Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ಯಾಂಪ್ಕೋ ಆನ್ ವೀಲ್‌ಗೆ ಜನವರಿಯಿಂದ...

ಕ್ಯಾಂಪ್ಕೋ ಆನ್ ವೀಲ್‌ಗೆ ಜನವರಿಯಿಂದ ಅಧಿಕೃತ ಚಾಲನೆ: ಎಸ್.ಆರ್. ಸತೀಶ್ಚಂದ್ರ

ಕೃಷಿಕನ ಮನೆಗೆ ತೆರಳಿ ಅಡಿಕೆ ಖರೀದಿ ಯೋಜನೆ

ವಾರ್ತಾಭಾರತಿವಾರ್ತಾಭಾರತಿ26 Nov 2020 3:18 PM IST
share
ಕ್ಯಾಂಪ್ಕೋ ಆನ್ ವೀಲ್‌ಗೆ ಜನವರಿಯಿಂದ ಅಧಿಕೃತ ಚಾಲನೆ: ಎಸ್.ಆರ್. ಸತೀಶ್ಚಂದ್ರ

ಮಂಗಳೂರು, ನ.26: ನೇರವಾಗಿ ಕೃಷಿಕನ ಮನೆಗೆ ಹೋಗಿ ಅಡಿಕೆ ಖರೀದಿ ಮಾಡುವ ‘ಕ್ಯಾಂಪ್ಕೋ ಆನ್ ವೀಲ್’ ಯೋಜನೆ ಜನವರಿಯಿಂದ ಅಧಿಕೃತವಾಗಿ ಜಾರಿಗೊಳಿಸಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ಮಾಹಿತಿ ನೀಡಿದ ಅವರು, ಪುತ್ತೂರಿನಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಈ ಯೋಜನೆ ಆರಂಭಿಸಲಾಗಿದೆ ಎಂದರು. ಕ್ಯಾಂಪ್ಕೋ ಸದಸ್ಯರಲ್ಲಿ ಅನೇಕರು ಹಿರಿಯ ನಾಗರಿಕರು. ಅವರಿಗೆ ಅಡಿಕೆ ಸುಲಿದು ಪರಿಷ್ಕರಿಸಿದ ನಂತರ ಕ್ಯಾಂಪ್ಕೋ ಶಾಖೆಗಳಿಗೆ ಒಯ್ದು ಮಾರಾಟಕ್ಕೆ ಕಷ್ಟವಾಗುತ್ತಿದೆ. ಕಾರ್ಮಿಕರು ಸಮಯಕ್ಕೆ ಒದಗಿಸುವುದು ಕೂಡಾ ಕಡಿಮೆಯಾಗಿರುವುದನ್ನು ಗಮನಿಸಿ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದರಿಂದ ಕ್ಯಾಂಪ್ಕೋ ಮತ್ತು ಸದಸ್ಯರ ನಡುವೆ ಬಾಂಧವ್ಯ ವೃದ್ಧಿ ಆಗುವ ಜತೆಗೆ ಸದಸ್ಯರ ಸಾಗಾಟದ ಶ್ರಮ ಕಡಿಮೆಯಾಗಲಿದ್ದು, ಖಾಸಗಿಯವರ ಮುಷ್ಟಿಯಿಂದ ಸದಸ್ಯರನ್ನು ರಕ್ಷಿಸುವ ಹೊಣೆಗಾರಿಕೆಯೂ ಈಡೇರಲಿದೆ ಎಂದು ಅವರು ಹೇಳಿದರು.

2019-20ನೇ ಸಾಲಿನಲ್ಲಿ ಕಾಂಪ್ಕೋ 1,848 ಕೋಟಿ ರೂ.ಗಳ ವಹಿವಾಟು ನಡೆಸಿದ್ದು, 32.10 ಕೋಟಿ ರೂ.ಗಳ ನಿವ್ವಳ ಲಾಭ ಗಳಿಸಿದೆ. ಕೊರೋನ ಹಿನ್ನೆಲೆಯಲ್ಲಿ ಆಗಸ್ಟ್‌ನಲ್ಲಿ ನಡೆಯಬೇಕಾಗಿದ್ದ ಸರ್ವ ಸದಸ್ಯರ ಮಹಾಸಭೆ ಡಿಸೆಂಬರ್ 13ರಂದು ನಿಗದಿಪಡಿಸಲಾಗಿದೆ ಎಂದು ಎಸ್.ಆರ್. ಸತೀಶ್ಚಂದ್ರ ಹೇಳಿದರು.

ಗ್ರಾಹಕರಿಗೆ ಕ್ಯಾಂಪ್ಕೋದ ಎಲ್ಲ ರೀತಿಯ ಚಾಕಲೇಟ್‌ಗಳನ್ನು ಪರಿಚಯಿಸುವ ಮತ್ತು ಸುಲಭವಾಗಿಸುವ ದೃಷ್ಟಿಯಿಂದ ಬೆಂಗಳೂರು ಮತ್ತು ಪುತ್ತೂರಿನಲ್ಲಿ ವಿಶೇಷ ಚಾಕಲೇಟು ಕಿಯೋಸ್ಕ್‌ಗಳು ಕಾರ್ಯಪ್ರವೃತ್ತವಾಗಿವೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸ್ಪೈಸ್ ಟೋಫಿ ಎಂಬ ಹೊಸ ಚಾಕಲೇಟು ಉತ್ಪನ್ನ ಮಾರುಕಟ್ಟೆಗೆ ಪರಿಚಯಿಸಲಾಗಿದ್ದು, ಉತ್ತಮ ಬೇಡಿಕೆ ಇದೆ. ಮಾಣಿ- ಮೈಸೂರು ಹೆದ್ದಾರಿಯ ಕಾವು ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಗೋದಾಮು ಪೂರ್ಣ ಪ್ರಮಾಣದ ಕಾಳು ಮೆಣಸು ಸಂಸ್ಕರಣಾ ಘಟಕವನ್ನು ಹೊಂದಲಿದ್ದು, ಇದು ಫೆಬ್ರವರಿಯೊಳಗೆ ಲೋಕಾರ್ಪಣೆಗೊಳ್ಳಲಿದೆ ಎಂದವರು ಮಾಹಿತಿ ನೀಡಿದರು.

ರೈತರ ಉತ್ಪನ್ನಗಳ ದಾಸ್ತಾನಿಗಾಗಿ ಸಾಕಷ್ಟು ಸ್ಥಳಾವಕಾಶ ಕಲ್ಪಿಸುವ ದೃಷ್ಟಿಯಂದ ಬೈಕಂಪಾಡಿ, ಬೆಳ್ತಂಗಡಿ ಹಾಗೂ ಕೇರಳದ ತ್ರಿಶೂರಿನಲ್ಲಿ ಗೋದಾಮು ನಿರ್ಮಿಸಲಾಗಿದ್ದು, ಸಾಗರದಲ್ಲಿ ಗೋದಾಮು ನಿರ್ಮಾಣ ಹಂತದಲ್ಲಿದೆ. ಪ್ರಸಕ್ತ ಸಾಲಿನಲ್ಲಿ ಸಂಸ್ಥೆಯು 1,430.43 ಕೋಟಿ ರೂ. ಮೌಲ್ಯದ 48,294.93 ಮೆ. ಟನ್ ಅಡಿಕೆ, 19.70 ಕೋಟಿ ರೂ. ಮೌಲ್ಯದ 3,534.59 ಮೆ. ಟನ್ ಕೊಕ್ಕೋ ಹಸಿ ಬೀಜ ಮತ್ತು 71.69 ಕೋಟಿ ರೂ. ಮೌಲ್ಯದ 3,441.36 ಮೆ. ಟನ್ ಒಣಬೀಜ, 23.37 ಕೋಟಿ ರೂ. ಮೌಲ್ಯದ 1822.95 ಮೆ. ಟನ್ ರಬ್ಬರ್, 37.77 ಕೋಟಿ ರೂ. ಮೌಲ್ಯದ 1164.46 ಮೆ. ಟನ್ ಕಾಳುಮೆಣಸು ಖರೀದಿಸಿದೆ. ಇದೇ ವೇಳೆ ಸಂಸ್ಥೆಯು ತನ್ನ 34 ಸದಸ್ಯ ಬೆಳೆಗಾರರಿಗೆ ವಿವಿಧ ಚಿಕಿತ್ಸಾ ವೆಚ್ಚಗಳಿಗಾಗಿ ಆರ್ಥಿಕ ಸಹಾಯ ನೀಡಿದೆ ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ವ್ಯವಸ್ಥಾಪಕ ನಿರ್ದೇಶಕ (ಪ್ರಭಾರ) ಎಚ್.ಎಂ. ಕೃಷ್ಣ ಕುಮಾರ್, ಕಿಶೋರ್ ಕೊಡ್ಗಿ, ರೇಷ್ಮಾ ಮಲ್ಯ ಮೊದಲಾದವರು ಉಪಸ್ಥಿತರಿದ್ದರು.


ಅಮೆಝಾನ್‌ನಲ್ಲೂ ಸಿಗಲಿದೆ ಕ್ಯಾಂಪ್ಕೋ ಅಡಿಕೆ, ಕಾಳು ಮೆಣಸು!

ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಹಾಗೂ ಕಾಳುಮೆಣಸನ್ನು ಶೀಘ್ರದಲ್ಲೇ ‘ಅಮೆಝಾನ್’ ಆನ್‌ಲೈನ್ ಶಾಪಿಂಗ್ ವೆಬ್‌ಸೈಟ್ ಮೂಲಕ ಮಾರಾಟ ಮಾಡಲಿದೆ. ಈಗಾಗಲೇ ಕ್ಯಾಂಪ್ಕೋ ಚಾಕಲೇಟ್ ಅಮೆಝಾನ್ ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಉತ್ತಮ ಬೇಡಿಕೆ ವ್ಯಕ್ತವಾಗಿದೆ. ಇದೀಗ ಅಡಿಕೆ ಹಾಗೂ ಕಾಳು ಮೆಣಸು ಕೂಡಾ ಗ್ರಾಹಕ ಪ್ಯಾಕೇಟ್‌ನಲ್ಲಿ ಅಮೆಝಾನ್‌ನಲ್ಲಿ ಒದಗಿಸಲಾಗುವುದು ಎಂದು ಎಸ್.ಆರ್. ಸತೀಶ್ಚಂದ್ರ ತಿಳಿಸಿದರು.

ಕೊರೋನ ನಡುವೆಯೂ ಅಡಿಕೆಗೆ ಉತ್ತಮ ಬೆಲೆ
ಕಳೆದ ಮಾರ್ಚ್‌ನಲ್ಲಿ ಕೆಜಿಗೆ 267 ರೂ.ಗಳಿದ್ದ ಅಡಿಕೆ ದರ ಎಪ್ರಿಲ್ ಮೊದಲ ವಾರದಿಂದ 150 ರೂ.ನಿಂದ 200 ರೂ.ಗೆ ಇಳಿಕೆಯಾಗಿತ್ತು. ಇದೀಗ ಅಡಿಕೆ ಧಾರಣೆ 400 ರೂ. ಆಸುಪಾಸಿನಲ್ಲಿದ್ದು, ಅಡಿಕೆ ಹಾಗೂ ಕ್ಯಾಂಪ್ಕೋ ಇತಿಹಾಸದಲ್ಲೇ ದೀರ್ಘ ಸಮಯದಿಂದ ಈ ಧಾರಣೆ ಇರುವುದು ಅಡಿಕೆ ಬೆಳೆಗಾರರಿಗೆ ಪೂರಕವಾಗಿದೆ ಎಂದು ಎಸ್.ಆರ್. ಸತೀಶ್ಚಂದ್ರ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X