Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್, ಮಾದಕ ವಸ್ತುವಿನ ವಿರುದ್ಧ 'ಡಯಲ್...

ಕೋವಿಡ್, ಮಾದಕ ವಸ್ತುವಿನ ವಿರುದ್ಧ 'ಡಯಲ್ 112': ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ವಾಹನ ಜಾಗೃತಿ ಜಾಥಾ

ಡ್ರಗ್ಸ್ ಜಾಲದ ವಿರುದ್ಧ ಕಠಿಣ ಕಾರ್ಯಾಚರಣೆ: ಐಜಿಪಿ ವಿಪುಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ23 Nov 2020 11:36 PM IST
share
ಕೋವಿಡ್, ಮಾದಕ ವಸ್ತುವಿನ ವಿರುದ್ಧ ಡಯಲ್ 112: ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ವಾಹನ ಜಾಗೃತಿ ಜಾಥಾ

ಮಡಿಕೇರಿ ನ.23 : ಕೋವಿಡ್ ಜಾಗೃತಿ, ಮಾದಕ ವಸ್ತುವಿನ ವಿರುದ್ಧ ಯುದ್ಧ ಹಾಗೂ ಡಯಲ್ 112 ಕುರಿತು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ವಾಹನ ಜಾಗೃತಿ ಜಾಥಾ ನಡೆಸಿತು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಪೊಲೀಸ್ ವಾಹನ ಜಾಗೃತಿ ಜಾಥಾಕ್ಕೆ ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ವಿಪುಲ್ ಕುಮಾರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿದ ಪೊಲೀಸ್ ವಾಹನ ಜಾಗೃತಿ ಜಾಥಾ ಸಾರ್ವಜನಿಕರಲ್ಲಿ ಅರಿವು ಮೂಡಿಸಿತು. 

ಸುದ್ದಿಗಾರರೊಂದಿಗೆ ಮಾತನಾಡಿದ ಐಜಿಪಿ ವಿಪುಲ್ ಕುಮಾರ್ ಅವರು ಕೊಡಗು ಜಿಲ್ಲೆಯಲ್ಲಿ ಕೋವಿಡ್ ಕೇಸ್‍ಗಳ ಸಂಖ್ಯೆ ಕಡಿಮೆ ಇದೆಯಾದರೂ ಪ್ರತಿ ದಿನವೂ ಕೇಸ್‍ಗಳು ಪತ್ತೆಯಾಗುತ್ತಿವೆ. ಜಿಲ್ಲೆಯ ಜನರು, ಪೊಲೀಸ್ ಇಲಾಖೆ, ವಿವಿಧ ಸರಕಾರಿ ಇಲಾಖೆಗಳು ಕೋವಿಡ್ ವಿರುದ್ಧದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜಿಲ್ಲೆಯ ಜನರು ಶಿಸ್ತು ಬದ್ದವಾಗಿ ಕೋವಿಡ್ ವಿರುದ್ಧ ಹೋರಾಡುತ್ತಿರುವುದು ಶ್ಲಾಘನೀಯ. ಕೊಡಗು ಜಿಲ್ಲೆಯ ಜನರ ಹೋರಾಟಕ್ಕೆ ಧನ್ಯವಾದ ಅರ್ಪಿಸುವುದಾಗಿ ಹೇಳಿದರು. 

ಕಳೆದ 2-3 ತಿಂಗಳಿಂದ ಪೊಲೀಸ್ ಇಲಾಖೆ ಡ್ರಗ್ಸ್ ವಿರುದ್ಧ ಯುದ್ದವನ್ನು ಆರಂಭಿಸಿದೆ. ಡ್ರಗ್ಸ್‍ನ ಬಳಕೆ, ಮಾರಾಟ, ಸಾಗಾಟಕ್ಕೆ ಸಂಪೂರ್ಣ ಕಡಿವಾಣ ಹಾಕುವ ಉದ್ದೇಶದಿಂದ ಈ ಯುದ್ಧ ಪ್ರಾರಂಭಿಸಲಾಗಿದ್ದು, ಈ ಮಾರಕ ಜಾಲವನ್ನು ರಾಜ್ಯದಿಂದಲೇ ಕಿತ್ತು ಹಾಕಬೇಕಿದೆ. ಹೀಗಾಗಿ ಸಾರ್ವಜನಿಕರು ಇಂತಹ ಮಾದಕ ಅವ್ಯವಹಾರಗಳ ಬಗ್ಗೆ ಮಾಹಿತಿ ಇದ್ದಲ್ಲಿ, ಪೊಲೀಸ್ ಇಲಾಖೆಗೆ ನೀಡಬೇಕು ಎಂದು ಮನವಿ ಮಾಡಿದರು.

ಮುಂದಿನ 2 ತಿಂಗಳಲ್ಲಿ ಎಲ್ಲಾ ರೀತಿಯ ತುರ್ತು ಸೇವೆಗಳಿಗೆ ಡಯಲ್ 112 ಆರಂಭವಾಗಲಿದ್ದು, ಈ ಬಗ್ಗೆಯೂ ವಾಹನ ಜಾಥಾದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಪೊಲೀಸ್, ಅಗ್ನಿ ಶಾಮಕ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ರೀತಿಯ ತುರ್ತು ಸೇವೆಗಳನ್ನು ಪಡೆಯಲು 112 ಡಯಲ್ ಆರಂಭವಾಗಿದ್ದು, ಮುಂದಿನ 2 ತಿಂಗಳ ಒಳಗಾಗಿ ಕೊಡಗು ಜಿಲ್ಲೆಯಲ್ಲಿಯೂ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿದೆ ಎಂದು ಹೇಳಿದರು.

ಕೂಂಬಿಂಗ್ ನಿರಂತರ
ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಎಎನ್‍ಎಫ್, ಅರಣ್ಯ ಇಲಾಖೆ ಮೂಲಕ ನಿರಂತರವಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಕೊಡಗು ಜಿಲ್ಲೆಯಲ್ಲಿ ಸಮಾಜ ಘಾತುಕ ಶಕ್ತಿಗಳ ಚಟುವಟಿಕೆ ಇಲ್ಲದಿದ್ದರೂ ಕೂಡ ಅದರ ಬಗ್ಗೆ ಎಲ್ಲಾ ರೀತಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ವಿಪುಲ್ ಕುಮಾರ್ ಹೇಳಿದರು. ರವಿವಾರ ವಿರಾಜಪೇಟೆಗೆ ತೆರಳಿ ಅಲ್ಲಿ ಸಾರ್ವಜನಿಕರ ಸಭೆ ನಡೆಸಿ ಸಲಹೆಗಳನ್ನು ಪಡೆದಿರುವುದಾಗಿ ತಿಳಿಸಿದ ವಿಪುಲ್ ಕುಮಾರ್ ಕೊಡಗು, ಕೇರಳ, ಮೈಸೂರು ಜಿಲ್ಲೆಗಳ ಅರಣ್ಯ ಪ್ರದೇಶದಲ್ಲಿ ಸ್ವತಃ ಕೂಂಬಿಂಗ್ ನಡೆಸಿರುವುದಾಗಿ ಮಾಹಿತಿ ನೀಡಿದರು. ಕೊಡಗು ಜಿಲ್ಲೆಯ ಪೊಲೀಸ್ ಬಲದಲ್ಲಿಯೇ ಕೂಂಬಿಂಗ್ ಕಾರ್ಯಾಚರಣೆ ನಡೆಯಲಿದೆ ಎಂದು ವಿಪುಲ್ ಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X