Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೊಕ್ಕೊಟ್ಟು: ಅಖಿಲ ಭಾರತ ಮುಷ್ಕರದ...

ತೊಕ್ಕೊಟ್ಟು: ಅಖಿಲ ಭಾರತ ಮುಷ್ಕರದ ಅಂಗವಾಗಿ ಪ್ರತಿಭಟನಾ ಸಭೆ

ವಾರ್ತಾಭಾರತಿವಾರ್ತಾಭಾರತಿ26 Nov 2020 8:52 PM IST
share
ತೊಕ್ಕೊಟ್ಟು: ಅಖಿಲ ಭಾರತ ಮುಷ್ಕರದ ಅಂಗವಾಗಿ ಪ್ರತಿಭಟನಾ ಸಭೆ

ತೊಕ್ಕೊಟ್ಟು. ನ,2: ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಇಂದು (ನವೆಂಬರ್26) ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟ (JCTU)ದ ನೇತೃತ್ವದಲ್ಲಿ ಕರೆ ನೀಡಿದ್ದ ಅಖಿಲ ಭಾರತ ಮಹಾಮುಷ್ಕರದ ಭಾಗವಾಗಿ ತೊಕ್ಕೊಟ್ಟು ಒಳಪೇಟೆ ಅಂಬೇಡ್ಕರ್ ಮೈದಾನದ ಮುಂಭಾಗದಿಂದ ಮೆರವಣಿಗೆ ಹೊರಟ ಸಿಐಟಿಯು, DYFI, CWFI, ಕೋಟೆಕಾರ್ ಸರ್ಕಲ್ ಬೀಡಿ ಲೇಬರ್ ಯೂನಿಯನ್, ಜನವಾದಿ ಮಹಿಳಾ ಸಂಘಟನೆ, ಬಿಸಿಯೂಟ ನೌಕರರ ಸಂಘ, ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಕಾರ್ಯಕರ್ತರು ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಸಭೆ ಸೇರಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಿದರು. 

ಪ್ರತಿಭಟನಾಕರನ್ನುದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಸಾಲಿಯಾನ್ ಕೋವಿಡ್ ಮೆರೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಜನವಿರೋಧಿ ಮಸೂದೆಗಳನ್ನು ಮಂಡಿಸಿವೆ. ಇವು ಕೇವಲ ಕಾರ್ಪೊರೇಟ್ ಕಂಪೆನಿಗಳ ಹಿತಕಾಯುವ ಉದ್ದೇಶದಿಂದ ಮಂಡಿಸಲಾಗಿದ್ದು ಇವು ದುಡಿಯುವ ವರ್ಗದ ಜನರ ಪಾಲಿಗೆ ಮರಣಶಾಸನವಾಗಲಿದೆ ಎಂದರು. 

ಸಭೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆ.ಸಿ.ರೋಡ್, ದ.ಕ. ಜಿಲ್ಲೆಯ ಅಭಿವೃದ್ದಿಯ ಹರಿಕಾರರಾಗಿದ್ದ ಉಳ್ಳಾಲ್ ಶ್ರೀನಿವಾಸ್ ಮಲ್ಯ ಅವರ ಪರಿಶ್ರಮದಿಂದ ನಿರ್ಮಾಣವಾದ ವಿಮಾನ ನಿಲ್ದಾಣವನ್ನು ಮೋದಿ ಸರ್ಕಾರ ಅದಾನಿಗೆ ಕೊಡುವ ಮೂಲಕ ಜಿಲ್ಲೆಯ ಜನರ ಅಸ್ಮಿತೆಗೆ ಧಕ್ಕೆ ತಂದಿದೆ. ಇನ್ನು ಜಿಲ್ಲೆಯ ಕೆಲ ಪಕ್ಷಗಳು ವಿಮಾನ ನಿಲ್ದಾಣದಕ್ಕೆ ಕೋಟಿ ಚೆನ್ನಯ್ಯ, ತುಳುನಾಡು, ರಾಣಿ ಅಬ್ಬಕ್ಕ ಹೆಸರಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಕೇವಲ ಜಿಲ್ಲೆಯ ಮಹಾಪುರುಷರ ಹೆಸರಿಟ್ಟರೆ ಸಾಲದು. ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಯಿಂದ ವಾಪಾಸ್ಸು ಪಡೆದು ಜಿಲ್ಲೆಯ ಮಹಾಪುರುಷರ ಹೆಸರು ನಾಮಕರಣ ಮಾಡಬೇಕೆಂದು ಒತ್ತಾಯಿಸಿದರು. 

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಮುಖಂಡ ಜಯಂತ್ ನಾಯ್ಕ್, ಪದ್ಮಾವತಿ ಶೆಟ್ಟಿ, ಡಿವೈಎಫ್ಐ ಜಿಲ್ಲಾ ಉಪಾಧ್ಯಕ್ಷ ರಫೀಕ್ ಹರೇಕಳ, ಉಳ್ಳಾಲ ವಲಯ ಸಮಿತಿಯ ಕಾರ್ಯದರ್ಶಿ ಸುನಿಲ್ ತೇವುಲ, ಪದಾಧಿಕಾರಿಗಳಾದ ರಝಾಕ್ ಮೊಂಟೆಪದವು, ಸಂಕೇತ್ ಕಂಪ, ಕಾರ್ತಿಕ್ ಕುತ್ತಾರ್, ರಝಾಕ್ ಮುಡಿಪು, ನವಾಜ್ ದೇರಳಕಟ್ಟೆ, ಅಶ್ರಫ್ ಹರೇಕಳ, ಸಿಪಿಐಎಂ ಮುಖಂಡರಾದ ಮಹಾಬಲ ದೆಪ್ಪಳಿಮಾರ್, ಇಬ್ರಾಹಿಂ ಮದಕ, ದಲಿತ ಹಕ್ಕುಗಳ ಸಮಿತಿಯ ನಾರಾಯಣ ತಲಪಾಡಿ, ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಜಗದೀಶ್ ನಾಯ್ಕ್ ದೇರಳಕಟ್ಟೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X