ನ.24 : ಉಡುಪಿಗೆ ಕಾನೂನು ಸಚಿವ ಮಾಧುಸ್ವಾಮಿ
ಉಡುಪಿ, ನ.23: ರಾಜ್ಯದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ನ.24ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಪರಾಹ್ನ 1 ಗಂಟೆಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡುವ ಸಚಿವರು, ಜಿಲ್ಲೆಯ ಸಂಸದರು/ ಶಾಸಕರೊಂದಿಗೆ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸುವರು. ಅಪರಾಹ್ನ 3:30ಕ್ಕೆ ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಸುಬ್ಬರಾಡಿ ಎಂಬಲ್ಲಿ ಉಪ್ಪು ನೀರು ತಡೆ ಆಣೆಕಟ್ಟು ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ, ಸಂಜೆ 5:00ಕ್ಕೆ ಕೊಲ್ಲೂರಿಗೆ ಬೇಟಿ ನೀಡಿ ನಂತರ ಮಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
Next Story