Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರ್ಕಾರಿ ಶಾಲೆ ದತ್ತು ಪರಿಕಲ್ಪನೆ...

ಸರ್ಕಾರಿ ಶಾಲೆ ದತ್ತು ಪರಿಕಲ್ಪನೆ ದೇಶದಲ್ಲೇ ಪ್ರಥಮ : ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ24 Nov 2020 1:49 PM IST
share
ಸರ್ಕಾರಿ ಶಾಲೆ ದತ್ತು ಪರಿಕಲ್ಪನೆ ದೇಶದಲ್ಲೇ ಪ್ರಥಮ : ಸಿಎಂ ಯಡಿಯೂರಪ್ಪ

ಬೆಂಗಳೂರು : ಶಾಲೆಗಳನ್ನು ಜನಪ್ರತಿನಿಧಿಗಳು ಸೇರಿದಂತೆ ಸಮಾಜದ ವಿವಿಧ ಸಂಘ-ಸಂಸ್ಥೆಗಳು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುವಂತಹ  ಪರಿಕಲ್ಪನೆ ದೇಶದಲ್ಲೇ ಮೊದಲನೆಯದಾಗಿದ್ದು, ಇದು ಉಳಿದವರಿಗೂ ಪ್ರೇರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಆಶ್ರಯದಲ್ಲಿ ನಡೆದ ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಸಮಾರಂಭದಲ್ಲಿ  ದತ್ತು ಸ್ವೀಕರಿಸಿದ ಸಂಸ್ಥೆಗಳಿಗೆ ಶಾಲಾ ದತ್ತು ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರದೊಂದಿಗೆ ಸಮುದಾಯವೂ ಕೈಜೋಡಿಸಿ ಶಾಲೆಗಳನ್ನು ಅಭಿವೃದ್ಧಿಗೆ ಕೈಜೋಡಿಸುತ್ತಿರುವುದು ವಿಶಿಷ್ಟವಾದ ಕಲ್ಪನೆಯಾಗಿದ್ದು, ಇದರಿಂದ ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಲಿದೆ ಎಂದರು.

2020-21ನೇ ಸಾಲಿನ ಆಯವ್ಯದಲ್ಲಿ ಘೋಷಿಸಿದಂತೆ ರಾಜ್ಯದ ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಸದಸ್ಯರು ತಮ್ಮ ಅವಧಿಯಲ್ಲಿ ಕನಿಷ್ಠ ಮೂರು ಶಾಲೆಗಳನ್ನು ದತ್ತು ತೆಗೆದುಕೊಂಡು ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಮೂಲಕ ಅಭಿವೃದ್ಧಿ ಪಡಿಸುವುದು ಸೇರಿದಂತೆ ರಾಜ್ಯದ 34 ಹೆಚ್ಚು ಸರ್ಕಾರಿ ಹಾಗೂ ಖಾಸಗಿ ವಿಶ್ವವಿದ್ಯಾನಿಲಯಗಳು, ಶಿಕ್ಷಣ ಸಂಸ್ಥೆಗಳು, ಮಾಧ್ಯಮ ಸಂಸ್ಥೆಗಳು ದತ್ತು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನಿಜಕ್ಕೂ ಪ್ರಶಂಸನೀಯ ಕಾರ್ಯವಾಗಿದೆ ಎಂದರು.

ಈ ಕಾರ್ಯಕ್ರಮ ಸಮುದಾಯದಲ್ಲಿ ಉಳಿದವರಿಗೂ ತಮ್ಮೂರಿನ ಶಾಲೆ ದತ್ತು ಪಡೆದು ಅಭಿವೃದ್ಧಿ ಪಡಿಸಲು ಪ್ರೇರಣೆಯಾಗಲಿದ್ದು, ದೇಶದಲ್ಲಿಯೇ ಒಂದು ಮಾದರಿ ಕಾರ್ಯಕ್ರಮವಾಗಿದೆ ಎಂದು ಅವರು ಹೇಳಿದರು. ತಾವುಗಳು ಶಾಲೆಗಳನ್ನು ದತ್ತು ಪಡೆಯುವುದಷ್ಟೇ ಅಲ್ಲ, ಆ ನಂತರ ಶಾಲೆಗೆ ಆಗಾಗ್ಗೆ ಭೇಟಿ ನೀಡಿ ಮಕ್ಕಳ ಪೋಷಕರನ್ನು ಶಾಲೆಗೆ ಕರೆಸಿ ಶಿಕ್ಷಣದ ಮಹತ್ವವನ್ನು ಹೇಳುವುದಲ್ಲದೇ ಶಾಲೆಗಳ ಸ್ಥಿತಿಗತಿಗಳನ್ನು ಗಮನಿಸಿ ಶಾಲೆಯ ಸರ್ವತೋಮುಖ ಬೆಳವಣಿಗೆಗೆ ಪ್ರೇರಣೆಯಾಗಬೇಕು ಎಂದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ನಮ್ಮ ರಾಜ್ಯದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೇ ಮಠ-ಮಾನ್ಯಗಳು, ಶಿಕ್ಷಣ  ಸಂಸ್ಥೆಗಳು  ಶಿಕ್ಷಣ, ಜ್ಞಾನ, ಅನ್ನ ಅಕ್ಷರ, ದಾಸೋಹದಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲರಿಗೂ ಜಾತಿಭೇದವಿಲ್ಲದೇ ಶಿಕ್ಷಣ  ನೀಡಿದ್ದರಿಂದಲೇ ನಾಡು ಇಂದು ಶೈಕ್ಷಣಿಕವಾಗಿ ಮುಂದೆ ಬರಲು ಸಾಧ್ಯವಾಗಿದೆ. ಈಗ ಇಡೀ ಸಮುದಾಯ ಮತ್ತು ಜನಪ್ರತಿನಿಧಿಗಳು ತಮ್ಮ ಭಾಗದ ಸರ್ಕಾರಿ ಶಾಲೆಗಳನ್ನು ದತ್ತು  ಪಡೆದು ಅಭಿವೃದ್ಧಿ ಪಡಿಸುವ  ಪರಿಕಲ್ಪನೆಯ ಯೋಜನೆ ವಿಶಿಷ್ಟವಾಗಿದ್ದು, ಇದರಲ್ಲಿ ಹೆಚ್ಚಿನ ಸಂಖ್ಯೆಯ ಸಂಸ್ಥೆಗಳು ಭಾಗಿಯಾಗಿ ರಾಜ್ಯದ ಶಾಲೆಗಳು ಅಭಿವೃದ್ಧಿಯಾಗುವಂತಾಗಲಿ ಎಂದರು.

ಖಾಸಗಿ ಶಾಲೆಗಳಿಗೆ ಸಮಾನವಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿ: 

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾತನಾಡಿ, ಕೂಲಿ ಕೆಲಸ ಮಾಡುವವರೂ ಸಹ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ ತಮ್ಮ ಆದಾಯದ ಶೇ. 20ರಷ್ಟನ್ನು ಶುಲ್ಕವಾಗಿ ತುಂಬುತ್ತಿದ್ದಾರೆ. ಅವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವುದರಿಂದ ಆ ಶೇ. 20 ಹಣವನ್ನು ತಮ್ಮ ಕುಟುಂಬದ ಇತರೆ ಸಂಗತಿಗಳಿಗೆ ಬಳಸಿಕೊಳ್ಳಬಹುದು. ಆ ನಿಟ್ಟಿನಲ್ಲಿ ನಾವು  ಖಾಸಗಿ ಶಾಲೆಗಳಿಗೆ ಸಮಾನವಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸಮುದಾಯದ ಭಾಗಿಯಾಗುವಿಕೆ ನಿಜಕ್ಕೂ ಅತ್ಯಂತ ವೈಶಿಷ್ಟ್ಯ ಪೂರ್ಣವಾದುದು ಎಂದರು.

ರಾಜ್ಯದಲ್ಲಿ 53 ಸಾವಿರ ಸರ್ಕಾರಿ ಶಾಲೆಗಳಿದ್ದು, ಶೇ. 85ಕ್ಕಿಂತ ಹೆಚ್ಚಿನ ಮಕ್ಕಳು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣಕ್ಕೆ ಸರ್ಕಾರಿ ಶಾಲೆಗಳನ್ನೇ ಅವಲಂಬಿಸಿರುವುದರಿಂದ ಅವುಗಳ ಅಭಿವೃದ್ಧಿಗೆ ಸಮಾಜದ ಸಕ್ರಿಯ ಭಾಗಿಯಾಗುವಿಕೆಯ ಅಗತ್ಯವಿದ್ದು, ಈ ದತ್ತು ಯೋಜನೆಯಿಂದ ಹೆಚ್ಚಿನ ಅನುಕೂಲ ವಾಗಲಿದೆ ಎಂದು ಹೇಳಿದ ಸಚಿವರು, ಸಮುದಾಯ ತಮ್ಮೂರಿನ ಶಾಲೆಯ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು ಬಂಟ್ವಾಳ ತಾಲೂಕಿನ ದದ್ದಲಕಾಡು ಗ್ರಾಮದ ಶಾಲೆಯನ್ನು ಅಭಿವೃದ್ಧಿಪಡಿಸಿ ಅದನ್ನು ಗ್ರಾಮಸ್ಥರು ಉಳಿಸಿಕೊಂಡಿದ್ದನ್ನು ಉದಾಹರಿಸಿದರು.  ತಾವು  ಇತ್ತೀಚಿಗೆ ಅಧ್ಯಯನ ಮಾಡಿದ ಇಂಗ್ಲಿಷ್‍ನ  ‘ಆರ್ಡಿನರಿ ಪೀಪಲ್ ಎಕ್ಸ್ರಾಡಿನರಿ ಟೀಚರ್ಸ್’ ಎಂಬ ಪುಸ್ತಕ ಸಾರಾಂಶಗಳನ್ನು ಮೆಲುಕು ಹಾಕಿದ ಸುರೇಶ್ ಕುಮಾರ್ ಸರ್ಕಾರಿ ಶಾಲೆಗಳು ಏಕೆ ಅಭಿವೃದ್ಧಿಯಾಗಬೇಕು ಎಂಬುದನ್ನು ಸಚಿವರು ವಿಷದಪಡಿಸಿದರು. ಹಾಗೆಯೇ ಒಸಾಟ್ ಸಂಸ್ಥೆ ಶಾಲೆಗಳನ್ನು ಅಭಿವೃದ್ಧಿಪಡಿಸುತ್ತಿರುವುದು, ಸಿಸ್ಕೋ ಸಂಸ್ಥೆ ಪ್ರಾಜೆಕ್ಟ್ ಮತ್ತು ಗಣಿತ ವಿಷಯಗಳನ್ನು ಸುಲಭವಾಗಿ ಅರ್ಥೈಸಿಕೊಳ್ಳಲು ಅನುವಾಗುವಂತೆ ಮಕ್ಕಳಿಗೆ ಉಚಿತವಾಗಿ 18 ಲಕ್ಷ ಪುಸ್ತಿಕೆಗಳನ್ನು ವಿತರಿಸುತ್ತಿರು ವುದನ್ನು ಉದಾಹರಿಸಿದ ಸಚಿವರು  ಸಮುದಾಯವು ಶಾಲೆಗಳ ಅಭಿವೃದ್ಧಿಯಲ್ಲಿ ಭಾಗಿಯಾಗುವುದರಿಂದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯೇ ಆಗಲಿದೆ ಎಂದರು.

ನಮ್ಮ ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳು ಮುಂದೆ ಐಎಎಸ್, ಐಪಿಎಸ್ ಅಧಿಕಾರಿಗಳಾಗಲಿ ಐಐಟಿಗಳಂತಹ ಪ್ರತಿಷ್ಠಿತ ಸಂಸ್ಥೆಗಳನ್ನು ಸೇರುವಂತಾ ಗಲಿ ಎಂಬ ಭಾವನೆಯಲ್ಲಿ ಇಡೀ ಸಮುದಾಯ, ಸಂಘಸಂಸ್ಥೆಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲು ಮುಂದಾಗಬೇಕು  ಎಂದರು. ಈ ನಿಟ್ಟಿನಲ್ಲಿ ಮೂಲತಃ ಶಿಕ್ಷಣ ಪ್ರೇಮಿಗಳಾದ  ಸರ್ಕಾರದ  ಶೈಕ್ಷಣಿಕ ಸಲಹೆಗಾರರಾದ ಪ್ರೊ. ಎಂ.ಆರ್. ದೊರೆಸ್ವಾಮಿಯವರು ಚಿಂತನೆ ಅತ್ಯಂತ ಅಮೂಲ್ಯವಾಗಿದೆ.

ಇದೇ ಸಂದರ್ಭದಲ್ಲಿ ಸಚಿವ ಸುರೇಶ್ ಕುಮಾರ್, ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ಅಭಿವೃದ್ಧಿಪಡಿಸುವ ದತ್ತು ಸ್ವೀಕಾರ ಪ್ರಮಾಣ ಪತ್ರ ಸ್ವೀಕರಿಸಿದರು.

ಸರ್ಕಾರದ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಎಂ.ಆರ್. ದೊರೆಸ್ವಾಮಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಈ ಯೋಜನೆಯ ಉದ್ದೇಶಗಳನ್ನು ವಿವರಿಸಿ ಜನಪ್ರತಿನಿಧಿಗಳಲ್ಲದೇ ಸಮುದಾಯವೂ ಪೂರ್ಣಪ್ರಮಾಣದಲ್ಲಿ ಭಾಗಿಯಾಗುವುದರಿಂದ ನಮ್ಮ ಶಾಲೆಗಳು ಪೂರ್ಣವಾಗಿ ಅಭಿವೃದ್ಧಿಯಾಗಲು ಕಾರಣವಾಗಲಿದೆ ಎಂದರು. ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಶಿಕ್ಷಣ ಸುಧಾರಣಾ ಶಿಫಾರಸ್ಸುಗಳ ಪುಸ್ತಿಕೆ ಬಿಡುಗಡೆ ಮಾಡಿದರು. 

ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಭಾಗವಹಿಸಿದ್ದರು. ಸ್ಥಳೀಯ ವಿಧಾಸಭಾ ಸದಸ್ಯ ರಿಝ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಕೆ.ಟಿ. ಶ್ರೀಕಂಠೇಗೌಡ, ಹನುಮಂತ್ ಆರ್. ನಿರಾಣಿ, ಸಮಗ್ರ ಶಿಕ್ಷಣ  ಕರ್ನಾಟಕ  ರಾಜ್ಯ ಯೋಜನಾಧಿಕಾರಿ ದೀಪಾ ಚೋಳನ್, ಶಿಕ್ಷಣ ಇಲಾಖೆ ಅಧಿಕಾರಿಗಳು  ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್ ಸ್ವಾಗತಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್ ವಂದಿಸಿದರು. ಮಧ್ಯಾಹ್ನ ಉಪಹಾರ ಯೋಜನೆ  ಸಹಾಯಕ ನಿರ್ದೇಶಕಿ ಲೀಲಾವತಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X