Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯಾದ್ಯಂತ ಅಂತರ್ಜಲ ವೃದ್ಧಿಸಲು...

ರಾಜ್ಯಾದ್ಯಂತ ಅಂತರ್ಜಲ ವೃದ್ಧಿಸಲು ಯೋಜನೆ: ಸಚಿವ ಮಾಧುಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ25 Nov 2020 7:37 PM IST
share
ರಾಜ್ಯಾದ್ಯಂತ ಅಂತರ್ಜಲ ವೃದ್ಧಿಸಲು ಯೋಜನೆ: ಸಚಿವ ಮಾಧುಸ್ವಾಮಿ

ಉಡುಪಿ, ನ. 25: ರಾಜ್ಯಾದ್ಯಂತ ಅಂರ್ತಜಲವನ್ನು ವೃದ್ಧಿಸುವ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆ ಮೂಲಕ ಅನೇಕ ಯೋಜನೆಗಳನ್ನು ರೂಪಿಸಿ, ಕೃಷಿ ಮತ್ತು ಕುಡಿಯುವ ನೀರಿನ ಬಳಕೆಗೆ ಆದ್ಯತೆ ನೀಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದ ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಮಂಗಳವಾರ ಬೈಂದೂರಿನ ಪಡುವರಿಯಲ್ಲಿ 35 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತಿದ್ದರು.

ಕರಾವಳಿ ಜಿಲ್ಲೆಗಳಲ್ಲಿ ಕೃಷಿ ಮತ್ತು ಕುಡಿಯುವ ನೀರು ಉದ್ದೇಶಕ್ಕಾಗಿ 3986 ಕೋಟಿ ರೂ ವೆಚ್ಚದಲ್ಲಿ 1348 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲು ಮಾಸ್ಟರ್ ಪ್ಲಾನ್ ಯೋಜನೆಯನ್ನು ರೂಪಿಸಿದ್ದು, ದಕ್ಷಿಣ ಕನ್ನಡದಲ್ಲಿ 446, ಉಡುಪಿಯಲ್ಲಿ 424, ಉತ್ತರ ಕನ್ನಡದಲ್ಲಿ 466 ಹಾಗೂ ಕೊಡಗು ಜಿಲ್ಲೆಯಲ್ಲಿ 12 ಕಿಂಡಿ ಅಣೆಕಟ್ಟು ಕಾಮಗಾರಿಗಳನ್ನು 5 ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದರು.

ಕಿಂಡಿ ಅಣೆಕಟ್ಟು ಮೂಲಕ ನೀರನ್ನು ಸಂಗ್ರಹಿಸಿ, ಕುಡಿಯುವ ನೀರಿನ ಬಳಕೆಗೆ ಮತ್ತು ರೈತರ ಕೃಷಿ ಬಳಕೆಗೆ ಬಳಸಲಾಗುವುದು ಎಂದ ಅವರು, ಕಿಂಡಿ ಆಣೆಕಟ್ಟು ಗಳ ಹಲಗೆಗಳ ನಿರ್ವಹಣೆಗೆ 4 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾ ಗಿದ್ದು, ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಕಿಂಡಿಅಣೆಕಟ್ಟು ನಿರ್ಮಾಣದಿಂದ ಸಂಗ್ರಹಗೊಳ್ಳುವ ನೀರಿನಲ್ಲಿ ಮೀನುಗಾರಿಕೆ ಸೇರಿದಂತೆ ಸೀಗಡಿ ಕೃಷಿಯನ್ನು ಕೈಗೊಳ್ಳಲು ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದರು.

ಬಯಲು ಸೀಮೆಯ ಪ್ರದೇಶಕ್ಕೆ ನೀರನ್ನು ಒದಗಿಸುವ ಉದ್ದೇಶದಿಂದ 24 ಸಾವಿರ ಕೋಟಿ ವ್ಯಯಿಸಿ ಎತ್ತಿನಹೊಳೆ ಯೋಜನೆಯಡಿ 24 ಟಿಎಂಸಿ ನೀರನ್ನು ಕೊಂಡೊಯ್ಯಲು ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಆದರೆ ಕರಾವಳಿ ಭಾಗದಲ್ಲಿ ಒಂದು ಅಥವಾ 2 ಕೋಟಿ ರೂ ವೆಚ್ಚದಲ್ಲಿ ಪಶ್ಚಿಮಾ ಭಿಮುಖವಾಗಿ ಹರಿಯುವ ನದಿಗಳಿಗೆ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವುದರಿಂದ 1ರಿಂದ 2 ಟಿಎಂಸಿ ನೀರು ನಿಂತು, ಈ ಭಾಗದ ಜನರಿಗೆ ಕುಡಿಯುವ ನೀರು, ಕೃಷಿಗೆ ಅನುಕೂಲ ವಾಗುವುದರ ಜೊತೆಗೆ ಜನರು ಸೇತುವೆಯನ್ನು ಬಳಸಿ ಸುತ್ತುವರಿದು ಸಂಚರಿ ಸುವ ಕಷ್ಟ ತಪ್ಪುತ್ತದೆ ಎಂದರು.

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಜಲಜೀವನ್ ಮಿಷನ್ ಯೋಜನಯಡಿ ಬೈಂದೂರು ತಾಲೂಕಿನ ಪ್ರತೀ ಮನೆಗೆ ಕುಡಿ ಯುವ ನೀರು ನೀಡುವ ಉದ್ದೇಶ ಹೊಂದಲಾಗಿದೆ. ಈ ಭಾಗದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ದಿ ಪಡಿಸಲು ಯೋಜನೆ ರೂಪಿಸಲಾಗುವುದು ಮತ್ತು ಬೈಂದೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಮಾತನಾಡಿ, ಬೈಂದೂರು ತಾಲೂಕಿನಲ್ಲಿ 5 ನದಿಗಳು ಹರಿದರೂ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಯಿದೆ. ಇದನ್ನು ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ. ಸುಮಾರು 50 ವರ್ಷಗಳ ಬೇಡಿಕೆ ಯಾದ ಈ ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಕುಡಿಯುವ ನೀರು ಹಾಗೂ ಕೃಷಿಗೆ ಅನುಕೂಲವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಸ್ಥಳೀಯ ಜಿಪಂ ಸದಸ್ಯರಾದ ಬಾಬು ಶೆಟ್ಟಿ, ಸುರೇಶ್ ಬಟವಾಡೆ, ಶಂಕರ ಪೂಜಾರಿ, ಕುಂದಾಪುರ ಉಪವಿಬಾಗಾಧಿಕಾರಿ ರಾಜು, ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X