Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿವೇಶನ ರಹಿತರಿಂದ ಡಿಸಿ ಕಚೇರಿ ಬಳಿ...

ನಿವೇಶನ ರಹಿತರಿಂದ ಡಿಸಿ ಕಚೇರಿ ಬಳಿ ಮತ್ತೆ ಆಹೋರಾತ್ರಿ ಸತ್ಯಾಗ್ರಹ ಅರಂಭ

ವಾರ್ತಾಭಾರತಿವಾರ್ತಾಭಾರತಿ23 Nov 2020 11:15 PM IST
share
ನಿವೇಶನ ರಹಿತರಿಂದ ಡಿಸಿ ಕಚೇರಿ ಬಳಿ ಮತ್ತೆ ಆಹೋರಾತ್ರಿ ಸತ್ಯಾಗ್ರಹ ಅರಂಭ

ಮಂಡ್ಯ, ನ.23: ನಿವೇಶನಕ್ಕೆ ಗುರುತಿಸಿರುವ ಸರಕಾರಿ ಭೂಮಿಯನ್ನು ವಿತರಿಸುವ ಭರವಸೆ ನೀಡಿದ್ದ ಜಿಲ್ಲಾಡಳಿತ ಕಾರ್ಯಗತಗೊಳಿಸದ ಹಿನ್ನಲೆಯಲ್ಲಿ ತಾಲೂಕಿನ ಬೂದನೂರು ಗ್ರಾಮ ಪಂಚಾಯತ್ ನಿವೇಶನರಹಿತರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಮತ್ತೆ ಅನಿರ್ಧಿಷ್ಠಾವಧಿ ಆಹೋರಾತ್ರಿ ಸತ್ಯಾಗ್ರಹ ಅರಂಭಿಸಿದ್ದಾರೆ.

ಆಕ್ಟೋಬರ್ 12ರಿಂದ 6 ದಿನಗಳ ಕಾಲ ಆಹೋರಾತ್ರಿ ಧರಣಿ ನಡೆಸಿದ್ದ ನಿವೇಶನರಹಿತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದ ಜಿಲ್ಲಾಡಳಿತದ ಪ್ರತಿನಿಧಿಯಾಗಿ ಆಗಮಿಸಿದ್ದ ಮಂಡ್ಯ ತಹಶೀಲ್ದಾರ್ ‌ಅವರ ಭರವಸೆ ಈಡೇರಿಸಲಿಲ್ಲ ಎಂದು ನಿವೇಶನ ರಹಿತರು ಅಳಲು ತೋಡಿಕೊಂಡರು.

ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ಅವರು ಜಿಲ್ಲೆಗೆ ಆಗಮಿಸಿದ ಬಳಿಕ ನೂರಾರು ಎಕರೆ ಸರಕಾರಿ ಭೂಮಿಯನ್ನು ಗುರುತಿಸಿ ಬಡಜನರಿಗೆ ಹಂಚುವ ಕಾರ್ಯಕ್ರಮ ರೂಪಿಸಿದ್ದಾರೆ. ಹಾಗಾಗಿ ಅವರ ಹೆಸರಿನಲ್ಲಿ ನಮ್ಮ ಗ್ರಾಮದಲ್ಲಿ ನಿರ್ಮಾಣವಾಗುವ ಬಡಾವಣೆಗೆ  ಡಾ.ಎಂ.ವಿ.ವೆಂಕಟೇಶ್ ಆಶ್ರಯ ಬಡಾವಣೆ ನಾಮಕರಣ ಮಾಡಲಾಗುವುದು ಎಂದು ನಾಮಫಲಕ ಪ್ರದರ್ಶನ ಮಾಡಿದರು.

ಬೂದನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 50 ಎಕರೆ ಸರಕಾರಿ ಭೂಮಿ‌ ಲಭ್ಯವಿದೆ. ಅದರಲ್ಲಿ ಗ್ರಾಮದ ಸರ್ವೇ ನಂ 190/ಪಿ10 ರ 2 ಎಕರೆ ಭೂಮಿಯನ್ನು ನಿವೇಶನಯೋಗ್ಯ ಭೂಮಿ ಎಂದು ಹಿಂದಿನ ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ಗುರುತಿಸಿ ಸರಕಾರಕ್ಕೆ ವರದಿ ಮಾಡಿದ್ದರು. ಸದ್ಯ ಅಳತೆ, ಹದ್ದುಬಸ್ತ್ ಮಾಡುವ ಬದಲು ಪ್ರಭಾವಿಗಳ ಒತ್ತಡಕ್ಕೆ ಮಣಿದು ದಾಖಲೆಗಳನ್ನು ತಿರುಚುವ ಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಎಂ.ಬಿ.ನಾಗಣ್ಣಗೌಡ ಮಾತನಾಡಿ, ಜಿಲ್ಲಾಡಳಿತ ನೀಡಿರುವ ಗಡುವು ಮುಗಿದಿದೆ. ಹಾಗಾಗಿ ಸರಕಾರಿ ಭೂಮಿ 1-5 ಮಾಡುವ ಮುನ್ನಾ ದಿಶಾಂಕ್ ತಂತ್ರಾಂಶ ಬಳಸಿ ಭೂಮಿ ಗುರುತಿಸಿಕೊಡಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಬೇಡಿಕೆ ಈಡೇರದಿದ್ದಲ್ಲಿ ಗ್ರಾಮಸಭೆಯಲ್ಲಿ ಮುಂದಿನ ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕರಿಸುವ ನಿರ್ಣಯ ಕೈಗೊಂಡು ಮನವಿ ನೀಡಿರುವುದಾಗಿ ತಿಳಿಸಿದರು.

ಬೂದನೂರು ಗ್ರಾಮ ಪಂಚಾಯತ್ ಮಾಜಿ‌ ಸದಸ್ಯ ಬಿ.ಕೆ.ಸತೀಶ ಮಾತನಾಡಿ, ಕಳೆದ 4 ವರ್ಷಗಳಿಂದ ನಿವೇಶನರಹಿತರು ಹಲವು ಮನವಿ ನೀಡಿ ಹೋರಾಟ ನಡೆಸುತ್ತಿದ್ದರೂ ಅಧಿಕಾರಿಗಳು ಸ್ಪಂದಿಸದೆ ಅಮಿಷಗಳಿಗೆ ಬಲಿಯಾಗಿ ನಿವೇಶನರಹಿತರನ್ನು ವಂಚಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ನಾಲ್ಕು ವರ್ಷಗಳಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ತನಿಖೆ ನಡೆಸಿ, ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನಿವೇಶನರಹಿತರು ಆಗ್ರಹಿಸಿದರು.

ಪ್ರತಿಭಟನಾ ಧರಣಿಯಲ್ಲಿ ಗ್ರಾಪಂ‌ ಮಾಜಿ‌ ಸದಸ್ಯ ಕುಳ್ಳಪ್ಪ. ಸಿಐಟಿಯುನ ಪ್ರೇಮಾ, ಸುಧಾ, ಚೇತನ್, ಎಲ್ಲಮ್ಮ ಕಾಮಾಕ್ಷಿರಜನಿ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X