Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡಿಗರ ಸ್ವಾಭಿಮಾನ ಕೆಣಕದಿರಿ:...

ಕನ್ನಡಿಗರ ಸ್ವಾಭಿಮಾನ ಕೆಣಕದಿರಿ: ಐಐಎಸ್ಸಿ ವಿರುದ್ಧ ಟಿ.ಎಸ್.ನಾಗಾಭರಣ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ26 Nov 2020 11:44 PM IST
share
ಕನ್ನಡಿಗರ ಸ್ವಾಭಿಮಾನ ಕೆಣಕದಿರಿ: ಐಐಎಸ್ಸಿ ವಿರುದ್ಧ ಟಿ.ಎಸ್.ನಾಗಾಭರಣ ಆಕ್ರೋಶ

ಬೆಂಗಳೂರು, ನ.26: ‘ಕರ್ನಾಟಕದ ಭೂಮಿ, ನೀರು, ಜಾಗ ಬಳಸಿಕೊಂಡು ಎತ್ತರಕ್ಕೆ ಬೆಳೆದಿರುವ ಭಾರತೀಯ ವಿಜ್ಞಾನ ಸಂಸ್ಥೆ, ನೇಮಕಾತಿ ವಿಷಯದಲ್ಲಿ ಕನ್ನಡಿಗರನ್ನು ಕಡೆಗಣಿಸುತ್ತಿರುವುದು ಸರಿಯಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆಯ ಜಾಲ ಸಂಪರ್ಕ ಸಭೆ ನಡೆಸಿದ ಅವರು, ಕನ್ನಡ ಅನುಷ್ಟಾನದ ವಿಷಯದಲ್ಲಿ ಕೇವಲ ಕಣ್ಣೊರೆಸುವ ತಂತ್ರದಂತೆ ಬಳಕೆಯಾಗುತ್ತಿದ್ದು, ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿದ್ದೀರಿ. ಪರಿಣಾಮ ನೆಟ್ಟಗಿರಲ್ಲ ಎಂದು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ವಿರುದ್ಧ ಗುಡುಗಿದರು.

ರಾಜ್ಯ ಸರಕಾರ ನಿಮ್ಮ ಸಂಸ್ಥೆಗೆ ಸಾವಿರಾರು ಎಕರೆ ಜಾಗ ನೀಡಿದೆ. 111 ವರ್ಷ ಇತಿಹಾಸ ಹೊಂದಿರುವ ಸಂಸ್ಥೆಗೆ ಈ ಮೊದಲು 440 ಎಕರೆ ಜಾಗ ನೀಡಿದ್ದು, ಇತ್ತೀಚೆಗೆ ಶತಮಾನೋತ್ಸದ ಸಂದರ್ಭದಲ್ಲಿ ಚಿತ್ರದುರ್ಗ ಸಮೀಪ 1500 ಎಕರೆ ಭೂಮಿಯನ್ನು ನೀಡಿದೆ. ಇಷ್ಟು ದೊಡ್ಡ ಮಟ್ಟದ ಜಾಗ ನೀಡಿರುವುದು ಕನ್ನಡಿಗರನ್ನು ಕಡೆಗಣಿಸಲಿ ಎಂದಲ್ಲ. ಈ ನೆಲದ ಮಕ್ಕಳಿಗೆ ಉದ್ಯೋಗ ದೊರೆಯಲಿ. ಆ ಮೂಲಕ ಅವರ ಬದುಕು ಹಸನಾಗಲಿ ಎಂಬ ಸದುದ್ದೇಶದಿಂದ ಎಂದು ಅವರು ಹೇಳಿದರು.

ಇದನ್ನು ಮನದಲ್ಲಿಟ್ಟುಕೊಂಡು ಈ ನೆಲದ ನೀತಿ, ಕಾನೂನನ್ನು ಪಾಲಿಸುವುದು ಅಗತ್ಯವಾಗಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್ ಅವರನ್ನು ನಾಗಾಭರಣ ತರಾಟೆಗೆ ತೆಗೆದುಕೊಂಡರು.

ಕೋವಿಡ್-19 ಸಂದರ್ಭದಲ್ಲಿ ನಾಗರಿಕರಿಗೆ ಅರಿವು ಮೂಡಿಸಬೇಕಿದ್ದ ಭಾರತೀಯ ವಿಜ್ಞಾನ ಸಂಸ್ಥೆ, ಕೋವಿಡ್ ಕುರಿತು ಆಂಗ್ಲಭಾಷೆಯಲ್ಲಿ ಸುತ್ತೋಲೆ ಹೊರಡಿಸಿದ್ದೀರಿ. ಇದು ಯಾರಿಗಾಗಿ? ಅದರ ಬದಲಿಗೆ ಕನ್ನಡದಲ್ಲಿ ಸುತ್ತೋಲೆ ಹೊರಡಿಸಿದ್ದರೆ, ಜನರು ಜಾಗೃತರಾಗುತ್ತಿದ್ದರು. ಸಾವು-ನೋವುಗಳ ಸಂಖ್ಯೆ ಕಡಿಮೆಯಾಗುತ್ತಿತ್ತು. ನೀವು ಆ ಕೆಲಸ ಮಾಡದೆ, ಮಾಡುವ ತಪ್ಪುಗಳಿಗೆಲ್ಲ ಸಬೂಬು ಹೇಳಿಕೊಂಡು ಕಾಲಕಳೆಯುತ್ತಿದ್ದೀರಿ. ಇದು ಕನ್ನಡ ಕಾಯಕ ವರ್ಷ. ಹಾಗಾಗಿ ಇನ್ನು ಸಬೂಬು ಕೇಳಲು ಸಿದ್ಧರಿಲ್ಲ, ಬದಲಾಗಿ ಬದ್ಧತೆಯಿಂದ ಕಾರ್ಯಾನುಷ್ಟಾನ ಮಾಡುವಂತೆ ಅವರು ಸೂಚಿಸಿದರು.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬುದನ್ನು ಸಾಬೀತು ಮಾಡುವ ನಿಟ್ಟಿನಲ್ಲಿ ಬದ್ಧತೆಯಿಂದ ಕೆಲಸ ಮಾಡುವಂತೆ ತಿಳಿಸಿದ ನಾಗಾಭರಣ, ನೇಮಕಾತಿ ಸಂದರ್ಭದಲ್ಲಿ ಗ್ರಾಮೀಣರು ಆಯ್ಕೆಯಾಗುವ ನಿಟ್ಟಿನಲ್ಲಿ ತರಬೇತಿ ನೀಡುವಂತೆ ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳಿಧರ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಸರಕಾರ ನಿಮ್ಮ ಸಂಸ್ಥೆಗೆ ನೀಡಿರುವ ಭೂಮಿಯ ಇಂದಿನ ಮಾರುಕಟ್ಟೆ ಬೆಲೆ ಬಹುದೊಡ್ಡ ಮಟ್ಟದ್ದು, ಇದನ್ನರಿತು ಸರೋಜಿನಿ ಮಹಿಷಿ ವರದಿಯನ್ವಯ ಸಿ ಮತ್ತು ಡಿ ವೃಂದ ನೇಮಕಾತಿಯಲ್ಲಿ ಶೇ.100ರಷ್ಟು ಕನ್ನಡಿಗರನ್ನೇ ನೇಮಕಾತಿ ಮಾಡಿಕೊಳ್ಳಬೇಕು ಎಂದರು.

ಮುಖ್ಯಮಂತ್ರಿಯ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ ಮಾತನಾಡಿ, ರಾಜ್ಯ ಸರಕಾರದ ನಿಯಮಾನುಸಾರ ಜಾಲತಾಣವನ್ನು ನವೀಕರಿಸುವಂತೆ ಸೂಚಿಸಿದರು. ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರೋಹಿತ್ ಚಕ್ರತೀರ್ಥ, ಭಾರತೀಯ ವಿಜ್ಞಾನ ಸಂಸ್ಥೆಯ ರಿಜಿಸ್ಟ್ರಾರ್ ಪ್ರೊ.ಕೆ.ವಿ.ಎಸ್.ಹರಿ, ಉಪ ರಿಜಿಸ್ಟ್ರಾರ್ ವೀರಣ್ಣ ಕಮ್ಮಾರ, ಡೀನ್‍ಗಳಾದ ಪ್ರೊ.ಅನಿಲ್ ಕುಮಾರ್, ಪ್ರೊ.ನರಹರಿ, ಪ್ರೊ.ಅಶೋಕ್ ರಾಯಚೂರು, ಕನ್ನಡ ಸಂಘದ ಪದಾಧಿಕಾರಿಗಳಾದ ಸತೀಶ ಮತ್ತು ಜಗದೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X