Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂದಿನ ಬಜೆಟ್‍ನಲ್ಲಿ ಪೊಲೀಸ್ ಇಲಾಖೆಗೆ...

ಮುಂದಿನ ಬಜೆಟ್‍ನಲ್ಲಿ ಪೊಲೀಸ್ ಇಲಾಖೆಗೆ 100 ಕೋಟಿ ರೂ. ಅನುದಾನ: ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ27 Nov 2020 4:51 PM IST
share
ಮುಂದಿನ ಬಜೆಟ್‍ನಲ್ಲಿ ಪೊಲೀಸ್ ಇಲಾಖೆಗೆ 100 ಕೋಟಿ ರೂ. ಅನುದಾನ: ಸಿಎಂ ಯಡಿಯೂರಪ್ಪ

ಬೆಂಗಳೂರು, ನ.27: ರಾಜ್ಯ ಪೊಲೀಸ್ ಇಲಾಖೆಯ ಆಧುನೀಕರಣಕ್ಕಾಗಿ ಮುಂದಿನ ಬಜೆಟ್‍ನಲ್ಲಿ 100 ಕೋಟಿ ರೂ.ಗಳ ಅನುದಾನ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದರು.

ಶುಕ್ರವಾರ ನಗರದ ಮಡಿವಾಳದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ ಪೊಲೀಸ್ ಸಮುದಾಯ ಭವನ ಹಾಗೂ ನ್ಯಾಯ ವಿಜ್ಞಾನ ಪ್ರಯೋಗಾಲಯ ನಿರ್ದೇಶನಾಲಯದ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಂತ್ರಜ್ಞಾನ ಅಳವಡಿಸಿಕೊಂಡು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಸಲುವಾಗಿ ಇಲಾಖೆಯ ಮುಂದಿನ ಬಜೆಟ್‍ನಲ್ಲಿ 100 ಕೋಟಿ ರೂ.ಗಳ ಅನುದಾನ ನೀಡಲಾಗುವುದು ಎಂದು ಅವರು ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಸೈಬರ್ ಕ್ರೈಂ ವಿಷಯದಲ್ಲಿ ಕರ್ನಾಟಕ ಸರಕಾರ ಹೆಚ್ಚು ಅಭಿವೃದ್ಧಿ ಸಾಧಿಸಿದೆ. ದೇಶದಲ್ಲೇ ಪ್ರಥಮ ಬಾರಿಗೆ ಪೊಲೀಸ್ ಸಹಾಯವಾಣಿ 100ಗೆ ಕರೆ ಮಾಡಿ ಸೈಬರ್ ಕ್ರೈಂನ ದೂರುಗಳನ್ನು ದಾಖಲಿಸುವ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಸೈಬರ್ ಅಪರಾಧಗಳಲ್ಲಿ ಹಣ ಕಳೆದುಕೊಂಡವರು ದೂರವಾಣಿ ಕರೆ ಮಾಡಿದರೆ ಸಾಕು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ತೊಂದರೆಗೊಳಗಾದವರು ಮತ್ತು ಅಪರಾಧ ಮಾಡಿದವರ ಎರಡೂ ಖಾತೆಗಳನ್ನು ಜಪ್ತಿ ಮಾಡುವ ವಿನೂತನ ಪ್ರಯತ್ನವನ್ನು ರಾಜ್ಯ ಪೊಲೀಸರು ಕೈಗೆತ್ತಿಕೊಂಡಿದ್ದಾರೆ ಎಂದು ನುಡಿದರು.

ಇನ್ನು, ಬ್ಯಾಂಕಿಂಗ್ ವಂಚನೆ ಪ್ರಕರಣಗಳಲ್ಲಿ ತೊಂದರೆಗೊಳಗಾದವರು ಕರೆ ಮಾಡಿದ ತಕ್ಷಣ ಅವರ ಖಾತೆ ಅನ್ನು ಜಪ್ತಿ ಮಾಡುವುದು ಮತ್ತು ಅಪರಾಧವನ್ನು ಪತ್ತೆ ಹಚ್ಚಿ ಆತನ ಖಾತೆಯ ಪ್ರಕ್ರಿಯೆ ನಿಲ್ಲಿಸುವ ಪ್ರಯತ್ನ ಮಾಡಲಾಗುತ್ತದೆ. ಇದಕ್ಕಾಗಿ ಆರ್‍ಬಿಐ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ಮುಂದಿನ ಬಜೆಟ್‍ನಲ್ಲಿ 100 ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈವರೆಗೂ ನಾವು ಸಲ್ಲಿಸಿದ ಪ್ರಸ್ತಾವನೆಯನ್ನು ಒಪ್ಪಿಕೊಂಡಿದ್ದಾರೆ. ಆಧುನೀಕರಣದ ಪ್ರಸ್ತಾವನೆಯನ್ನೂ ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ ಸೂದ್ ಮಾತನಾಡಿ, ಅಪರಾಧಗಳು ನಡೆದಾಗ ಪ್ರಯೋಗಾಲಯದ ವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಸೀನ್ ಆಫ್ ಕ್ರೈಂ ಅನ್ನು ಪರಿಶೀಲಿಸುವ ವ್ಯವಸ್ಥೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದಾಗಿ ಬಹಳಷ್ಟು ಅಪರಾಧಗಳನ್ನು ಪತ್ತೆ ಮಾಡಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ, ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X