Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಲಿತ ಚಳವಳಿ ಮರು ಕಟ್ಟಬೇಕಾದ ಅಗತ್ಯವಿದೆ:...

ದಲಿತ ಚಳವಳಿ ಮರು ಕಟ್ಟಬೇಕಾದ ಅಗತ್ಯವಿದೆ: ಎಲ್.ಹನುಮಂತಯ್ಯ

ವಾರ್ತಾಭಾರತಿವಾರ್ತಾಭಾರತಿ23 Nov 2020 8:43 PM IST
share
ದಲಿತ ಚಳವಳಿ ಮರು ಕಟ್ಟಬೇಕಾದ ಅಗತ್ಯವಿದೆ: ಎಲ್.ಹನುಮಂತಯ್ಯ

ಬೆಂಗಳೂರು, ನ.23: ರಾಜ್ಯಾದ್ಯಂತ ಚದುರಿ ಹೋಗಿರುವ ಎಲ್ಲ ದಲಿತ ಸಂಘಟನೆಗಳು ಹಳೆಯದ್ದನ್ನೆಲ್ಲಾ ಮರೆತು ಎಲ್ಲರೂ ಒಟ್ಟಾಗಿ ದಲಿತ ಚಳವಳಿಯನ್ನು ಮರು ಕಟ್ಟಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಸಾಹಿತಿ ಎಲ್.ಹನುಮಂತಯ್ಯ ಅಭಿಪ್ರಾಯಿಸಿದ್ದಾರೆ.

ಸೋಮವಾರ ನಗರದ ಗಾಂಧೀ ಭವನದಲ್ಲಿ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಪ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ದಲಿತ ಚಳವಳಿಯ ಸಂಘಟಕ ಎಂ.ಜಯಣ್ಣ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಅತ್ಯಂತ ಸಂಕಷ್ಟದ ಸಮಯದಲ್ಲಿ 1980-85 ದಶಕದಲ್ಲಿ ದಲಿತ ಚಳವಳಿಯನ್ನು ಕಟ್ಟಲಾಗಿದೆ. ದಲಿತ ನಾಯಕರು ಮನೆ, ಕುಟುಂಬ ಹಾಗೂ ಸಂಬಂಧಗಳು ಎಲ್ಲವನ್ನೂ ತೊರೆದು ಇಡೀ ಜೀವನವನ್ನು ಚಳವಳಿಗೆ ಮೀಸಲಿಟ್ಟಿದ್ದಾರೆ. ಸರಿಯಾದ ನಿದ್ರೆ, ಆಹಾರವಿಲ್ಲದೇ ಬಳಲಿದ್ದಾರೆ. ಆದರೆ, ಇಂದಿನ ಚಳವಳಿಗಾರರಿಗೆ ಅನೇಕ ಸೌಕರ್ಯಗಳಿದ್ದರೂ, ದಲಿತ ಚಳವಳಿ ಒಡೆದು ಹೋಗಿರುವುದು ದುರಂತ. ಹೀಗಾಗಿ, ಒಡೆದು ಹೋಗಿರುವ ಇಡೀ ದಲಿತ ಚಳವಳಿಯನ್ನು ಮತ್ತೆ ಕಟ್ಟಬೇಕಿದೆ ಎಂದು ಸಲಹೆ ನೀಡಿದರು.

ಹಿಂದಿನ ಕಾಲಘಟ್ಟದಲ್ಲಿ ಚಳವಳಿಗಾರರು ಸಿದ್ಧಾಂತಗಳಿಗೆ ಬದ್ಧರಾಗಿದ್ದರು. ಅದಕ್ಕಾಗಿ ಎಂತಹ ಕಠಿಣ ನಿರ್ಧಾರಗಳನ್ನು ಕೈಗೊಳ್ಳಲು ಹಿಂದೆ-ಮುಂದೆ ನೋಡುತ್ತಿರಲಿಲ್ಲ ಎಂದ ಅವರು, ಅಂದಿನ ಸಂದರ್ಭದಲ್ಲಿ ರೈತ ಮತ್ತು ದಲಿತ ಚಳವಳಿ ಜತೆ ಜತೆಯಾಗಿ ನಡೆದಿದ್ದರೆ, ಕರ್ನಾಟಕದಲ್ಲಿ ಪರ್ಯಾಯ ಸರಕಾರವಿರುತ್ತಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಎಲ್ಲರೂ ಕೂಡಿ ಪರ್ಯಾಯ ಚಳವಳಿಯನ್ನು ಕಟ್ಟುವ ಕಡೆಗೆ ಸಾಗಬೇಕಿದೆ ಎಂದು ನುಡಿದರು.

ಚಿತ್ರದುರ್ಗದವರಾದ ಜಯಣ್ಣ ಎಲ್ಲ ವರ್ಗದ, ಜಾತಿಯ ಜನರನ್ನು ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ದಲಿತರನ್ನು ಕಂಡರೆ, ದಲಿತ ನಾಯಕತ್ವವನ್ನು ಕಂಡರೆ ಸಹಿಸದವರ ನಡುವೆಯೂ ಸಮರ್ಥ ನಾಯಕರಾಗಿ ಬೆಳೆದಿದ್ದರು. ಇಂದು ದಲಿತರು ಚಳವಳಿಯ ನಾಯಕತ್ವ ವಹಿಸಿಕೊಳ್ಳುತ್ತಾರೆ ಎಂದರೆ ದಲಿತೇತರರು ಅಲ್ಲ, ದಲಿತರೊಳಗಿಂದಲೇ ಅಪಸ್ವರ ಕೇಳಿಬರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ನಮ್ಮ ಸಮುದಾಯ ಶ್ರೇಯಸ್ಸಿಗಾಗಿ ಜನ ಚಳವಳಿಗೆ ಬರುತ್ತಿರುವ ಅನೇಕ ನಾಯಕರು ತಮ್ಮ ಪೂರ್ತಿ ಆಯಸ್ಸನ್ನು ಪೂರ್ಣಗೊಳಿಸಲಾಗುತ್ತಿಲ್ಲ. ಸರಿಯಾದ ಆಹಾರ, ನಿದ್ರೆಯಿಲ್ಲದೇ ಸಮಾಜಕ್ಕಾಗಿ ದುಡಿಯುವವರು ತಮ್ಮ ಬಗ್ಗೆ ಏನನ್ನು ಚಿಂತಿಸುತ್ತಿಲ್ಲ ಎಂದು ಹೇಳಿದರು.

ದೇಶದಲ್ಲಿ ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆಯುತ್ತಿದ್ದರೂ ಇಂದಿಗೂ ಅಸಮಾನತೆ, ಅಸ್ಪೃಶ್ಯತೆ, ಸಾಮಾಜಿಕ ಬಹಿಷ್ಕಾರ ಅಂತಹ ಅಮಾನುಷ ಪದ್ಧತಿಗಳು ಜೀವಂತವಾಗಿದೆ. ಅಧಿಕಾರ ಪಡೆಯುತ್ತಿರುವ ರಾಜಕಾರಣಿಗಳು ಮೇಲ್ವರ್ಗದವರನ್ನು ಎದುರು ಹಾಕಿಕೊಳ್ಳಲು ಮುಂದಾಗುತ್ತಿಲ್ಲ ಎಂದ ಅವರು, ನಾನು ಉಳ್ಳವರು, ಮೇಲ್ವರ್ಗದವರನ್ನು ಎದುರು ಹಾಕಿಕೊಂಡಿದ್ದಕ್ಕೆ ನಾಲ್ಕು ಬಾರಿ ಚುನಾವಣೆಯಲ್ಲಿ ಸೋತಿದ್ದೇನೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ದಲಿತ ಸಂಘಟನೆಯ ಮುಖಂಡರಾದ ಮೋಹನ್‍ರಾಜು, ಮಾವಳ್ಳಿ ಶಂಕರ್, ವಿ.ನಾಗರಾಜು, ಪ್ರೊ.ಬಿ.ಕೃಷ್ಣಪ್ಪ ಟ್ರಸ್ಟ್‍ನ ಟ್ರಸ್ಟಿ ರುದ್ರಪ್ಪ ಹನಗವಾಡಿ, ಕಲಾವಿದ ಸಿ.ಚಂದ್ರಶೇಖರ್, ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಗುರುಪ್ರಸಾದ್ ಕೆರೆಗೋಡು ಸೇರಿದಂತೆ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X