇವೆ. ಎಲ್ಲರೂ ಚುನಾವಣಾ ತಯಾರಿ ನಡೆಸಲು ಸಿದ್ಧರಾಗಿದ್ದಾರೆ ಎಂದು ಹೇಳಿದರು.

ಸರಕಾರ ಶಾಲೆಗಳ ಆರಂಭದ ಕುರಿತು ಚರ್ಚೆ ನಡೆಸುತ್ತಿದೆ. ಅವರು ಏನು ನಿರ್ಧಾರ ಕೈಗೊಳ್ಳಲಿದ್ದಾರೆಂದು ನೋಡಬೇಕು. ಈ ಬಗ್ಗೆ ನಮ್ಮ ಅಭಿಪ್ರಾಯವನ್ನು ಅವರು ಕೇಳಿಲ್ಲ. ಈ ಹಿಂದೆ ಒಂದು ಬಾರಿ ನಮ್ಮ ಸಲಹೆ ಕೇಳಿದ್ದರು. ಶಾಲೆ ಆರಂಭದ ಕುರಿತು ಸರಕಾರದ ನಿರ್ಧಾರದ ಮೇಲೆ ನಾವು ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ಶಾಸಕರಾದ ಅಮರೆಗೌಡ ಬಯ್ಯಾಪುರ, ರಾಘವೇಂದ್ರ ಹಿಟ್ನಾಳ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಕೆಪಿಸಿಸಿ ಕಾರ್ಯದರ್ಶಿ ಶಿವಕುಮಾರ್ ಮೆಣಸಿನಕಾಯಿ ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X